ವೆಂಕಟೇಶ್ವರ ಸ್ವಾಮಿ ದೇವಾಲಯ 
ದೇಶ

ತಿರುಮಲ: ವೆಂಕಟೇಶ್ವರ ದೇವಾಲಯದಲ್ಲಿ ಹಿಂದೂಗಳಿಗೆ ಮಾತ್ರ ಉದ್ಯೋಗ- ಸಿಎಂ ಚಂದ್ರಬಾಬು ನಾಯ್ಡು

ತಿರುಮಲ ದೇಗುಲದಲ್ಲಿ ಹಿಂದೂಗಳಿಗೆ ಮಾತ್ರ ಉದ್ಯೋಗ ನೀಡಬೇಕು. ಸದ್ಯ ಬೇರೆ ಧರ್ಮದ ವ್ಯಕ್ತಿಗಳು ಕೆಲಸ ಮಾಡುತ್ತಿದ್ದರೆ ಅವರ ಭಾವನೆಗಳಿಗೆ ಧಕ್ಕೆಯಾಗದಂತೆ ಬೇರೆಡೆಗೆ ಸ್ಥಳಾಂತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ತಿರುಮಲ: ಆಂಧ್ರಪ್ರದೇಶದ ಪ್ರಸಿದ್ಧ ಯಾತ್ರಾ ಕ್ಷೇತ್ರ ತಿರುಮಲದ ವೆಂಕಟೇಶ್ವರ ದೇವಾಲಯದಲ್ಲಿ ಹಿಂದೂಗಳನ್ನು ಮಾತ್ರ ಕೆಲಸಕ್ಕೆ ನೇಮಿಸಿಕೊಳ್ಳಬೇಕು. ಸದ್ಯ ಅಲ್ಲಿ ಇತರ ಸಮುದಾಯದ ವ್ಯಕ್ತಿಗಳು ಕೆಲಸ ಮಾಡುತ್ತಿದ್ದರೆ ಅವರ ಭಾವನೆಗಳಿಗೆ ಧಕ್ಕೆಯಾಗದಂತೆ ಅವರನ್ನು ಬೇರೆಡೆಗೆ ಸ್ಥಳಾಂತರಿಸಲಾಗುವುದು ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಶುಕ್ರವಾರ ಹೇಳಿದ್ದಾರೆ.

ತಿರುಮಲ ದೇಗುಲದಲ್ಲಿ ಹಿಂದೂಗಳಿಗೆ ಮಾತ್ರ ಉದ್ಯೋಗ ನೀಡಬೇಕು. ಸದ್ಯ ಬೇರೆ ಧರ್ಮದ ವ್ಯಕ್ತಿಗಳು ಕೆಲಸ ಮಾಡುತ್ತಿದ್ದರೆ ಅವರ ಭಾವನೆಗಳಿಗೆ ಧಕ್ಕೆಯಾಗದಂತೆ ಬೇರೆಡೆಗೆ ಸ್ಥಳಾಂತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಭಾರತದಾದ್ಯಂತ ಎಲ್ಲಾ ರಾಜ್ಯಗಳ ರಾಜಧಾನಿಗಳಲ್ಲಿ ವೆಂಕಟೇಶ್ವರ ಸ್ವಾಮಿ ದೇವಾಲಯಗಳನ್ನು ನಿರ್ಮಿಸುವ ಯೋಜನೆಯನ್ನು ಅವರು ಘೋಷಿಸಿದ್ದಾರೆ. ವಿದೇಶಗಳಲ್ಲಿಯೂ ವೆಂಕಟೇಶ್ವರನ ದೇವಾಲಯ ಸ್ಥಾಪನೆಯಾಗಲಿ ಎಂದು ಅನೇಕ ಭಕ್ತರು ಬಯಸುತ್ತಿದ್ದಾರೆ ಎಂದರು.

ಸೆವೆನ್ ಹಿಲ್ಸ್ ಪ್ರದೇಶದ ಬಳಿಯ ವಾಣಿಜ್ಯ ಚಟುವಟಿಕೆಗಳ ಬಗ್ಗೆ ಮಾತನಾಡಿದ ನಾಯ್ಡು, ಈ ಪ್ರದೇಶಕ್ಕೆ ಹೊಂದಿಕೊಂಡಿರುವ ಮುಮ್ತಾಜ್ ಹೋಟೆಲ್‌ಗೆ ಈ ಹಿಂದೆ ಅನುಮತಿ ನೀಡಲಾಗಿತ್ತು. ಆದರೆ, ಇದೀಗ 35.32 ಎಕರೆ ಜಾಗದಲ್ಲಿ ಹೋಟೆಲ್ ನಿರ್ಮಾಣಕ್ಕೆ ಮಂಜೂರಾತಿಯನ್ನು ರದ್ದುಗೊಳಿಸಲು ಸರ್ಕಾರ ನಿರ್ಧರಿಸಿದೆ.

ಸೆವೆನ್ಸ್ ಹಿಲ್ಸ್ ಬಳಿ ವ್ಯಾಪಾರೀಕರಣ ಬೇಡ ಎಂದು ಚಂದ್ರಬಾಬು ನಾಯ್ಡು ಪ್ರತಿಪಾದಿಸಿದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT