ಸಾಂದರ್ಭಿಕ ಚಿತ್ರ  
ದೇಶ

ಮಧ್ಯ ಪ್ರದೇಶದ ಧಾರ್ ಜಿಲ್ಲೆಯಲ್ಲಿ ಎರಡು ವಾಹನಗಳಿಗೆ ಡಿಕ್ಕಿ ಹೊಡೆದ ಗ್ಯಾಸ್ ಟ್ಯಾಂಕರ್: ಏಳು ಮಂದಿ ಸಾವು

ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರು ಮತ್ತು ಜೀಪ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಇತರ ಮೂವರು ಗಾಯಗೊಂಡು ನಂತರ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ಧಾರ್ ಎಸ್‌ಪಿ ಮನೋಜ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಧಾರ್: ಮಧ್ಯ ಪ್ರದೇಶದ ಧಾರ್ ಜಿಲ್ಲೆಯಲ್ಲಿ ಗ್ಯಾಸ್ ಟ್ಯಾಂಕರ್ ಎರಡು ನಾಲ್ಕು ಚಕ್ರಗಳ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಮೃತಪಟ್ಟು ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿನ್ನೆ ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ಬದ್ನವರ್-ಉಜ್ಜಯಿನಿ ಹೆದ್ದಾರಿಯ ಬಮನ್ಸುತಾ ಗ್ರಾಮದ ಬಳಿಯ ರಸ್ತೆಯಲ್ಲಿ ಗ್ಯಾಸ್ ಟ್ಯಾಂಕರ್ ತಪ್ಪಾದ ಕಡೆಯಿಂದ ಬರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರು ಮತ್ತು ಜೀಪ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಇತರ ಮೂವರು ಗಾಯಗೊಂಡು ನಂತರ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ಧಾರ್ ಎಸ್‌ಪಿ ಮನೋಜ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಮಾಹಿತಿ ಪಡೆದ ಹಿರಿಯ ಪೊಲೀಸ್ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಗೆ ಸ್ಥಳಕ್ಕೆ ಧಾವಿಸಿದರು. ಸ್ಥಳೀಯ ನಿವಾಸಿಗಳು ಕಾರ್ಯಾಚರಣೆಯಲ್ಲಿ ಸಹಾಯ ಮಾಡಿದರು, ಈ ಸಮಯದಲ್ಲಿ ಕ್ರೇನ್ ಬಳಸಿ ವಾಹನಗಳಲ್ಲಿ ಸಿಲುಕಿದ್ದ ಜನರನ್ನು ಹೊರತೆಗೆಯಲಾಯಿತು ಎಂದು ಎಸ್‌ಪಿ ಹೇಳಿದರು.

ಗಾಯಾಳುಗಳನ್ನು ನೆರೆಯ ರತ್ಲಂ ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಲಾಯಿತು. ಮೃತಪಟ್ಟವರು ಮತ್ತು ಗಾಯಗೊಂಡವರು ಮಧ್ಯ ಪ್ರದೇಶದ ರತ್ಲಂ, ಮಂಡ್ಸೌರ್ ಮತ್ತು ರಾಜಸ್ಥಾನದ ಜೋಧ್‌ಪುರ ಜಿಲ್ಲೆಗಳಿಗೆ ಸೇರಿದವರಾಗಿದ್ದಾರೆ.

ಅಪಘಾತದ ನಂತರ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ SIR: ವಿದೇಶಾಂಗ ಸಚಿವ ಜೈಶಂಕರ್, ಎಲ್.ಕೆ ಅಡ್ವಾಣಿ ಸೇರಿದಂತೆ ಹಲವು ಮತದಾರರಿಗೆ ನೋಟಿಸ್; CEO ಕೊಟ್ಟ ಸ್ಪಷ್ಟನೆ ಏನು?

ಇದು ಎಂತಹ ವಿಶೇಷ ತೀವ್ರ ಪರಿಷ್ಕರಣೆ? ಅರ್ಹರನ್ನು ಕಿತ್ತುಹಾಕಿ, ಅನರ್ಹರನ್ನು ಸೇರಿಸುವುದೇ SIR: ಕಪಿಲ್ ಸಿಬಲ್ ಕಿಡಿ!

ಟಾಟಾ ಸನ್ಸ್ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಮರುನೇಮಕ ಪ್ರಶ್ನಿಸಿದ ಟಾಟಾ ಟ್ರಸ್ಟ್ಸ್!

ಸಿಎಂ ಡಿಕೆ ಶಿವಕುಮಾರ್‌ ನೂರು ದಿನಗಳ ಆಡಳಿತಕ್ಕೆ ಬಿಜೆಪಿ ನಾಯಕ ಫಿದಾ! ಏನಂದ್ರು ಗೊತ್ತಾ?

ಅಂತಹ ಮನಸ್ಥಿತಿ ಇದ್ದಾಗ ಮೊದಲೇ ಅದರಿಂದ ದೂರ ಇರಬೇಕಿತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಹದೇವಪ್ಪ ಟಾಂಗ್!