ಮಿರ್ವೈಜ್ ಉಮರ್ ಫಾರೂಕ್ 
ದೇಶ

ಕಾಶ್ಮೀರ: ಹುರಿಯತ್ ಮುಖ್ಯಸ್ಥನಿಗೆ ಗೃಹಬಂಧನ, ಶುಕ್ರವಾರದ ಪ್ರಾರ್ಥನೆಗೂ ನಿಷೇಧ

ಕಾಶ್ಮೀರದ ಮುಖ್ಯ ಧರ್ಮಗುರು ಮಿರ್ವೈಜ್ ಅವರನ್ನು ಶ್ರೀನಗರದ ನೈಜೀನ್ ಪ್ರದೇಶದಲ್ಲಿರುವ ಅವರ ನಿವಾಸದಲ್ಲಿ ಗೃಹ ಬಂಧನದಲ್ಲಿ ಇರಿಸಲಾಗಿದೆ.

ಶ್ರೀನಗರ: ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷ ಮಿರ್ವೈಜ್ ಉಮರ್ ಫಾರೂಕ್ ಅವರನ್ನು ಶುಕ್ರವಾರ ಗೃಹಬಂಧನದಲ್ಲಿ ಇರಿಸಲಾಗಿದ್ದು, ಇಲ್ಲಿನ ಜಾಮಿಯಾ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆ ಸಲ್ಲಿಸಲು ಸಹ ಅವಕಾಶ ನೀಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಶ್ಮೀರದ ಮುಖ್ಯ ಧರ್ಮಗುರು ಮಿರ್ವೈಜ್ ಅವರನ್ನು ಶ್ರೀನಗರದ ನೈಜೀನ್ ಪ್ರದೇಶದಲ್ಲಿರುವ ಅವರ ನಿವಾಸದಲ್ಲಿ ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಹುರಿಯತ್ ಮುಖ್ಯಸ್ಥರು ನೌಹಟ್ಟಾ ಪ್ರದೇಶದ ಜಾಮಿಯಾ ಮಸೀದಿಗೆ ಭೇಟಿ ನೀಡಿ, ಸಾಮೂಹಿಕ ಪ್ರಾರ್ಥನೆ ಸಲ್ಲಿಸಬೇಕಿತ್ತು. ಆದರೆ ಶುಕ್ರವಾರದ ಪ್ರಾರ್ಥನೆಗೂ ಅವಕಾಶ ನೀಡಿಲ್ಲ.

ಈ ವಾರದ ಆರಂಭದಲ್ಲಿ, ಕೇಂದ್ರ ಸರ್ಕಾರವು ಮಿರ್ವೈಜ್ ನೇತೃತ್ವದ ಅವಾಮಿ ಕ್ರಿಯಾ ಸಮಿತಿ(ಎಎಸಿ) ಮತ್ತು ಶಿಯಾ ನಾಯಕ ಮಸ್ರೂರ್ ಅಬ್ಬಾಸ್ ಅನ್ಸಾರಿ ನೇತೃತ್ವದ ಜಮ್ಮು ಕಾಶ್ಮೀರ ಇತ್ತಿಹಾದುಲ್ ಮುಸ್ಲಿಮೀನ್(ಜೆಕೆಐಎಂ) ಅನ್ನು ದೇಶ ವಿರೋಧಿ ಚಟುವಟಿಕೆ, ಭಯೋತ್ಪಾದನೆ ಬೆಂಬಲಿಸುವುದು ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತಿವೆ ಎಂಬ ಆರೋಪಿಸಿ ಐದು ವರ್ಷಗಳ ಕಾಲ ನಿಷೇಧಿಸಿದೆ.

ಜಾಮಿಯಾ ಮಸೀದಿಯ ಆಡಳಿತ ಮಂಡಳಿ, ಅಂಜುಮನ್ ಔಕಾಫ್ ಜಾಮಾ ಮಸೀದಿ, ಮಿರ್ವೈಜ್ ಅವರ ಗೃಹಬಂಧನವನ್ನು ಖಂಡಿಸಿದೆ.

"ಮುಸ್ಲಿಮರಿಗೆ ಅಪಾರ ಆಧ್ಯಾತ್ಮಿಕ ಮಹತ್ವವನ್ನು ಹೊಂದಿರುವ ಪವಿತ್ರ ರಂಜಾನ್ ತಿಂಗಳಿನಲ್ಲಿ ಅಧಿಕಾರಿಗಳ ಈ ಅನಿಯಂತ್ರಿತ ಮತ್ತು ನ್ಯಾಯಸಮ್ಮತವಲ್ಲದ ಕ್ರಮ ಖಂಡನೀಯ" ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video

ಈ ಬಾರಿ ಮೈಸೂರು ದಸರಾ ಮತ್ತಷ್ಟು ಆಕರ್ಷಕ; 146 ಕಿ.ಮೀ. ದೀಪಾಲಂಕಾರ; 3,500 ಡ್ರೋನ್‌ಗಳ ಪ್ರದರ್ಶನ

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೇತಮ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ