ಮಗಳನ್ನು 29ನೇ ಮಹಡಿಯಿಂದ ತಳ್ಳಿ, ತಾನೂ ಜಿಗಿದು ಮಹಿಳೆ ಆತ್ಮಹತ್ಯೆ!
ಮಗಳನ್ನು ತಳ್ಳಿದ 37 ವರ್ಷದ ಮೈಥಿಲಿ ದುವಾ ಎಂಬ ಮಹಿಳೆ ಮಾನಸಿಕವಾಗಿ ಅಸ್ವಸ್ಥಳಾಗಿದ್ದಳು ಎಂದು ವರದಿಯಾಗಿದೆ.
ಮುಂಬೈ: ಮಹಾರಾಷ್ಟ್ರದ ಪನ್ವೇಲ್‌ನಲ್ಲಿರುವ ವಸತಿ ಸಮುಚ್ಚಯವೊಂದರಲ್ಲಿ ಮಹಿಳೆಯೊಬ್ಬರು ತನ್ನ ಎಂಟು ವರ್ಷದ ಮಗಳನ್ನು ತಮ್ಮ 29ನೇ ಮಹಡಿಯ ಫ್ಲಾಟ್‌ನಿಂದ ತಳ್ಳಿ ನಂತರ ತಾನೂ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಗುರುವಾರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಘಟನೆ ಬುಧವಾರ ಬೆಳಗ್ಗೆ 8 ಗಂಟೆಗೆ ಪಲಸ್ಪೆಯಲ್ಲಿ ನಡೆದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
"ಮಗಳನ್ನು ತಳ್ಳಿದ 37 ವರ್ಷದ ಮೈಥಿಲಿ ದುವಾ ಎಂಬ ಮಹಿಳೆ ಮಾನಸಿಕವಾಗಿ ಅಸ್ವಸ್ಥಳಾಗಿದ್ದಳು ಎಂದು ವರದಿಯಾಗಿದೆ. ಮೈಥಿಲಿ ತನ್ನ ಮಗುವನ್ನು ತಳ್ಳಿ ನಂತರ ತಾನೂ ಜಿಗಿದಿದ್ದಾಳೆ. ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಪೊಲೀಸರು ಹೇಳಿದ್ದಾರೆ.
ಈ ಸಂಬಂಧ ಕೊಲೆ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ" ಎಂದು ಪನ್ವೇಲ್ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.