ಅಬ್ದುಲ್ ರೆಹಮಾನ್ 
ದೇಶ

ರಾಮಮಂದಿರ ಸ್ಫೋಟಿಸಲು ಸಂಚು: ಶಂಕಿತ ಉಗ್ರ ಅಬ್ದುಲ್ ರೆಹಮಾನ್ ಬಂಧಿಸಿದ ಗುಜರಾತ್ ಎಟಿಎಸ್, ಗ್ರನೇಡ್ ವಶ

ಗುಜರಾತ್ ಎಟಿಎಸ್ ನಡೆಸಿದ ಪ್ರಮುಖ ಕಾರ್ಯಾಚರಣೆಯಲ್ಲಿ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದ ಶಂಕಿತ ಉಗ್ರ 19 ವರ್ಷದ ಅಬ್ದುಲ್ ರೆಹಮಾನ್‌ನನ್ನು ಬಂಧಿಸಲಾಗಿದೆ.

ಅಹಮದಾಬಾದ್: ಗುಜರಾತ್ ಎಟಿಎಸ್ ನಡೆಸಿದ ಪ್ರಮುಖ ಕಾರ್ಯಾಚರಣೆಯಲ್ಲಿ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದ ಶಂಕಿತ ಉಗ್ರ 19 ವರ್ಷದ ಅಬ್ದುಲ್ ರೆಹಮಾನ್‌ನನ್ನು ಹರಿಯಾಣದ ಫರಿದಾಬಾದ್ ನಲ್ಲಿ ಬಂಧಿಸಲಾಗಿದೆ. ವಿಚಾರಣೆಯ ಸಮಯದಲ್ಲಿ ಸಂಗ್ರಹಿಸಲಾದ ಗುಪ್ತಚರ ಮಾಹಿತಿಯ ಮೇರೆಗೆ ದಾಳಿ ನಡೆಸಿ ಅಬ್ದುಲ್ ರೆಹಮಾನ್ ನನ್ನು ಬಂಧಿಸಲಾಗಿದೆ. ದಾಳಿ ವೇಳೆ ಪಾಳುಬಿದ್ದ ಮನೆಯೊಂದರಲ್ಲಿ ಎರಡು ಜೀವಂತ ಹ್ಯಾಂಡ್ ಗ್ರೆನೇಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಫರಿದಾಬಾದ್ ಪೊಲೀಸರ ಸಹಾಯದಿಂದ, ಎಟಿಎಸ್ ಸಂಪೂರ್ಣ ಶೋಧ ನಡೆಸಿ, ಸಂಭಾವ್ಯ ಭಯೋತ್ಪಾದಕ ದಾಳಿಯನ್ನು ವಿಫಲಗೊಳಿಸಿದೆ. ಅಬ್ದುಲ್ ರೆಹಮಾನ್‌ನ ಭಯೋತ್ಪಾದಕ ಸಂಪರ್ಕಗಳ ಕುರಿತು ತನಿಖೆ ಮುಂದುವರೆದಿದೆ. ಮೂಲಗಳ ಪ್ರಕಾರ, ಅಯೋಧ್ಯೆಯ ರಾಮಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂದು ಹೇಳಲಾಗುತ್ತಿದೆ.

ಉತ್ತರ ಪ್ರದೇಶದ ಫೈಜಾಬಾದ್‌ನ ಮಿಲ್ಕಿಪುರ ನಿವಾಸಿ ಅಬ್ದುಲ್ ರೆಹಮಾನ್ (19) ಅವರನ್ನು ಫರಿದಾಬಾದ್‌ನಲ್ಲಿ ತಡರಾತ್ರಿ ನಡೆಸಿದ ದಾಳಿಯಲ್ಲಿ ಬಂಧಿಸಲಾಯಿತು. ಕೇಂದ್ರೀಯ ಸಂಸ್ಥೆಯ ಗುಪ್ತಚರ ಮಾಹಿತಿಯ ಮೇರೆಗೆ, ಭದ್ರತಾ ಪಡೆಗಳು ಸೋಹ್ನಾ ರಸ್ತೆಯ ಪಾಲಿ ಪ್ರದೇಶದ ಶಿಥಿಲಗೊಂಡ ಮನೆಯಲ್ಲಿ ಆತನನ್ನು ಪತ್ತೆಹಚ್ಚಿದವು. ನಾಲ್ಕು ಗಂಟೆಗಳ ತೀವ್ರ ಹುಡುಕಾಟದ ನಂತರ, ತಂಡಗಳು ಆತನನ್ನು ವಶಕ್ಕೆ ಪಡೆದವು. ಹರಿಯಾಣ ಬಳಿ ಇಬ್ಬರು ಭಯೋತ್ಪಾದಕರ ಉಪಸ್ಥಿತಿಯನ್ನು ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ, ಅವರಲ್ಲಿ ಒಬ್ಬನನ್ನು 19 ವರ್ಷದ ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ಆತನನ್ನು ಬಂಧಿಸಲಾಗಿದ್ದು ಹರಿಯಾಣದಲ್ಲಿ ಆತನ ವಿರುದ್ಧ ದೂರು ದಾಖಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಗುಜರಾತ್ ಎಟಿಎಸ್ ಮೂಲದ ಪ್ರಕಾರ, ಅಬ್ದುಲ್ ರೆಹಮಾನ್ ಸಾಮಾಜಿಕ ಮಾಧ್ಯಮದ ಮೂಲಕ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ, ಆತನ ಚಲನವಲನಗಳನ್ನು ಪತ್ತೆಹಚ್ಚಲು ಹರಿಯಾಣ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆಯನ್ನು ನಡೆಸಲಾಗಿತ್ತು. ಗುಪ್ತಚರ ಇಲಾಖೆಯು ಅವನ ಭಾಗವಹಿಸುವಿಕೆಯನ್ನು ದೃಢಪಡಿಸಿದ ನಂತರ, ಅವನನ್ನು ವಶಕ್ಕೆ ಪಡೆಯಲಾಯಿತು. ಇದೇ ವೇಳೆ ಅನುಮಾನಾಸ್ಪದ ವೀಡಿಯೊಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ಬಹಿರಂಗಪಡಿಸಿವೆ.

ಅಬ್ದುಲ್ ಹಲವಾರು ದಿನಗಳಿಂದ ಪಾಲಿ ಗ್ರಾಮದಲ್ಲಿ ನಕಲಿ ಗುರುತಿನಡಿಯಲ್ಲಿ ನೆಲೆಸಿದ್ದನು. ನಮ್ಮ ತಂಡ ಆತನಿಂದ ಸ್ಥಳಕ್ಕೆ ತಲುಪುತ್ತಿದ್ದಂತೆ ಆತ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದು ಸುತ್ತುವರೆದು ಬಂಧಿಸಲಾಯಿತು ಎಂದು ಎಟಿಎಸ್ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ

SCROLL FOR NEXT