ತುಷಾರ್ ಗಾಂಧಿ PTI
ದೇಶ

ಅಪಾಯಕಾರಿ-ಕಪಟಿ ಹೇಳಿಕೆ: ಮಹಾತ್ಮ ಗಾಂಧಿ ಮರಿಮೊಮ್ಮಗ ತುಷಾರ್ ಗಾಂಧಿ ಬಂಧಿಸುವಂತೆ BJP-RSS ಒತ್ತಾಯ!

ಮಹಾತ್ಮಾ ಗಾಂಧಿಯವರ ಮರಿಮೊಮ್ಮಗ ತುಷಾರ್ ಗಾಂಧಿ RSS ಮತ್ತು BJP ವಿರುದ್ಧ ನೀಡಿದ್ದ ತಮ್ಮ ಹೇಳಿಕೆಗಳನ್ನು ಹಿಂಪಡೆಯಲು ನಿರಾಕರಿಸಿದ್ದು ಜೊತೆಗೆ ಕ್ಷಮೆಯಾಚಿಸುವುದಿಲ್ಲ ಎಂದು ಹೇಳಿದ್ದಾರೆ.

ತಿರುವನಂತಪುರಂ: ಮಹಾತ್ಮಾ ಗಾಂಧಿಯವರ ಮರಿಮೊಮ್ಮಗ ತುಷಾರ್ ಗಾಂಧಿ RSS ಮತ್ತು BJP ವಿರುದ್ಧ ನೀಡಿದ್ದ ತಮ್ಮ ಹೇಳಿಕೆಗಳನ್ನು ಹಿಂಪಡೆಯಲು ನಿರಾಕರಿಸಿದ್ದು ಜೊತೆಗೆ ಕ್ಷಮೆಯಾಚಿಸುವುದಿಲ್ಲ ಎಂದು ಹೇಳಿದ್ದು ಇದರಿಂದ ಕೆರಳಿಸುವ ಕೇಸರಿ ಸಂಘಟನೆ ತುಷಾರ್ ಅವರನ್ನು ಬಂಧಿಸಬೇಕೆಂದು ಒತ್ತಾಯಿಸಿವೆ.

ತಿರುವನಂತಪುರದ ನೆಯ್ಯಟ್ಟಿಂಕರದಲ್ಲಿ ಇತ್ತೀಚೆಗೆ ನಡೆದ ದಿವಂಗತ ಗಾಂಧಿವಾದಿ ಪಿ ಗೋಪಿನಾಥನ್ ನಾಯರ್ ಅವರ ಪ್ರತಿಮೆಯ ಅನಾವರಣ ಸಮಾರಂಭದಲ್ಲಿ ತುಷಾರ್ ಬಿಜೆಪಿ ಮತ್ತು ಆರ್‌ಎಸ್‌ಎಸ್ ಕೇರಳಕ್ಕೆ ಪ್ರವೇಶಿಸಿರುವುದು 'ಅಪಾಯಕಾರಿ ಮತ್ತು ಕಪಟ ಶತ್ರುಗಳು' ಎಂದು ಉಲ್ಲೇಖಿಸಿದ್ದರು. ಅಷ್ಟೇ ಅಲ್ಲದೆ ಆರ್‌ಎಸ್‌ಎಸ್ 'ವಿಷವಿದ್ದಂತೆ' ಎಂದು ಹೇಳಿದ್ದರು. ನಂತರ ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ ಅವರ ಕಾರನ್ನು ತಡೆಯಲು ಯತ್ನಿಸಿದ್ದರು.

ಕೊಚ್ಚಿ ಬಳಿಯ ಅಲುವದಲ್ಲಿ ಇಂದು ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ತುಷಾರ್, 'ನಾನು ಒಮ್ಮೆ ನೀಡಿದ ಹೇಳಿಕೆಯನ್ನು ಹಿಂಪಡೆಯುವುದಿಲ್ಲ. ಕ್ಷಮೆಯನ್ನು ಕೇಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನನ್ನ ಹೇಳಿಕೆ ನಂತರ ನಡೆದ ಬೆಳವಣಿಗೆಗಳು ಈ ದೇಶದ್ರೋಹಿಗಳನ್ನು ಬಯಲಿಗೆಳಯಲು ನನ್ನನ್ನು ಪ್ರೇರೇಪಿಸಿದ್ದು ಇನ್ನಷ್ಟು ನನ್ನನ್ನು ಬಲಿಷ್ಠಗೊಳಿಸಿವೆ. ಈ ಎರಡೂ ಸಂಸ್ಥೆಗಳ ವಿರುದ್ಧ ಕೈಗೊಳ್ಳಬೇಕಾದ ಹೋರಾಟವು ಸ್ವಾತಂತ್ರ್ಯ ಹೋರಾಟಕ್ಕಿಂತ ಅತ್ಯಗತ್ಯವಾಗಿದೆ. 'ಸಂಘ' ಎಂಬುದು ನಮ್ಮೆಲ್ಲರ ಸಮಾನ ಶತ್ರುವಾಗಿದೆ. ಅದರ ಮುಖವಾಡವನ್ನು ಕಳಚಲೇಬೇಕು. ನನ್ನ ಮುತ್ತಜ್ಜನ ಕೊಲೆಗಾರರ ವಂಶದವರು ಮಹಾತ್ಮಾ ಗಾಂಧಿ ಅವರ ಭಾವಚಿತ್ರದ ಬಳಿ ಹೋಗಿ ಬಂದೂಕು ಇಟ್ಟು ಗುಂಡು ಹಾರಿಸುತ್ತಾರೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

'ಮಹಾತ್ಮಾ ಗಾಂಧಿ ಅವರ ಮರಿ ಮೊಮ್ಮಗನಾಗಿ ಹುಟ್ಟಿರುವುದನ್ನೇ ತುಷಾರ್ ಗಾಂಧಿ ಬಂಡವಾಳ ಮಾಡಿಕೊಳ್ಳಲು ಯತ್ನಿಸುತ್ತಿದ್ದಾರೆ. ಪ್ರತಿಮೆ ಅನಾವರಣಕ್ಕೆ ತುಷಾರ್‌ ಅವರನ್ನು ಆಹ್ವಾನಿಸಿದವರಿಗೆ ಅವರ ಹಿನ್ನೆಲೆಯ ಪರಿಚಯವಿಲ್ಲ ಎಂದು ಅನಿಸುತ್ತದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT