ಮಂಗತ್ ರೈ ಅಲಿಯಾಸ್ ಮಂಗಾ 
ದೇಶ

ಪಂಜಾಬ್: ಶಿವಸೇನಾ ನಾಯಕನಿಗೆ ಗುಂಡಿಕ್ಕಿ ಹತ್ಯೆ

ಶಿವಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಮಂಗತ್ ರೈ ಅಲಿಯಾಸ್ ಮಂಗಾ ಹಾಲು ಖರೀದಿಸುತ್ತಿದ್ದಾಗ ಈ ಘಟನೆ ನಡೆದಿದೆ.

ಪಂಜಾಬ್: ಗುರುವಾರ ತಡರಾತ್ರಿ ಪಂಜಾಬ್‌ನ ಮೋಗಾ ಜಿಲ್ಲೆಯಲ್ಲಿ ಶಿವಸೇನಾ ನಾಯಕನೊಬ್ಬನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ, ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಬೈಕ್ ನಲ್ಲಿ ಬೆನ್ನಟ್ಟಿ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಂಜಾಬ್‌ನ ಮೊಗಾದಲ್ಲಿ ನಡೆದಿದೆ. ದಾಳಿಯಲ್ಲಿ ಓರ್ವ ಬಾಲಕ ಗಾಯಗೊಂಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಶಿವಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಮಂಗತ್ ರೈ ಅಲಿಯಾಸ್ ಮಂಗಾ ಹಾಲು ಖರೀದಿಸುತ್ತಿದ್ದಾಗ ಈ ಘಟನೆ ನಡೆದಿದೆ.

ರಾತ್ರಿ 10 ಗಂಟೆ ಸುಮಾರಿಗೆ ಮೂವರು ಅಪರಿಚಿತ ವ್ಯಕ್ತಿಗಳು ಶಿವಸೇನಾ ನಾಯಕನ ಮೇಲೆ ಗುಂಡು ಹಾರಿಸಿದರು. ಆದರೆ, ಮಂಗತ್‌ ಬದಲಿಗೆ 11 ವರ್ಷದ ಬಾಲಕನಿಗೆ ತಗುಲಿತು. ದಾಳಿಕೋರರು ಬೆನ್ನಟ್ಟಿದಾಗ ಮಂಗಾ ತಕ್ಷಣ ದ್ವಿಚಕ್ರ ವಾಹನದಲ್ಲಿ ಆ ಪ್ರದೇಶದಿಂದ ಪರಾರಿಯಾಗಲು ಯತ್ನಿಸಿದರು. ಬೆನ್ನಟ್ಟಿ ಮತ್ತೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.

ಗಾಯಗೊಂಡ ಬಾಲಕನನ್ನು ಆರಂಭದಲ್ಲಿ ಮೋಗಾ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಂಗಾ ಯಾವ ಶಿವಸೇನಾ ಬಣದ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದು ವೈಯಕ್ತಿಕ ದ್ವೇಷದ ಪ್ರಕರಣವಾಗಿದೆ. ಮೃತರ ಕುಟುಂಬ ಉಲ್ಲೇಖಿಸಿರುವ ಆರು ಶಂಕಿತರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ. ಅವರನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಅಧಿಕಾರಿಯೊಬ್ಬರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT