ಸಂಸತ್ತು  
ದೇಶ

ಸಂಸತ್ತಿನ ಬಜೆಟ್ ಅಧಿವೇಶನ ಎರಡನೇ ಹಂತ ಇಂದು ಆರಂಭ: ವಕ್ಫ್ ಮಸೂದೆ, ಕ್ಷೇತ್ರ ವಿಂಗಡಣೆ ವಿರುದ್ಧ ತರಾಟೆಗೆ ಪ್ರತಿಪಕ್ಷಗಳು ಸಜ್ಜು

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಂದ ಪರಸ್ಪರ ಸುಂಕಗಳ ಬೆದರಿಕೆಯನ್ನು ಕಾಂಗ್ರೆಸ್ ಪ್ರಸ್ತಾಪಿಸಲಿದೆ. ಬಜೆಟ್ ಅಧಿವೇಶನದ ಎರಡನೇ ಹಂತವು ಏಪ್ರಿಲ್ 4 ರಂದು ಕೊನೆಗೊಳ್ಳಲಿದೆ.

ನವದೆಹಲಿ: ಮತದಾರರ ಪಟ್ಟಿಗಳಲ್ಲಿ ಅಕ್ರಮ ನಡೆದಿರುವ ಆರೋಪ, ವಕ್ಫ್ ಮಸೂದೆ, ಕ್ಷೇತ್ರ ವಿಂಗಡಣೆ ಮತ್ತು ಅಮೆರಿಕದ ಡೊನಾಲ್ಡ್ ಟ್ರಂಪ್ ಆಡಳಿತದ ಸುಂಕದ ಹಕ್ಕುಗಳ ವಿಷಯಗಳ ಕುರಿತು ವಿರೋಧ ಪಕ್ಷಗಳು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಜ್ಜಾಗಿರುವುದರ ಮಧ್ಯೆ ಇಂದು ಸೋಮವಾರದಿಂದ ಸಂಸತ್ತು ಬಜೆಟ್ ಅಧಿವೇಶನ ಎರಡನೇ ಹಂತ ಆರಂಭವಾಗುತ್ತಿದೆ.

ಕ್ಷೇತ್ರ ವಿಂಗಡಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ತಮಿಳುನಾಡು ಸರ್ಕಾರದ ನಡುವಿನ ತಿಕ್ಕಾಟ ಸಂಸತ್ತಿನಲ್ಲಿ ಪ್ರತಿಧ್ವನಿಸುವ ಸೂಚನೆ ಸಿಕ್ಕಿದೆ. ತಮಿಳು ನಾಡಿನ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (DMK) ಸಂಸದರು ಅಧಿವೇಶನದಲ್ಲಿ ಕ್ಷೇತ್ರ ವಿಂಗಡಣೆ ಮತ್ತು 'ರಾಜ್ಯಗಳ ಮೇಲೆ ಹಿಂದಿ ಭಾಷೆ ಹೇರಿಕೆ'ಯ ಸಮಸ್ಯೆಗಳನ್ನು ಆರೋಪಿಸಿ ನಿರ್ಣಯವನ್ನು ಅಂಗೀಕರಿಸಿದರು.

ಲೋಕಸಭಾ ಸ್ಥಾನಗಳ ಜನಸಂಖ್ಯೆ ಆಧಾರಿತ ಕ್ಷೇತ್ರ ವಿಂಗಡಣೆಯು ದಕ್ಷಿಣ ರಾಜ್ಯಗಳಿಗೆ ಮಾತ್ರವಲ್ಲದೆ ಒಡಿಶಾ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ಇತರ ರಾಜ್ಯಗಳಿಗೂ ಅಸ್ತಿತ್ವದಲ್ಲಿರುವ ಸ್ಥಾನಗಳ ಸಂಖ್ಯೆಯಲ್ಲಿ ಇಳಿಕೆಗೆ ಕಾರಣವಾಗುತ್ತದೆ ಎಂದು ಹೇಳಿ ಡಿಎಂಕೆ ಈ ವಿಷಯದ ಬಗ್ಗೆ ಇತರ ಪಕ್ಷಗಳೊಂದಿಗೆ ಸಮನ್ವಯ ಸಾಧಿಸಲು ನಿರ್ಧರಿಸಿದೆ.

ಈ ಅಧಿವೇಶನದಲ್ಲಿ ಸರ್ಕಾರ ಅಂಗೀಕರಿಸಲು ನೋಡುತ್ತಿರುವ ವಕ್ಫ್ ತಿದ್ದುಪಡಿ ಮಸೂದೆಯ ಮೇಲೂ ತೀವ್ರ ಪರಿಣಾಮ ಬೀರುವ ಸಾಧ್ಯತೆ ಇದೆ. ಕಳೆದ ವಾರ, ಕೇಂದ್ರ ಸಚಿವ ಸಂಪುಟವು ಬಿಜೆಪಿ ಸಂಸದೆ ಜಗದಾಂಬಿಕಾ ಪಾಲ್ ನೇತೃತ್ವದ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಪ್ರಸ್ತಾಪಿಸಿದ 14 ತಿದ್ದುಪಡಿಗಳನ್ನು ಅನುಮೋದಿಸಿತು. ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು, ವಕ್ಫ್ ಮಸೂದೆಯನ್ನು ವಿರೋಧಿಸಲು ವಿರೋಧ ಪಕ್ಷದ ನಾಯಕರು ಇತರ ಪಕ್ಷಗಳೊಂದಿಗೆ ವ್ಯಾಪಕ ಸಮಾಲೋಚನೆ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.

ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಕಳೆದ ವಾರ ನಡೆದ ಕಾರ್ಯಕ್ರಮವೊಂದರಲ್ಲಿ, ವಕ್ಫ್ ತಿದ್ದುಪಡಿ ಮಸೂದೆಯು ಮುಸ್ಲಿಂ ಸಮುದಾಯದ ಅನೇಕ ಸಮಸ್ಯೆಗಳನ್ನು ಪರಿಹರಿಸುವುದರಿಂದ ಅದನ್ನು ಶೀಘ್ರವಾಗಿ ಅಂಗೀಕರಿಸಲು ಸರ್ಕಾರ ಉತ್ಸುಕವಾಗಿದೆ ಎಂದು ಹೇಳಿದ್ದರು.

ಈ ಅಧಿವೇಶನದಲ್ಲಿ ಪ್ರಮುಖವಾಗಿ ಚರ್ಚೆಗೆ ಗ್ರಾಸವಾಗುವ ಮತ್ತೊಂದು ವಿಷಯವೆಂದರೆ ನಕಲಿ ಮತದಾರರ ಫೋಟೋ ಗುರುತಿನ ಚೀಟಿ (EPIC) ಸಂಖ್ಯೆಗಳು. ವಿರೋಧ ಪಕ್ಷಗಳು ಈ ವಿಷಯದ ಬಗ್ಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಜ್ಜಾಗಿದೆ.

ತೃಣಮೂಲ ಕಾಂಗ್ರೆಸ್ (TMC) ಈ ವಿಷಯವನ್ನು ಎತ್ತಿ ತೋರಿಸುವಲ್ಲಿ ಮುಂಚೂಣಿಯಲ್ಲಿದೆ, ನಂತರ ಚುನಾವಣಾ ಆಯೋಗವು ಮುಂದಿನ ಮೂರು ತಿಂಗಳೊಳಗೆ ಸರಿಪಡಿಸುವ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಘೋಷಿಸಿತು. ಈ ವಿಷಯದ ಕುರಿತು ನಾಳೆ ದೆಹಲಿಯಲ್ಲಿ ಟಿಎಂಸಿಯ ಹತ್ತು ಸದಸ್ಯರ ನಿಯೋಗವು ಚುನಾವಣಾ ಆಯೋಗವನ್ನು ಭೇಟಿ ಮಾಡಲಿದೆ.

ಬಜೆಟ್ ಅಧಿವೇಶನದ ಎರಡನೇ ಭಾಗದಲ್ಲಿ ಸಂಸತ್ತಿನ ಎರಡೂ ಸದನಗಳಲ್ಲಿ ಈ ವಿಷಯವನ್ನು ಪ್ರಸ್ತಾಪಿಸಲು ಟಿಎಂಸಿ, ಕಾಂಗ್ರೆಸ್, ಡಿಎಂಕೆ, ಶಿವಸೇನೆ-ಯುಬಿಟಿ ಸೇರಿದಂತೆ ಇತರ ವಿರೋಧ ಪಕ್ಷಗಳನ್ನು ಒಟ್ಟುಗೂಡಿಸಿದೆ.

ಪಶ್ಚಿಮ ಬಂಗಾಳದಲ್ಲಿ ಇತರ ರಾಜ್ಯಗಳ ಮತದಾರರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಲು ಮತದಾರರ ಪಟ್ಟಿಯನ್ನು ಬಳಸಲಾಗಿದೆ ಎಂಬ ಟಿಎಂಸಿಯ ಹೇಳಿಕೆಯನ್ನು ಚುನಾವಣಾ ಆಯೋಗ ತಿರಸ್ಕರಿಸಿದೆ.

ಮಣಿಪುರದಲ್ಲಿ ಹೊಸ ಹಿಂಸಾಚಾರದ ವಿಷಯವನ್ನು ವಿರೋಧ ಪಕ್ಷವು ಎತ್ತಲಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಘೋಷಣೆಗೆ ಸಂಸತ್ತಿನ ಅನುಮೋದನೆ ಕೋರಿ ಶಾಸನಬದ್ಧ ನಿರ್ಣಯವನ್ನು ಮಂಡಿಸುವ ನಿರೀಕ್ಷೆಯಿದೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ಮಣಿಪುರದ ಬಜೆಟ್ ನ್ನು ಮಂಡಿಸಲಿದ್ದಾರೆ. ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ರಾಜೀನಾಮೆ ನೀಡಿದ ನಂತರ ಫೆಬ್ರವರಿ 13 ರಿಂದ ಮಣಿಪುರ ರಾಷ್ಟ್ರಪತಿ ಆಳ್ವಿಕೆಯಲ್ಲಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಂದ ಪರಸ್ಪರ ಸುಂಕಗಳ ಬೆದರಿಕೆಯನ್ನು ಕಾಂಗ್ರೆಸ್ ಎತ್ತಲಿದೆ. ಬಜೆಟ್ ಅಧಿವೇಶನದ ಎರಡನೇ ಹಂತವು ಏಪ್ರಿಲ್ 4 ರಂದು ಕೊನೆಗೊಳ್ಳಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT