ಪ್ರೇಮ್‌ಚಂದ್ ಅಗರ್ವಾಲ್ 
ದೇಶ

ವಿವಾದಾತ್ಮಕ ಹೇಳಿಕೆಗೆ ಆಕ್ರೋಶ: ಉತ್ತರಾಖಂಡ ಸಚಿವ ಪ್ರೇಮ್‌ಚಂದ್ ಅಗರ್ವಾಲ್ ರಾಜೀನಾಮೆ

ಪ್ರೇಮ್‌ಚಂದ್ ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆದಿತ್ತು ಮತ್ತು ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಡೆಹ್ರಾಡೂನ್: ಅಚ್ಚರಿಯ ಘಟನೆಯೊಂದರಲ್ಲಿ, ಉತ್ತರಾಖಂಡ ಹಣಕಾಸು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರೇಮ್‌ಚಂದ್ ಅಗರ್ವಾಲ್ ಅವರು ಭಾನುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಅಗರ್ವಾಲ್ ಅವರು ಅಜಾಗರೂಕತೆಯಿಂದ ಬೆಟ್ಟದ ನಿವಾಸಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಈ ರಾಜೀನಾಮೆ ನೀಡಲಾಗಿದೆ.

ಪ್ರೇಮ್‌ಚಂದ್ ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆದಿತ್ತು ಮತ್ತು ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಹೀಗಾಗಿ ಅಗರ್ವಾಲ್ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಜೀನಾಮೆ ಸಲ್ಲಿಸುವ ಮುನ್ನ ಭಾರವಾದ ಹೃದಯದಿಂದ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಪ್ರೇಮ್‌ಚಂದ್ ಅಗರ್ವಾಲ್ ಅವರು, "ನನ್ನ ಮಾತುಗಳು ಮತ್ತು ಅದರ ಪರಿಣಾಮಕ್ಕೆ ನಾನು ಸಂಪೂರ್ಣ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತೇನೆ" ಎಂದು ಹೇಳಿದರು.

"ರಾಜ್ಯದ ಎಲ್ಲಾ ನಿವಾಸಿಗಳ ಪ್ರೀತಿ ಮತ್ತು ಆಶೀರ್ವಾದಕ್ಕೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ". ಈ ಬೆಂಬಲದ ಹೊರತಾಗಿಯೂ, ರಾಜ್ಯದಲ್ಲಿ ಸೃಷ್ಟಿಯಾಗಿರುವ ವಾತಾವರಣದಿಂದ ನನಗೆ ತೀವ್ರ ಬೇಸರವಾಗಿದೆ" ಎಂದು ಅವರು ಭಾವುಕರಾಗಿ ಹೇಳಿದರು.

ಅಗರ್ವಾಲ್ ಅವರ ವಿರುದ್ಧ ತೀವ್ರ ಟೀಕೆ ವ್ಯಕ್ತವಾಗಿದ್ದು, ಅವರ ವಿವಾದಾತ್ಮಕ ಹೇಳಿಕೆಗಳು ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ಮತ್ತು ಟ್ರೋಲಿಂಗ್‌ಗೆ ಕಾರಣವಾಗಿತ್ತು. ಇದಕ್ಕೆ ಪ್ರತಿಕ್ರಿಯೆಯಾಗಿ, ಅಗರ್ವಾಲ್ ಅಲವು ಹಲವು ಬಾರಿ ಕ್ಷಮೆಯಾಚಿಸಿದರು. ವಿಧಾನಸಭಾ ಅಧಿವೇಶನದ ಸಮಯದಲ್ಲಿಯೂ ಒಂದು ಬಾರಿ ಕ್ಷಮೆಯಾಚಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೆಂಪು ಕೋಟೆ ಬಳಿ ಕಾರು ಸ್ಫೋಟ 'ಭಯೋತ್ಪಾದಕ ದಾಳಿ': ಕೇಂದ್ರ ಸರ್ಕಾರ

ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಮುಂದುವರೆದರೆ ತಪ್ಪೇನು?- DK Shivakumar; ಸಿಎಂ ಹುದ್ದೆ ಕನಸು ಕೈಬಿಟ್ಟ DCM?

GST ಕಡಿತ, ಆಹಾರ ವಸ್ತುಗಳ ಬೆಲೆ ಇಳಿಕೆ; ದಶಕದಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿದ ಹಣದುಬ್ಬರ

Bihar Exit poll results: ಅಚ್ಚರಿ ಮೂಡಿಸಿದ Axis My India; ಜಿದ್ದಾಜಿದ್ದಿನ ಸ್ಪರ್ಧೆ ಎನ್ನುತ್ತಿದೆ ಈ ಸಮೀಕ್ಷೆ; ಯಾರಿಗೆ ಎಷ್ಟು ಸ್ಥಾನ?

ದೆಹಲಿ: ಅಕ್ರಮವಾಗಿ 14 ವೆಪನ್, ಮದ್ದುಗುಂಡು ಹೊಂದಿದ್ದ ಶಸ್ತ್ರಾಸ್ತ್ರ ಪೂರೈಕೆದಾರನ ಬಂಧನ!

SCROLL FOR NEXT