ರಾಮ್ ಗೋಪಾಲ್ ವರ್ಮಾ 
ದೇಶ

ರಾಮ್ ಗೋಪಾಲ್ ವರ್ಮಾ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 21 ರಂದು, ಅಂಧೇರಿಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್(ಪ್ರಥಮ ದರ್ಜೆ) ವೈ ಪಿ ಪೂಜಾರಿ ಅವರು, ರಾಮ್ ಗೋಪಾಲ್ ವರ್ಮಾಗೆ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದ್ದರು.

ಮುಂಬೈ: ಚೆಕ್ ಬೌನ್ಸ್ ಪ್ರಕರಣದಲ್ಲಿ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರ ವಿರುದ್ಧ ಮುಂಬೈನ ಸೆಷನ್ಸ್ ನ್ಯಾಯಾಲಯ ಗುರುವಾರ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ.

ಇದಕ್ಕೂ ಮುನ್ನ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 21 ರಂದು, ಅಂಧೇರಿಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್(ಪ್ರಥಮ ದರ್ಜೆ) ವೈ ಪಿ ಪೂಜಾರಿ ಅವರು, ರಾಮ್ ಗೋಪಾಲ್ ವರ್ಮಾ ದೋಷಿ ಎಂದು ಘೋಷಿಸಿದ್ದರು. ಅಲ್ಲದೆ ಮೂರು ತಿಂಗಳ ಜೈಲು ಶಿಕ್ಷೆಯನ್ನು ಸಹ ವಿಧಿಸಿದ್ದರು.

ಜೈಲು ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಕೋರಿ ರಾಮ್ ಗೋಪಾಲ್ ವರ್ಮಾ ಸಲ್ಲಿಸಿದ್ದ ಅರ್ಜಿಯನ್ನು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಎ ಎ ಕುಲಕರ್ಣಿ ಅವರು ವಜಾಗೊಳಿಸಿದ್ದು, ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದ ನಿರ್ದೇಶಕರ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದ್ದಾರೆ.

ಪ್ರಕರಣದ ವಿಚಾರಣೆಯನ್ನು ಜುಲೈ 28 ಕ್ಕೆ ಮುಂದೂಡಲಾಗಿದೆ.

ದೂರುದಾರರಿಗೆ ರಾಮ್ ಗೋಪಾಲ್ ವರ್ಮಾ ಅವರು 3.75 ಲಕ್ಷ ರೂ. ಪರಿಹಾರ ನೀಡಬೇಕು. ಮೂರು ತಿಂಗಳೊಳಗೆ ಈ ಮೊತ್ತವನ್ನು ಪಾವತಿಸಲು ವಿಫಲವಾದರೆ ಹೆಚ್ಚುವರಿ ಮೂರು ತಿಂಗಳ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ ಎಂದು ಕೋರ್ಟ್ ಆದೇಶದಲ್ಲಿ ತಿಳಿಸಿದೆ.

RGV ಸಂಸ್ಥೆಯ ವಿರುದ್ಧ ʼಶ್ರೀʼ ಎಂಬ ಕಂಪನಿಯು 2018ರಲ್ಲಿ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತೀಯ ನೌಕಾಪಡೆ ಅತಿಥಿ 'ಐರಿಸ್ ದೇನಾ' ಯುದ್ಧನೌಕೆಯನ್ನು ಅಮೆರಿಕ ಹೊಡೆದುರುಳಿಸಿದೆ: ಇರಾನ್

'ಇದು ನನ್ನ ಮನದ ಆಸೆ': ಸಿಎಂ ಹುದ್ದೆ ತೊರೆದು ರಾಜ್ಯಸಭೆ ಪ್ರವೇಶ ಖಚಿತಪಡಿಸಿದ Nitish Kumar

ರಾಂಚಿಯಲ್ಲಿ ಅತಿ ವೇಗವಾಗಿ ಕಾರು ಚಾಲನೆ: ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿಗೆ ದಂಡ!

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸ್ಟಾರ್ ಕ್ರಿಕೆಟಿಗ, ಕನ್ನಡಿಗ Vaishak Vijayakumar, ಹುಡುಗಿ ಯಾರು ಗೊತ್ತಾ? Video

ರಾಜ್ಯಸಭೆ ಚುನಾವಣೆಗೆ ಇಂದು ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ?: NDAಯಲ್ಲಿ ಮಹತ್ವದ ಬೆಳವಣಿಗೆ

SCROLL FOR NEXT