ಸಾಂದರ್ಭಿಕ ಚಿತ್ರ 
ದೇಶ

ಗುಜರಾತ್: ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ; ದಲಿತ ವ್ಯಕ್ತಿಗೆ ಥಳಿತ, ಬೆತ್ತಲೆ ಮೆರವಣಿಗೆ!

ಮಾರ್ಚ್ 11 ರ ರಾತ್ರಿ ಇಡಾರ್ ಪಟ್ಟಣದ ಸಮೀಪವಿರುವ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದ್ದು, ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಗುಜರಾತ್: ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧವನ್ನಿಟ್ಟುಕೊಂಡಿದ್ದ ದಲಿತ ವ್ಯಕ್ತಿಯೊಬ್ಬನನ್ನು ಮಹಿಳೆಯ ಪತಿ ಹಾಗೂ ಸಂಬಂಧಿಕರು ಥಳಿಸಿ, ಬೆತ್ತಲೆ ಮೆರವಣಿಗೆ ಮಾಡಿರುವ ಘಟನೆ ಗುಜರಾತ್‌ನ ಸಬರ್‌ಕಾಂತ ಜಿಲ್ಲೆಯಲ್ಲಿ ನಡೆದಿದೆ.

ಮಾರ್ಚ್ 11 ರ ರಾತ್ರಿ ಇಡಾರ್ ಪಟ್ಟಣದ ಸಮೀಪವಿರುವ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದ್ದು, ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವೀಡಿಯೊದಲ್ಲಿ 20 ವರ್ಷದ ವ್ಯಕ್ತಿ ಬೆತ್ತಲೆಯಾಗಿ ನಡೆದು ಹೋಗುತ್ತಿದ್ದರೆ ಗುಂಪು ಹಲ್ಲೆ ಮಾಡುತ್ತಿರುವ ದೃಶ್ಯವನ್ನು ನೋಡಬಹುದು.

ವಿವಾಹಿತ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಹಿಮ್ಮತ್‌ನಗರದಿಂದ 20 ಕಿಲೋಮೀಟರ್ ದೂರದಲ್ಲಿರುವ ಇದಾರ್ ಪಟ್ಟಣದ ಮನೆಯಿಂದ ಅಪಹರಿಸಿ, ಥಳಿಸಿ ಬೆತ್ತಲೆ ಮೆರವಣಿಗೆ ನಡೆಸಲಾಗಿದೆ.

ವೈರಲ್ ವಿಡಿಯೋ ಆಧರಿಸಿ ಮಹಿಳೆಯ ಪತಿ ಮತ್ತು ಇತರ ಸಂಬಂಧಿಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಕ್ಷಮಾಪಣೆ ಪತ್ರಕ್ಕೆ ಸಹಿ ಹಾಕಿದ ನಂತರವೇ ಅವರನ್ನು ಬಿಡಲಾಯಿತು ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಜಯಕಾಂತ್ ಪಟೇಲ್ ತಿಳಿಸಿದ್ದಾರೆ.

"ಬುಧವಾರ ವಿಡಿಯೋ ವೈರಲ್ ಆದ ಬಳಿಕಸಂತ್ರಸ್ತೆಯನ್ನು ಸಂಪರ್ಕಿಸಿದ್ದೇವೆ. ಇಂದು ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಮತ್ತು ಎಸ್‌ಸಿ/ಎಸ್‌ಸಿ (ದೌರ್ಜನ್ಯ ತಡೆ) ಕಾಯ್ದೆಯಡಿ ಅಪಹರಣ, ಹಲ್ಲೆ ಮತ್ತು ಇತರ ಅಪರಾಧಗಳ ಆರೋಪ ಹೊರಿಸಲಾಗಿದೆ. ಪ್ರಕರಣದಲ್ಲಿ ಯಾವುದೇ ಬಂಧನವಾಗಿಲ್ಲ" ಎಂದು ಎಸ್‌ಪಿ ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT