ಕ್ರಿಶ್ಚಿಯನ್ ಮೈಕೆಲ್‌ 
ದೇಶ

ಅಗಸ್ಟಾವೆಸ್ಟ್‌ಲ್ಯಾಂಡ್ ಹಗರಣ: ಕ್ರಿಶ್ಚಿಯನ್ ಮೈಕೆಲ್‌ಗೆ ಹೈಕೋರ್ಟ್ ಜಾಮೀನು

ಜಾಮೀನು ಕೋರಿ ಬ್ರಿಟಿಷ್ ಪ್ರಜೆ ಕ್ರಿಶ್ಚಿಯನ್ ಮೈಕೆಲ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ಫೆಬ್ರವರಿ 28 ರಂದು ತೀರ್ಪು ಕಾಯ್ದಿರಿಸಿದ್ದರು.

ನವದೆಹಲಿ: ಅಗಸ್ಟಾ ವೆಸ್ಟ್‌ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಹಗರಣದ ಆರೋಪಿ, ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ ಜೇಮ್ಸ್ ಅವರಿಗೆ ದೆಹಲಿ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ.

ಜಾಮೀನು ಕೋರಿ ಬ್ರಿಟಿಷ್ ಪ್ರಜೆ ಕ್ರಿಶ್ಚಿಯನ್ ಮೈಕೆಲ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ಫೆಬ್ರವರಿ 28 ರಂದು ತೀರ್ಪು ಕಾಯ್ದಿರಿಸಿದ್ದರು. ಇಂದು ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ.

ED ಪರ ವಕೀಲರು ಮೈಕೆಲ್ ಜಾಮೀನಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು ಮತ್ತು ಜಾಮೀನು ನೀಡಿದರೆ ಆರೋಪಿ ತನ್ನ ದೇಶಕ್ಕೆ ತೆರಳುವ ಅಪಾಯವಿದೆ ಎಂದು ಹೇಳಿದರು.

ಆದರೆ ಮೈಕೆಲ್ ಈಗಾಗಲೇ ಸಾಕಷ್ಟು ಸಮಯವನ್ನು ಕಸ್ಟಡಿಯಲ್ಲಿ ಕಳೆದಿದ್ದಾರೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಗರಿಷ್ಠ ಏಳು ವರ್ಷ ಜೈಲು ಶಿಕ್ಷೆ ವಿಧಿಸಬಹುದು. ಆದರೆ ಆರೋಪಿ ಈಗಾಗಲೇ 6 ವರ್ಷಕ್ಕೂ ಹೆಚ್ಚು ಕಾಲ ಜೈಲಿನಲ್ಲಿದ್ದಾರೆ. ಹಾಗಾಗಿ ಜಾಮೀನು ನೀಡಬೇಕು ಎಂದು ಮನವಿ ಮಾಡಿದರು.

ಇಟಾಲಿಯನ್ ಕಂಪನಿ ಆಗಸ್ಟಾವೆಸ್ಟ್‌ಲ್ಯಾಂಡ್‌ನಿಂದ 12 ವಿವಿಐಪಿ ಹೆಲಿಕಾಪ್ಟರ್‌ಗಳ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂದು ತನಿಖಾ ಸಂಸ್ಥೆಗಳು ಆರೋಪಿಸಿದ್ದವು. ಈ ಹಗರಣದ ಪ್ರಮುಖ ಆರೋಪಿ ಕ್ರಿಶ್ಚಿಯನ್ ಮೈಕೆಲ್‌ ಅವರನ್ನು ಡಿಸೆಂಬರ್ 4, 2018 ರಂದು ದುಬೈನಲ್ಲಿ ಬಂಧಿಸಿ ಭಾರತಕ್ಕೆ ಕರೆ ತರಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ