ಸಾಂದರ್ಭಿಕ ಚಿತ್ರ 
ದೇಶ

ಅನಂತಪುರ ಬಳಿ ಆಟೋ-ಕಾರು ಡಿಕ್ಕಿ: ನಾಲ್ವರು ದುರ್ಮರಣ

ಅಪಘಾತದಲ್ಲಿ ಗಾಯಗೊಂಡಿದ್ದ ಏಳು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಪಡೆಯುತ್ತಿದ್ದ ಇನ್ನಿಬ್ಬರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ ನಾಲ್ಕಕ್ಕೇರಿದೆ. ಇತರರಿಗೆ ತೀವ್ರ ಗಾಯಗಳಾಗಿವೆ.

ಅನಂತಪುರ: ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯ ಕುಂದೇರು ಮಂಡಲದಲ್ಲಿ ಭಾನುವಾರ ನಡೆದಿದೆ. ಕಾರು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದಲ್ಲಿ ಗಾಯಗೊಂಡಿದ್ದ ಏಳು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಪಡೆಯುತ್ತಿದ್ದ ಇನ್ನಿಬ್ಬರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ ನಾಲ್ಕಕ್ಕೇರಿದೆ. ಇತರರಿಗೆ ತೀವ್ರ ಗಾಯಗಳಾಗಿವೆ.

ಅಪಘಾತ ಮಾಹಿತಿ ಪಡೆದ ತಕ್ಷಣ ಸರ್ಕಲ್ ಇನ್ಸ್‌ಪೆಕ್ಟರ್ ರಾಜು ಮತ್ತು ಪೊಲೀಸ್ ತಂಡ ಅಪಘಾತ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಅನಂತಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದರು. ಘಟನೆಯ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಮಹಾಲಯ ಅಮಾವಾಸ್ಯೆಯಂದು ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ