ದಿಶಾ ಸಾಲಿಯಾನ್ 
ದೇಶ

Disha Salian ಸಾವು ಪ್ರಕರಣ: 'ದಿಶಾ ಮೇಲೆ ಸಾಮೂಹಿಕ ಅತ್ಯಾಚಾರ, Aaditya Thackeray ವಿರುದ್ಧ FIR ಹಾಕಿ'; ತಂದೆ ಸತೀಶ್ ಸಾಲಿಯಾನ್ ಹೈಕೋರ್ಟ್ ಅರ್ಜಿ

ಶಾಸಕ ಆದಿತ್ಯ ಠಾಕ್ರೆ ಮತ್ತು ಇತರರ ವಿರುದ್ಧ ಸಿಬಿಐ ತನಿಖೆ ಮತ್ತು ಎಫ್‌ಐಆರ್ ದಾಖಲಿಸುವಂತೆ ಕೋರಿ ಅವರ ತಂದೆ ಸತೀಶ್ ಸಾಲಿಯನ್ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಮುಂಬೈ: ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ Disha Salian ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನೆ (UBT) ಮುಖ್ಯಸ್ಥ ಉದ್ಧವ್ ಠಾಕ್ರೆ ಪುತ್ರ ಆದಿತ್ಯಾ ಠಾಕ್ರೆ ವಿರುದ್ಧ ಎಫ್ಐಆರ್ ದಾಖಲಿಸಬೇಕು ಎಂದು ದಿಶಾ ತಂದೆ ಸತೀಶ್ ಸಾಲಿಯಾನ್ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಶಾಸಕ ಆದಿತ್ಯ ಠಾಕ್ರೆ ಮತ್ತು ಇತರರ ವಿರುದ್ಧ ಸಿಬಿಐ ತನಿಖೆ ಮತ್ತು ಎಫ್‌ಐಆರ್ ದಾಖಲಿಸುವಂತೆ ಕೋರಿ ಅವರ ತಂದೆ ಸತೀಶ್ ಸಾಲಿಯನ್ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಈ ವಿಚಾರ ಇದೀಗ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸದಸ್ಯರ ನಡುವೆ ಕಲಹಕ್ಕೆ ಕಾರಣವಾಗಿದೆ.

ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ವ್ಯವಸ್ಥಾಪಕ ದಿಶಾ ಜೂನ್ 8, 2020 ರಂದು ಉಪನಗರ ಮಲಾಡ್‌ನಲ್ಲಿರುವ ಎತ್ತರದ ಕಟ್ಟಡದ 14 ನೇ ಮಹಡಿಯಿಂದ ಬಿದ್ದು ನಿಧನರಾಗಿದ್ದರು. ನಂತರ ಪೊಲೀಸರು ಆಕಸ್ಮಿಕ ಸಾವಿನ ವರದಿ ಪ್ರಕರಣವನ್ನು ದಾಖಲಿಸಿಕೊಂಡಿದ್ದರು. ಆಗ ನಡೆದಿದ್ದ ಸಿಐಡಿ ತನಿಖೆ ಕೂಡ ಯಾವುದೇ ಅಕ್ರಮ ಕಂಡುಬಂದಿಲ್ಲ ಎಂದು ವರದಿ ನೀಡಿತ್ತು. ಆದರೆ ಇದೀಗ ಈ ಸಾವು ಸಾಮಾನ್ಯ ಸಾವಲ್ಲ.. ದಿಶಾ ಸಾವಿನ ಹಿಂದೆ ಆದಿತ್ಯ ಠಾಕ್ರೆ ಮತ್ತು ಇತರರ ಕೈವಾಡವಿದೆ ಎಂದು ಆರೋಪಿಸಲಾಗುತ್ತಿದೆ.

ದಿಶಾ ಮೇಲೆ ಸಾಮೂಹಿಕ ಅತ್ಯಾಚಾರ

ಜೂನ್ 8 ರಂದು ದಿಶಾ ತಮ್ಮ ಮನೆಯಲ್ಲಿ ಪಾರ್ಟಿಯನ್ನು ಆಯೋಜಿಸಿದ್ದರು, ಅದರಲ್ಲಿ ಆದಿತ್ಯ, ನಟರಾದ ಸೂರಜ್ ಪಾಂಚೋಲಿ ಮತ್ತು ಡಿನೋ ಮೋರಿಯಾ ಸೇರಿದಂತೆ ಇತರರು ಭಾಗವಹಿಸಿದ್ದರು ಎಂದು ಸತೀಶ್ ಸಾಲಿಯಾನ್ ತಾವು ಸಲ್ಲಿಸಿರುವ ಅರ್ಜಿಯಲ್ಲಿ ಹೇಳಿದ್ದಾರೆ ಎನ್ನಲಾಗಿದೆ. ಪ್ರತ್ಯಕ್ಷದರ್ಶಿಗಳ ಹೇಳಿಕೆಗಳನ್ನು ಉಲ್ಲೇಖಿಸಿ, ದಿಶಾ ಅವರನ್ನು "ಸಾಮೂಹಿಕ ಅತ್ಯಾಚಾರ, ಮಾಡಿ ಬಲವಂತವಾಗಿ ಬಂಧಿಸಿ ಕ್ರೂರ ಲೈಂಗಿಕ ದೌರ್ಜನ್ಯಕ್ಕೆ ಒಳಪಡಿಸಲಾಗಿದೆ" ಎಂದು ಅವರು ಅರ್ಜಿಯಲ್ಲಿ ಹೇಳಿದ್ದಾರೆ.

ಆದಿತ್ಯಾ ತಪ್ಪು ಮಾಡಿಲ್ಲ: ಉದ್ಧವ್ ಠಾಕ್ರೆ

ಇನ್ನು ಈ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಉದ್ಧವ್ ಠಾಕ್ರೆ, ದಿಶಾ ಸಾವಿನ ವಿಚಾರ ಮುಂದಿಟ್ಟುಕೊಂಡು ಬಿಜೆಪಿ ಕ್ಷುಲ್ಲಕ ರಾಜಕೀಯ ಮಾಡುತ್ತಿದೆ. ದಿಶಾ ಕುಟುಂಬಸ್ಥರನ್ನು ಬಳಸಿಕೊಂಡು ಆದಿತ್ಯಾನನ್ನು ಸಿಲುಕಿಸಲು ಯತ್ನಿಸುತ್ತಿದೆ. ಆದಿತ್ಯ ಯಾವುದೇ ತಪ್ಪು ಮಾಡಿಲ್ಲ, ಆದ್ದರಿಂದ ಅವರು ಏಕೆ ಭಯಪಡಬೇಕು? ನಾವು ಯಾವುದೇ ತನಿಖೆಗೆ ಮುಕ್ತರಾಗಿದ್ದೇವೆ. ನಾಗ್ಪುರ ಹಿಂಸಾಚಾರ ಪ್ರಕರಣವನ್ನು ತಣ್ಣಗಾಗಿಸಲು ಬಿಜೆಪಿ ನಾಯಕರು ಇದೀಗ ದಿಶಾ ಪ್ರಕರಣವನ್ನು ಮುನ್ನಲೆಗೆ ತಂದಿದ್ದಾರೆ. ದಿಶಾ ಸಾಲಿಯಾನ್ ವಿಷಯವನ್ನು ಉದ್ದೇಶಪೂರ್ವಕವಾಗಿ ಕೆಣಕಲಾಗಿದೆ" ಎಂದು ಉದ್ಧವ್ ಹೇಳಿದರು.

ಅಂತೆಯೇ ಆದಿತ್ಯಾ ಠಾಕ್ರೆ ಮಾತನಾಡಿ, ಈ ವಿಷಯವು ನ್ಯಾಯಾಲಯದ ವ್ಯಾಪ್ತಿಯಲ್ಲಿದೆ. ಆದ್ದರಿಂದ ಅವರು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.

ವಿಧಾನಸಭೆಯಲ್ಲಿ ಕೋಲಾಹಲ

ಇನ್ನು ದಿಶಾ ಸಾಲಿಯಾನ್ ತಂದೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸುತ್ತಲೇ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಈ ವಿಚಾರ ವ್ಯಾಪಕ ಕೋಲಾಹಲಕ್ಕೆ ಕಾರಣವಾಗಿದೆ. ಮಹಾಯುತಿ ಶಾಸಕರು ಘೋಷಣೆಗಳನ್ನು ಕೂಗುತ್ತಾ ಸದನದ ಬಾವಿಗಿಳಿದು ದಿಶಾ ಸಾವಿನ ತನಿಖೆಗೆ ಒತ್ತಾಯಿಸಿದರು. ಗೃಹ ಖಾತೆ ರಾಜ್ಯ ಸಚಿವ ಯೋಗೇಶ್ ಕದಮ್ ಅವರು ಎಸ್‌ಐಟಿ ತನಿಖೆ ಇನ್ನೂ ಮುಂದುವರೆದಿದೆ ಮತ್ತು ಸಾಲಿಯಾನ್ ಅವರ ತಂದೆ ರಾಜ್ಯ ಸರ್ಕಾರವನ್ನು ತಮ್ಮ ಅರ್ಜಿಯಲ್ಲಿ ಪ್ರತಿವಾದಿಯನ್ನಾಗಿ ಮಾಡಿದ್ದಾರೆ ಎಂದು ಹೇಳಿದರು. ಅಂತೆಯೇ "ನಾವು ನ್ಯಾಯಾಲಯದ ಆದೇಶದಂತೆ ಕಾರ್ಯನಿರ್ವಹಿಸುತ್ತೇವೆ. ತಪ್ಪಿತಸ್ಥರು, ಅವರು ಎಷ್ಟೇ ಪ್ರಭಾವಿಗಳಾಗಿದ್ದರೂ ಸಹ, ಅವರನ್ನು ಬಿಡಲಾಗುವುದಿಲ್ಲ" ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT