ವ್ಯಾನ್ ಗೆ ಬೆಂಕಿ ಹಚ್ಚಿರುವ ಚಿತ್ರ 
ದೇಶ

ಮಣಿಪುರದಲ್ಲಿ ಮತ್ತೆ ಘರ್ಷಣೆ: ಒಬ್ಬರು ಸಾವು, 25 ಮಂದಿಗೆ ಗಾಯ

ಮೃತರನ್ನು 30 ವರ್ಷದ ಲಾಲ್‌ಗೌತಾಂಗ್ ಸಿಂಗ್ಸಿಟ್ ಎಂದು ಗುರುತಿಸಲಾಗಿದೆ.

ಇಂಫಾಲ: ಗಲಭೆ ಪೀಡಿತ ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾದ ನಂತರ ಮತ್ತೆ ಘರ್ಷಣೆ ನಡೆದಿದೆ. ಶನಿವಾರ ಕಾಂಗ್‌ಪೊಕ್ಪಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಕುಕಿ ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವಿನ ಘರ್ಷಣೆಯಲ್ಲಿ ಒಬ್ಬ ಪ್ರತಿಭಟನಾಕಾರರು ಸಾವನ್ನಪ್ಪಿದ್ದಾರೆ . ಮಹಿಳೆಯರು ಸೇರಿದಂತೆ 25 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತರನ್ನು 30 ವರ್ಷದ ಲಾಲ್‌ಗೌತಾಂಗ್ ಸಿಂಗ್ಸಿಟ್ ಎಂದು ಗುರುತಿಸಲಾಗಿದೆ. ಕೀಥೆಲ್‌ಮಂಬಿಯಲ್ಲಿ ನಡೆದ ಘರ್ಷಣೆಯ ವೇಳೆ ಗುಂಡು ತಗುಲಿ ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ

ಗಮ್ಗಿಫೈ, ಮೋಟ್‌ಬಂಗ್ ಮತ್ತು ಕೀಥೆಲ್‌ಮಂಬಿಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಘರ್ಷಣೆಯಲ್ಲಿ ಕನಿಷ್ಠ 25 ಪ್ರತಿಭಟನಾಕಾರರು ವಿವಿಧ ರೀತಿಯಲ್ಲಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯಾದ್ಯಂತ ಸಾರ್ವಜನಿಕ ಸಂಚಾರವನ್ನು ಮುಕ್ತಗೊಳಿಸುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿರ್ದೇಶನ ವಿರೋಧಿಸಿ ಕುಕಿ ಪ್ರಾಬಲ್ಯದ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ ನಂತರ ಪ್ರತಿಭಟನೆ ತೀವ್ರಗೊಂಡಿದೆ.

ಪ್ರತಿಭಟನಾಕಾರರು ಖಾಸಗಿ ವಾಹನಗಳಿಗೆ ಬೆಂಕಿ ಹಚ್ಚಿದ್ದು, ಇಂಫಾಲ್‌ನಿಂದ ಸೇನಾಪತಿ ಜಿಲ್ಲೆಗೆ ಪ್ರಯಾಣಿಸುತ್ತಿದ್ದ ರಾಜ್ಯ ಸಾರಿಗೆ ಬಸ್ ಅನ್ನು ತಡೆಯಲು ಪ್ರಯತ್ನಿಸಿದಾಗ ಪರಿಸ್ಥಿತಿ ಹದಗೆಟ್ಟಿತು ಎಂದು ಪೊಲೀಸರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!