ಸಾಂದರ್ಭಿಕ ಚಿತ್ರ 
ದೇಶ

ಜಾರ್ಖಂಡ್‌ನ ಸುಮಾರು 8,000 ಸರ್ಕಾರಿ ಶಾಲೆಗಳಲ್ಲಿ ಒಬ್ಬರೇ ಶಿಕ್ಷಕರು: ಶಿಕ್ಷಣ ಸಚಿವ

ಶಿಕ್ಷಕರ ಬಿಕ್ಕಟ್ಟಿನ ಕುರಿತು ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ರಾಜ್ ಸಿನ್ಹಾ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಸೊರೆನ್, ಈ ಏಕ ಶಿಕ್ಷಕ ಶಾಲೆಗಳಲ್ಲಿ 3.81 ಲಕ್ಷ ವಿದ್ಯಾರ್ಥಿಗಳು ದಾಖಲಾಗಿದ್ದಾರೆ ಎಂದು ಹೇಳಿದರು.

ರಾಂಚಿ: ಜಾರ್ಖಂಡ್‌ನಲ್ಲಿ ಸುಮಾರು 7,930 ಸರ್ಕಾರಿ ಶಾಲೆಗಳು ತಲಾ ಒಬ್ಬ ಶಿಕ್ಷಕರೊಂದಿಗೆ ಕಾರ್ಯನಿರ್ವಹಿಸುತ್ತಿವೆ ಎಂದು ಶಿಕ್ಷಣ ಸಚಿವ ರಾಮದಾಸ್ ಸೊರೆನ್ ಅವರು ಮಂಗಳವಾರ ತಿಳಿಸಿದ್ದಾರೆ.

ಶಿಕ್ಷಕರ ಬಿಕ್ಕಟ್ಟಿನ ಕುರಿತು ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ರಾಜ್ ಸಿನ್ಹಾ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಸೊರೆನ್, ಈ ಏಕ ಶಿಕ್ಷಕ ಶಾಲೆಗಳಲ್ಲಿ 3.81 ಲಕ್ಷ ವಿದ್ಯಾರ್ಥಿಗಳು ದಾಖಲಾಗಿದ್ದಾರೆ ಎಂದು ಹೇಳಿದರು.

103 ಶಾಲೆಗಳು ಯಾವುದೇ ವಿದ್ಯಾರ್ಥಿಗಳಿಲ್ಲದೆ ಕಾರ್ಯನಿರ್ವಹಿಸುತ್ತಿವೆ ಮತ್ತುಅವುಗಳಲ್ಲಿ 17 ಶಿಕ್ಷಕರು ಕೆಲಸ ಮಾಡುತ್ತಿದ್ದಾರೆ ಎಂದು ನಂತರ ಜಾರ್ಖಂಡ್ ಶಿಕ್ಷಣ ಸಚಿವರು ಸದನಕ್ಕೆ ಮಾಹಿತಿ ನೀಡಿದರು.

"ವಿದ್ಯಾರ್ಥಿಗಳನ್ನು ಮರಳಿ ಕರೆತರಲು ನಾವು ಆಯಾ ಪ್ರದೇಶಗಳಲ್ಲಿ 'ಶಾಲಾ ಚಲೋ ಅಭಿಯಾನ'ದ ಮಾದರಿಯಲ್ಲಿ ಅಭಿಯಾನ ನಡೆಸುತ್ತಿದ್ದೇವೆ" ಎಂದು ಅವರು ಹೇಳಿದರು.

26,000 ಸಹಾಯಕ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯ ಹಂತದಲ್ಲಿದೆ ಎಂದು ಸಚಿವರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT