ಔರಂಗಜೇಬ್ ಸಮಾಧಿ 
ದೇಶ

Chhaava ಎಫೆಕ್ಟ್: Aurangzeb ಸಮಾಧಿ ಕೆಡವಲು ಹೆಚ್ಚಿದ ಒತ್ತಡ; 'ಮೊಘಲ್ ದೊರೆಯ ವೈಭವೀಕರಣ ಸಹಿಸಲ್ಲ'- ಸಿಎಂ Devendra Fadnavis

ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳ ನೇತೃತ್ವದ ಬಲಪಂಥೀಯ ಸಂಘಟನೆಗಳು ಮೊಘಲ್ ಚಕ್ರವರ್ತಿ ಔರಂಗಜೇಬನ ಸಮಾಧಿಯನ್ನು ಕೆಡವಬೇಕೆಂದು ಒತ್ತಾಯಿಸಿ 'ಬಾಬರಿ ಮಸೀದಿ ಮಾದರಿಯ' ಆಂದೋಲನವನ್ನು ಪ್ರಾರಂಭಿಸಿವೆ.

ಮುಂಬೈ: ಮರಾಠ ದೊರೆ ಛತ್ರಪತಿ ಶಿವಾಜಿ ಮಹಾರಾಜರ ಜನ್ಮ ದಿನಾಚರಣೆಯ ಬೆನ್ನಲ್ಲೇ ಮೊಘಲ್ ಚಕ್ರವರ್ತಿ ಔರಂಗಜೇಬನ ಸಮಾಧಿಯನ್ನು ಕೆಡವಬೇಕೆಂದು ಒತ್ತಾಯಿಸಿ ಹಿಂದೂಪರ ಸಂಘಟನೆಗಳು ಆರಂಭಿಸಿರುವ ಅಭಿಯಾನಕ್ಕೆ ಬೆಂಬಲ ಹೆಚ್ಚುತ್ತಿದೆ.

ಹೌದು.. ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳ ನೇತೃತ್ವದ ಬಲಪಂಥೀಯ ಸಂಘಟನೆಗಳು ಮೊಘಲ್ ಚಕ್ರವರ್ತಿ ಔರಂಗಜೇಬನ ಸಮಾಧಿಯನ್ನು ಕೆಡವಬೇಕೆಂದು ಒತ್ತಾಯಿಸಿ 'ಬಾಬರಿ ಮಸೀದಿ ಮಾದರಿಯ' ಆಂದೋಲನವನ್ನು ಪ್ರಾರಂಭಿಸಿವೆ.

ಇದಕ್ಕೆ ಇಂಬು ನೀಡುವಂತೆ ಆಡಳಿತರೂಢ ಬಿಜೆಪಿ ನಾಯಕರು ಮತ್ತು ಶಿವಸೇನೆ ನಾಯಕ ಹಾಗೂ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸೇರಿದಂತೆ ಹಲವಾರು ನಾಯಕರು ಈ ಬೇಡಿಕೆಯನ್ನು ಬೆಂಬಲಿಸಿದ್ದಾರೆ. ಮಹಾರಾಷ್ಟ್ರ ವಿಧಾನಸಭೆಯ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿಯೂ ಈ ವಿಷಯ ಭಾರಿ ಚರ್ಚೆಗೆ ಗ್ರಾಸವಾಗಿತ್ತು.

ಹಿಂದೂಪರ ಸಂಘಟನೆಗಳ ಎಚ್ಚರಿಕೆ

ಈಗಾಗಲೇ ಹಿಂದೂಪರ ಸಂಘಟನೆಗಳು ಔರಂಗಜೇಬ್ ಸಮಾಧಿಯನ್ನು ಸರ್ಕಾರ ಕೆಡವಬೇಕು.. ಇಲ್ಲವಾದಲ್ಲಿ ಆ ಕೆಲಸವನ್ನು ಕರಸೇವಕರು ಮಾಡುತ್ತಾರೆ ಎಂದು ಎಚ್ಚರಿಕೆ ನೀಡಿದೆ. ಅಲ್ಲದೆ ಈ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಗಡುವು ಕೂಡ ನೀಡಿದ್ದಾರೆ. ಹಿಂದೂ ಜನಜಾಗೃತಿ ಸಮಿತಿ (HJS) ಸಮಾಧಿಯ ನಿರ್ವಹಣೆಗೆ ಹಣಕಾಸಿನ ನೆರವು ನಿಲ್ಲಿಸುವಂತೆ ಸರ್ಕಾರವನ್ನು ಆಗ್ರಹಿಸಿದೆ.

ಮಹಾರಾಷ್ಟ್ರ ಮತ್ತು ಗೋವಾದ ಉಸ್ತುವಾರಿ ವಿಎಚ್‌ಪಿ ಕಾರ್ಯದರ್ಶಿ ಗೋವಿಂದ್ ಶೆಂಡೆ, ಸಾರ್ವಜನಿಕ ಜಾಗೃತಿ ಉಪಕ್ರಮಗಳೊಂದಿಗೆ ಪ್ರಾರಂಭಿಸಿ ಈ ಆಂದೋಲನವನ್ನು ಹಂತ ಹಂತವಾಗಿ ನಡೆಸಲಾಗುವುದು. "ಇದರಲ್ಲಿ ಪ್ರತಿಭಟನೆಗಳು, ಜ್ಞಾಪನಾ ಪತ್ರಗಳು, ಪ್ರತಿಕೃತಿ ದಹನ, ಸಭೆಗಳು ಮತ್ತು ಜಾಗೃತಿ ಕಾರ್ಯಕ್ರಮಗಳು ಸೇರಿವೆ. ಅಂತಿಮ ಹಂತವೆಂದರೆ ಚಲೋ ಸಂಭಾಜಿನಗರ ಮೆರವಣಿಗೆ" ಎಂದು ಅವರು ಹೇಳಿದರು.

ಈ ಬೇಡಿಕೆಗೆ ಪ್ರತಿಕ್ರಿಯಿಸಿದ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವತ್ ಇದಕ್ಕೆ ವಿರುದ್ಧವಾದ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು, ಸಮಾಧಿ ತೆರವು ಚರ್ಚೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಸಿಎಂ ಹೇಳಿದ್ದೇನು?

ರಾಜ್ಯ ಗೃಹ ಖಾತೆಯನ್ನೂ ಹೊಂದಿರುವ ಸಿಎಂ ದೇವೇಂದ್ರ ಫಡ್ನವೀಸ್ ಈ ಬಗ್ಗೆ ಮಾತನಾಡಿ, 'ಔರಂಗಜೇಬನ ಸಮಾಧಿ ಭಾರತೀಯ ಪುರಾತತ್ವ ಇಲಾಖೆಯ ರಕ್ಷಣೆಯಲ್ಲಿದೆ. ಇದನ್ನು ರಕ್ಷಿಸುವುದು ರಾಜ್ಯ ಸರ್ಕಾರದ ಕರ್ತವ್ಯ... ಆದಾಗ್ಯೂ, ಔರಂಗಜೇಬನ ವೈಭವೀಕರಣವನ್ನು ಸಹಿಸಲಾಗುವುದಿಲ್ಲ" ಎಂದು ಅವರು ಹೇಳಿದರು.

ಸಮಾಧಿಗೆ ಬಿಗಿ ಭದ್ರತೆ

ಏತನ್ಮಧ್ಯೆ, ಸಮಾಧಿ ಸಂಕೀರ್ಣದಲ್ಲಿ ರಾಜ್ಯ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ ಮತ್ತು ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಅಂದಹಾಗೆ ಔರಂಗಜೇಬನ ಸಮಾಧಿ ಮಹಾರಾಷ್ಟ್ರದ ಛತ್ರಪತಿ ಸಂಭಾಜಿ ನಗರದ ಖುಲ್ದಾಬಾದ್‌ನಲ್ಲಿದೆ. ಇದನ್ನು ಹಿಂದೆ ಔರಂಗಾಬಾದ್ ಎಂದು ಕರೆಯಲಾಗುತ್ತಿತ್ತು. ಆರನೇ ಮೊಘಲ್ ಚಕ್ರವರ್ತಿ ಔರಂಗಜೇಬನ ಸಮಾಧಿ (ನವೆಂಬರ್ 3, 1618 - ಮಾರ್ಚ್ 3, 1707), ದರ್ಗಾ-ಸಂಕೀರ್ಣದಲ್ಲಿ ಗುರುತಿಸಲಾಗದ ಸಮಾಧಿಯಾಗಿದ್ದು - ಮತ್ತು ಇದು ಭಾರತೀಯ ಪುರಾತತ್ವ ಸಮೀಕ್ಷೆ (ASI) ನಿಯಂತ್ರಣದಲ್ಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT