ಸಾಂದರ್ಭಿಕ ಚಿತ್ರ 
ದೇಶ

ಓದುವುದರಲ್ಲಿ ಹಿಂದುಳಿದ ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ

ಸ್ಪರ್ಧಾತ್ಮಕ ಜಗತ್ತಿನ ಒತ್ತಡವನ್ನು ತನ್ನ ಮಕ್ಕಳು ನಿಭಾಯಿಸಲು ಸಾಧ್ಯವಾಗುವುದಿಲ್ಲ ಎಂದು ನಂಬಿದ್ದ ತಂದೆಯೊಬ್ಬರು, ಅವರನ್ನು ಕೊಂದು ನಂತರ ತಾವೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಕಾಕಿನಾಡ: ಓದುವುದರಲ್ಲಿ ಹಿಂದುಳಿದಿದ್ದ ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಗೀಡಾಗಿದ್ದ ತಂದೆಯೊಬ್ಬ ಮಕ್ಕಳಿಬ್ಬರ ಕೈಕಾಲುಗಳನ್ನು ಕಟ್ಟಿ, ತಲೆಗಳನ್ನು ನೀರು ತುಂಬಿದ ಬಕೆಟ್‌ಗಳಲ್ಲಿ ಮುಳುಗಿಸಿ ಕೊಂದಿರುವ ಘಟನೆ ನಡೆದಿದೆ.

ಪಶ್ಚಿಮ ಗೋದಾವರಿ ಜಿಲ್ಲೆಯ ತಡೆಪಲ್ಲಿಗುಡೇನಿ ಮೂಲದ ವನಪಲ್ಲಿ ಚಂದ್ರಕಿಶೋರ್ ಸ್ಥಳೀಯ ಒಎನ್‌ಜಿಸಿ ಕಚೇರಿಯಲ್ಲಿ ಸಹಾಯಕ ಲೆಕ್ಕಪತ್ರಗಾರರಾಗಿ ಕೆಲಸ ಮಾಡುತ್ತಿದ್ದ. ತನ್ನ ಇಬ್ಬರು ಮಕ್ಕಳ ಬಗ್ಗೆ ಅತಿಯಾದ ಕನಸು ಕಂಡಿದ್ದ ಈತ ಪ್ರತೀ ಬಾರಿ ಅವರು ಪರೀಕ್ಷೆಯಲ್ಲಿ ಪಡೆಯುತ್ತಿದ್ದ ಅಂಕವನ್ನು ಕಂಡು ಅಸಮಾಧಾನಗೊಂಡಿದ್ದ. ಈ ಬಗ್ಗೆ ಹಲವು ಬಾರಿ ಮನೆಯಲ್ಲಿ ಗಲಾಟೆ ನಡೆದಿದೆ.

ಸ್ಪರ್ಧಾತ್ಮಕ ಜಗತ್ತಿನ ಒತ್ತಡವನ್ನು ತನ್ನ ಮಕ್ಕಳು ನಿಭಾಯಿಸಲು ಸಾಧ್ಯವಾಗುವುದಿಲ್ಲ ಎಂದು ನಂಬಿದ್ದ ತಂದೆಯೊಬ್ಬರು, ಅವರನ್ನು ಕೊಂದು ನಂತರ ತಾವೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಇತ್ತೀಚಿಗಷ್ಟೇ ಹೋಳಿ ಹಬ್ಬದ ಸಂದರ್ಭದಲ್ಲಿ, ಚಂದ್ರಕಿಶೋರ್ ತಮ್ಮ ಪತ್ನಿ ತನುಜಾ ಮತ್ತು ಇಬ್ಬರು ಪುತ್ರರಾದ ಜೋಶಿಲ್ ಮತ್ತು ನಿಖಿಲ್ ಅವರೊಂದಿಗೆ ತಮ್ಮ ಕಚೇರಿಗೆ ಹೋಗಿದ್ದರು. ಮಕ್ಕಳನ್ನು ಸಮವಸ್ತ್ರದ ಅಳತೆಗಳನ್ನು ತೆಗೆದುಕೊಳ್ಳಲು ಟೈಲರ್ ಬಳಿ ಕರೆದೊಯ್ಯುತ್ತಿರುವುದಾಗಿ ಪತ್ನಿಗೆ ತಿಳಿಸಿ ಕಚೇರಿಯಲ್ಲಿಯೇ ಇರಲು ತಿಳಿಸಿದ್ದಾನೆ. ಚಂದ್ರಕಿಶೋರ್ ಇಬ್ಬರು ಮಕ್ಕಳನ್ನು ನೇರ ಮನೆಗೆ ಕರೆದುಕೊಂಡು ಹೋಗಿದ್ದಾನೆ.

ಇಬ್ಬರು ಮಕ್ಕಳನ್ನು ಮನೆಗೆ ಕರೆದೊಯ್ದ ನಂತರ, ಚಂದ್ರಕಿಶೋರ್ ಅವರ ಕೈಕಾಲುಗಳನ್ನು ಕಟ್ಟಿ, ತಲೆಗಳನ್ನು ನೀರು ತುಂಬಿದ ಬಕೆಟ್‌ಗಳಲ್ಲಿ ಮುಳುಗಿಸಿ ಕೊಂದಿದ್ದಾನೆ. ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪತಿ ಬಹಳ ಸಮಯವಾದರೂ ಹಿಂತಿರುಗದಿದ್ದಾಗ, ತನುಜಾ ತನ್ನ ಸಹೋದ್ಯೋಗಿಗಳೊಂದಿಗೆ ಮನೆಗೆ ಹೋಗಿದ್ದಾಳೆ. ಕಿಟಕಿಯಿಂದ ಮನೆಯೊಳಗೆ ನೋಡಿದಾಗ, ಪತಿ ಮತ್ತು ಮಕ್ಕಳು ಸತ್ತಿರುವುದು ಕಂಡು ಬಂದಿದೆ. ಪೊಲೀಸರು ಸ್ಥಳಕ್ಕೆ ತಲುಪಿ ಪರಿಶೀಲನೆ ನಡೆಸಿದ್ದು, ಚಂದ್ರಕಿಶೋರ್ ಬರೆದಿರುವ ಡೆತ್​ ನೋಟ್​​ ಸ್ಥಳದಲ್ಲಿ ಪತ್ತೆಯಾಗಿದೆ.

ಅದರಲ್ಲಿ ಚಂದ್ರಕಿಶೋರ್ ತನ್ನ ಮಕ್ಕಳು ಇಂದಿನ ಸ್ಪರ್ಧಾತ್ಮಕ ಪ್ರಪಂಚದ ಒತ್ತಡವನ್ನು ನಿಭಾಯಿಸಲು ಸಾಧ್ಯವಿಲ್ಲ ಮತ್ತು ಅವರಿಗೆ ಭವಿಷ್ಯವಿಲ್ಲ ಎಂದು ನಂಬಿದ್ದೇನೆ ಎಂದು ಬರೆದಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

SCROLL FOR NEXT