ಎ ಆರ್ ರೆಹಮಾನ್  
ದೇಶ

ಖ್ಯಾತ ಸಂಗೀತ ನಿರ್ದೇಶಕ ಎ ಆರ್ ರೆಹಮಾನ್ ಗೆ ಅಸೌಖ್ಯ: ತಪಾಸಣೆ ಮುಗಿಸಿ ಮನೆಗೆ ವಾಪಸ್

ಕಳೆದ ತಿಂಗಳು, ಎಆರ್ ರೆಹಮಾನ್ ಚೆನ್ನೈನಲ್ಲಿ ನಡೆದ ತಮ್ಮ ಸಂಗೀತ ಕಚೇರಿಯಲ್ಲಿ ಎಡ್ ಶೀರನ್ ಅವರೊಂದಿಗೆ ಪ್ರದರ್ಶನ ನೀಡಿದ್ದರು. ಒಂದು ವಾರದ ನಂತರ, ಅವರು ತಮ್ಮ ಚಿತ್ರ ಚಾವಾ ಸಂಗೀತ ಬಿಡುಗಡೆ ಸಮಾರಂಭದಲ್ಲಿಯೂ ಕಾಣಿಸಿಕೊಂಡಿದ್ದರು.

ಚೆನ್ನೈ: ಖ್ಯಾತ ಸಂಗೀತ ನಿರ್ದೇಶಕ, ಗಾಯಕ ಎ.ಆರ್‌ ರೆಹಮಾನ್ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಕಳೆದ ರಾತ್ರಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ತಪಾಸಣೆಗೆ ಹಾಜರಾಗಿದ್ದರು.

ಇದ್ದಕ್ಕಿದ್ದಂತೆ ಅಸೌಖ್ಯಕ್ಕೀಡಾದ ಕೂಡಲೇ ರೆಹಮಾನ್ ಅವರನ್ನು ಚೆನ್ನೈ ಗ್ರೀಮ್ಸ್ ರಸ್ತೆಯಲ್ಲಿ ಅಪೋಲೋ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ನಿಗದಿತ ಆರೋಗ್ಯ ತಪಾಸಣೆ ಮಾಡಿ ಕೆಲ ಹೊತ್ತಿನಲ್ಲಿ ಆಸ್ಪತ್ರೆಯಿಂದ ಮನೆಗೆ ಹಿಂತಿರುಗಿದ್ದಾರೆ ಎಂದು ಆಸ್ಪತ್ರೆ ಪ್ರಕಟಣೆ ತಿಳಿಸಿದೆ.

ಡಿಹೈಡ್ರೇಷನ್ ಸಮಸ್ಯೆಯಿಂದ ಅಸೌಖ್ಯಕ್ಕೀಡಾಗಿ ಆಸ್ಪತ್ರೆಗೆ ಬಂದಿದ್ದರು.

ಕಳೆದ ತಿಂಗಳು, ಎಆರ್ ರೆಹಮಾನ್ ಚೆನ್ನೈನಲ್ಲಿ ನಡೆದ ತಮ್ಮ ಸಂಗೀತ ಕಚೇರಿಯಲ್ಲಿ ಎಡ್ ಶೀರನ್ ಅವರೊಂದಿಗೆ ಪ್ರದರ್ಶನ ನೀಡಿದ್ದರು. ಒಂದು ವಾರದ ನಂತರ, ಅವರು ತಮ್ಮ ಚಿತ್ರ ಚಾವಾ ಸಂಗೀತ ಬಿಡುಗಡೆ ಸಮಾರಂಭದಲ್ಲಿಯೂ ಕಾಣಿಸಿಕೊಂಡಿದ್ದರು.

ಎ.ಆರ್ ರೆಹಮಾನ್ ಅವರಿಗೆ 58 ವರ್ಷ ವಯಸ್ಸಾಗಿದೆ. ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಇತ್ತೀಚೆಗೆ ಪತ್ನಿಯಿಂದ ಡಿವೋರ್ಸ್ ಪಡೆದು ಸುದ್ದಿಯಾಗಿದ್ದರು. ಸುಮಾರು 29 ವರ್ಷಗಳ ದಾಂಪತ್ಯದ ನಂತರ, ಕಳೆದ ವರ್ಷ ನವೆಂಬರ್ ನಲ್ಲಿ ಸೈರಾ ಬಾನು ಮತ್ತು ಎಆರ್ ರೆಹಮಾನ್ ಬೇರ್ಪಡುವುದಾಗಿ ಪ್ರಕಟಿಸಿದ್ದರು. ಮಾಜಿ ಪತ್ನಿ ಸಾಯಿರಾ ಬಾನು ಕೂಡ ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದರು.

ಆರೋಗ್ಯ ಸ್ಥಿರವಾಗಿದೆ ಎಂದ ಸಿಎಂ ಸ್ಟಾಲಿನ್

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ರೆಹಮಾನ್ ಅವರ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ನೀಡಿದ್ದು, ತಾವು ವೈದ್ಯರೊಂದಿಗೆ ಮಾತನಾಡಿದ್ದು ರೆಹಮಾನ್ ಅವರು ಚೆನ್ನಾಗಿದ್ದಾರೆ, ಶೀಘ್ರದಲ್ಲೇ ಆಸ್ಪತ್ರೆಯಿಂದ ಬಿಡುಗಡೆ ಹೊಂದಲಿದ್ದಾರೆ ಎಂದು ತಿಳಿಸಿದ್ದಾರೆ.

ರೆಹಮಾನ್ ಅವರ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಸುದ್ದಿ ತಿಳಿದ ತಕ್ಷಣ, ನಾನು ವೈದ್ಯರನ್ನು ಸಂಪರ್ಕಿಸಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದೆ. ಅವರು ಚೆನ್ನಾಗಿದ್ದಾರೆ ಮತ್ತು ಶೀಘ್ರದಲ್ಲೇ ಮನೆಗೆ ಮರಳುತ್ತಾರೆ ಎಂದು ವೈದ್ಯರು ಹೇಳಿದ್ದಾರೆ ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT