ಎಂಕೆ ಸ್ಟ್ಯಾಲಿನ್-ಅಮಿತ್ ಶಾ  online desk
ದೇಶ

"LKG ವಿದ್ಯಾರ್ಥಿಯಿಂದ PhD ಪದವೀಧರನಿಗೆ ಪಾಠ": ಸ್ಟ್ಯಾಲಿನ್ ಟೀಕೆಗೆ ಅಮಿತ್ ಶಾ ಖಡಕ್ ಕೌಂಟರ್...

ಇಲ್ಲಿಯವರೆಗೆ, ಸಿಎಪಿಎಫ್ ನೇಮಕಾತಿಯಲ್ಲಿ ಮಾತೃಭಾಷೆಗೆ ಸ್ಥಾನವಿರಲಿಲ್ಲ. ನಮ್ಮ ಯುವಕರು ಈಗ ತಮಿಳು ಸೇರಿದಂತೆ ಎಲ್ಲಾ ಸ್ಥಳೀಯ ಭಾಷೆಗಳಲ್ಲಿ ತಮ್ಮ ಸಿಎಪಿಎಫ್ ಪರೀಕ್ಷೆಯನ್ನು ಬರೆಯಲು ಸಾಧ್ಯವಾಗುತ್ತದೆ.

ನವದೆಹಲಿ: ತಮಿಳುನಾಡಿನಲ್ಲಿ ಎನ್ಇಪಿ ಮೂಲಕ ಹಿಂದಿ ಹೇರಿಕೆಗೆ ಪ್ರಯತ್ನ ಮಾಡಲಾಗುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸಿಎಂ ಎಂಕೆ ಸ್ಟ್ಯಾಲಿನ್, ಕೇಂದ್ರ ಗೃಹ ಸಚಿವ ಅಮಿತ್ ಶಾ ನಡುವೆ ವಾಗ್ಸಮರ ಮುಂದುವರೆದಿದೆ.

ಎನ್ ಇಪಿ ಅಡಿಯಲ್ಲಿ ಹಿಂದಿಯನ್ನು ತೃತೀಯ ಭಾಷೆಯನ್ನಾಗಿ ಕಲಿಯಲು ಅವಕಾಶ ನೀಡದೇ ಇದ್ದರೆ ಅನುದಾನ ಕೊಡುವುದಿಲ್ಲ ಎಂಬ ಬೆದರಿಕೆ ಹಾಕಿದ್ದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಸ್ಟ್ಯಾಲಿನ್, ಇದು ಎಲ್ ಕೆಜಿ ವಿದ್ಯಾರ್ಥಿಯೊಬ್ಬ ಪಿ ಹೆಚ್ ಡಿ ಪದವೀಧರನಿಗೆ ಪಾಠ ಮಾಡುತ್ತಿರುವಂತಿದೆ. "ದ್ರಾವಿಡಂ ದೆಹಲಿಯಿಂದ ಆಜ್ಞೆಗಳನ್ನು ತೆಗೆದುಕೊಳ್ಳುವುದಿಲ್ಲ. ಬದಲಾಗಿ, ಅದು ರಾಷ್ಟ್ರವು ಅನುಸರಿಸಬೇಕಾದ ಮಾರ್ಗವನ್ನು ನಿಗದಿಪಡಿಸುತ್ತದೆ" ಎಂದು ಸ್ಟ್ಯಾಲಿನ್ ಹೇಳಿದ್ದರು.

ಸ್ಟ್ಯಾಲಿನ್ ಹೇಳಿಕೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಸರ್ಕಾರ ತಮಿಳಿನಲ್ಲಿ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕೋರ್ಸ್‌ಗಳನ್ನು ಪರಿಚಯಿಸಬೇಕು. ಡಿಎಂಕೆ ಮುಖ್ಯಸ್ಥರು ಈ ನಿಟ್ಟಿನಲ್ಲಿ ಸಾಕಷ್ಟು ಕೆಲಸ ಮಾಡಿಲ್ಲ ಮತ್ತು ಪ್ರಾದೇಶಿಕ ಭಾಷೆಗಳಿಗೆ ಅವಕಾಶ ಕಲ್ಪಿಸಲು ನೇಮಕಾತಿ ನೀತಿಗಳಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಿದ್ದು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಎಂದು ಹೇಳಿದ್ದಾರೆ.

"ಇಲ್ಲಿಯವರೆಗೆ, ಸಿಎಪಿಎಫ್ ನೇಮಕಾತಿಯಲ್ಲಿ ಮಾತೃಭಾಷೆಗೆ ಸ್ಥಾನವಿರಲಿಲ್ಲ. ನಮ್ಮ ಯುವಕರು ಈಗ ತಮಿಳು ಸೇರಿದಂತೆ ಎಲ್ಲಾ ಸ್ಥಳೀಯ ಭಾಷೆಗಳಲ್ಲಿ ತಮ್ಮ ಸಿಎಪಿಎಫ್ ಪರೀಕ್ಷೆಯನ್ನು ಬರೆಯಲು ಸಾಧ್ಯವಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ" ಎಂದು ಅಮಿತ್ ಶಾ ಹೇಳಿದ್ದಾರೆ.

"ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕೋರ್ಸ್‌ಗಳ ಪಠ್ಯಕ್ರಮವನ್ನು ತಮಿಳು ಭಾಷೆಯಲ್ಲಿ ಪರಿಚಯಿಸುವತ್ತ ಸಾಧ್ಯವಾದಷ್ಟು ಬೇಗ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ತಮಿಳುನಾಡಿನ ಮುಖ್ಯಮಂತ್ರಿಯನ್ನು ಒತ್ತಾಯಿಸುವುದಾಗಿ ಅಮಿತ್ ಶಾ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026, qualifier 1: ಟಾಸ್ ಗೆದ್ದ GT ಬೌಲಿಂಗ್ ಆಯ್ಕೆ, ಕುತೂಹಲಕ್ಕೆ ಬ್ರೇಕ್, ವೆಂಕಟೇಶ್ ಅಯ್ಯರ್ ಗೆ ಸ್ಟಿಕ್ ಆದ RCB!

Bengaluru Rains: ಗುಡುಗು, ಸಿಡಿಲು ಸಹಿತ ಭಾರೀ ಮಳೆ; ಹಳಿ ಮೇಲೆ ಮರ ಬಿದ್ದು, ಮೆಟ್ರೋ ಸಂಚಾರ ವ್ಯತ್ಯಯ!

ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ತಿರಸ್ಕಾರ: 'ಸುಪ್ರೀಂ' ತೀರ್ಪು ಸ್ವಾಗತಿಸಿದ ಡಿಕೆ ಶಿವಕುಮಾರ್

ಮೂಲಭೂತವಾದಿಗಳ ಒತ್ತಡಕ್ಕೆ ಮಣಿದ ಪಾಕ್ ಸರ್ಕಾರ; ಹಿಂದೂ ಹೆಸರುಗಳ ಮರು ನಾಮಕರಣ ಮುಂದೂಡಿಕೆ!

SCROLL FOR NEXT