ಗಿರ್ ನಲ್ಲಿ ಪ್ರಧಾನಿ ಮೋದಿ 
ದೇಶ

ಏಷ್ಯಾಟಿಕ್ ಸಿಂಹಗಳ ಗಣತಿ ಘೋಷಿಸಿದ ಪ್ರಧಾನಿ ಮೋದಿ

ಇದೇ ವೇಳೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ಮಾನವ-ವನ್ಯಜೀವಿ ಸಂಘರ್ಷ ನಿರ್ವಹಣೆಗಾಗಿ ಶ್ರೇಷ್ಠತೆಯ ಕೇಂದ್ರ, SACON ಅನ್ನು ಸ್ಥಾಪಿಸುವುದಾಗಿಯೂ ಪ್ರಧಾನಿ ಘೋಷಿಸಿದರು.

ಜುನಾಗಢ: ಈ ವರ್ಷದ ಮೇ ತಿಂಗಳಲ್ಲಿ ಏಷ್ಯಾಟಿಕ್ ಸಿಂಹಗಳ ಗಣತಿ ನಡೆಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಘೋಷಿಸಿದ್ದಾರೆ.

ಇಂದು ವಿಶ್ವ ವನ್ಯಜೀವಿ ದಿನದ ಅಂಗವಾಗಿ ಗುಜರಾತ್‌ನ ಜುನಾಗಢ ಜಿಲ್ಲೆಯ ಸಸಾನ್‌ನಲ್ಲಿ ನಡೆದ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಏಳನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಈ ವರ್ಷದ ಮೇ ತಿಂಗಳಲ್ಲಿ 16ನೇ ಏಷ್ಯಾಟಿಕ್ ಸಿಂಹಗಳ ಗಣತಿ ನಡೆಸುವುದಾಗಿ ತಿಳಿಸಿದರು.

ಇದೇ ವೇಳೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ಮಾನವ-ವನ್ಯಜೀವಿ ಸಂಘರ್ಷ ನಿರ್ವಹಣೆಗಾಗಿ ಶ್ರೇಷ್ಠತೆಯ ಕೇಂದ್ರ, SACON ಅನ್ನು ಸ್ಥಾಪಿಸುವುದಾಗಿಯೂ ಪ್ರಧಾನಿ ಘೋಷಿಸಿದರು ಮತ್ತು ನದಿ ಡಾಲ್ಫಿನ್‌ಗಳ ಕುರಿತು ಪುಸ್ತಕವನ್ನು ಬಿಡುಗಡೆ ಮಾಡಿದರು.

ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಏಳನೇ ಸಭೆಯಲ್ಲಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಮತ್ತು ಇತರ ಸದಸ್ಯರು ಭಾಗವಹಿಸಿದ್ದರು.

ಇದಕ್ಕು ಮುನ್ನ ಪ್ರಧಾನಿ ಮೋದಿ ಅವರು ಗಿರ್ ಅಭಯಾರಣ್ಯದಲ್ಲಿ ಸಿಂಹ ಸಫಾರಿ ನಡೆಸಿದರು. ಬಳಿಕ ಸಫಾರಿಯ ಸಮಯದಲ್ಲಿ ತಾವು ನೋಡಿದ ಸಿಂಹಗಳ ಚಿತ್ರಗಳನ್ನು ಪ್ರಧಾನಿಯವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

IPL 2026: ಖಂಡಿತಾ ಕ್ರಮ ಕೈಗೊಳ್ಳುತ್ತೇವೆ ; RR vs RCB ಪಂದ್ಯದ 'ಭ್ರಷ್ಟಾಚಾರ ವಿರೋಧಿ' ಶಿಷ್ಟಾಚಾರ ಉಲ್ಲಂಘನೆಗೆ BCCI ಖಡಕ್ ಪ್ರತಿಕ್ರಿಯೆ

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

SCROLL FOR NEXT