ಹಿಂಸಾಚಾರ ಸಂಭವಿಸಿದ ಸ್ಥಳದಲ್ಲಿ ಪೊಲೀಸರ ಪರಿಶೀಲನೆ 
ದೇಶ

Nagpur violence: ಧಾರ್ಮಿಕ ಭಾವನೆಗಳಿಗೆ ಧಕ್ಕೆ; VHP, ಬಜರಂಗದಳ ಪದಾಧಿಕಾರಿಗಳ ವಿರುದ್ಧ FIR ದಾಖಲು

ವಿಎಚ್‌ಪಿಯ ಮಹಾರಾಷ್ಟ್ರ ಮತ್ತು ಗೋವಾ ಉಸ್ತುವಾರಿ ಕಾರ್ಯದರ್ಶಿ ಗೋವಿಂದ ಶೆಂಡೆ ಮತ್ತು ಇತರರ ವಿರುದ್ಧ ಗಣೇಶ್‌ಪೇಟ್ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಾಗಿದೆ.

ನಾಗ್ಪುರ: ಮೊಘಲ್ ದೊರೆ ಔರಂಗಜೇಬ್ ಸಮಾಧಿ ತೆರವಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾಗ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆಗೆ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳದ ಕೆಲ ಪದಾಧಿಕಾರಿಗಳ ವಿರುದ್ಧ ಮಹಾರಾಷ್ಟ್ರದ ನಾಗ್ಪುರ ಪೊಲೀಸರು ಕೇಸ್ ದಾಖಲಿಸಿದ್ದಾರೆ.

ವಿಎಚ್‌ಪಿಯ ಮಹಾರಾಷ್ಟ್ರ ಮತ್ತು ಗೋವಾ ಉಸ್ತುವಾರಿ ಕಾರ್ಯದರ್ಶಿ ಗೋವಿಂದ ಶೆಂಡೆ ಮತ್ತು ಇತರರ ವಿರುದ್ಧ ಗಣೇಶ್‌ಪೇಟ್ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲಿರುವ ಔರಂಗಜೇಬ್ ಸಮಾಧಿ ತೆರವಿಗೆ ಒತ್ತಾಯಿಸಿ ವಿಎಚ್‌ಪಿ ನಡೆಸಿದ ಪ್ರತಿಭಟನೆ ವೇಳೆ ಸಮುದಾಯವೊಂದರ ಪವಿತ್ರ ಗ್ರಂಥವನ್ನು ಸುಟ್ಟು ಹಾಕಲಾಗಿದೆ ಎಂಬ ವದಂತಿಗಳ ಮಧ್ಯೆ ಸೋಮವಾರ ಸಂಜೆ 7.30 ರ ಸುಮಾರಿಗೆ ಮಹಲ್ ಪ್ರದೇಶದ ಸೆಂಟ್ರಲ್ ನಾಗ್ಪುರದ ಚಿಟ್ನಿಸ್ ಪಾರ್ಕ್‌ನಲ್ಲಿ ಹಿಂಸಾಚಾರ ಭುಗಿಲೆದ್ದಿತು.

ಪ್ರತಿಭಟನೆ ನಂತರ ಪ್ರತಿಭಟನಾಕಾರರ ವಿರುದ್ಧ ದೂರು ದಾಖಲಿಸಲಾಗಿದ್ದು, ಸಮುದಾಯವೊಂದರ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದೂರಿನ ಆಧಾರದ ಮೇಲೆ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ ಎಂದು ಗಣೇಶಪೇಟ್ ಪೊಲೀಸ್‌ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಮೋಲ್ ಠಾಕ್ರೆ, ಡಾ ಮಹಾಜನ್, ತಯಾನಿ, ರಜತ್ ಪುರಿ, ಸುಶೀಲ್ ಸೇರಿದಂತೆ ಇತರ ಕೆಲ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಪದಾಧಿಕಾರಿಗಳ ಹೆಸರನ್ನು ಎಫ್ ಐಆರ್ ನಲ್ಲಿ ಉಲ್ಲೇಖಿಸಲಾಗಿದೆ. ಆದರೆ ಇದುವರೆಗೆ ಯಾರ ಬಂಧನವೂ ಆಗಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ