ದೇಶ

ಮದುವೆಯಿಂದ ನನ್ನ ಸಂತೋಷ ಹಾಳು: ಪತ್ನಿಯ ಕಾಟ ತಡೆಯಲಾರದೇ Instagram live ನಲ್ಲಿ ವ್ಯಕ್ತಿ ಆತ್ಮಹತ್ಯೆ!

ಪೊಲೀಸರು ಇಬ್ಬರು ಮಹಿಳೆಯರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಶಿವಪ್ರಕಾಶ್ ತ್ರಿಪಾಠಿ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯಾಗಿದ್ದಾನೆ.

ಭೋಪಾಲ್: ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಇನ್‌ಸ್ಟಾಗ್ರಾಮ್ ಲೈವ್ ಸೆಷನ್‌ನಲ್ಲಿ ತನ್ನ ಪತ್ನಿ ಮತ್ತು ಅತ್ತೆಯನ್ನು ದೂಷಿಸುತ್ತಾ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪೊಲೀಸರು ಇಬ್ಬರು ಮಹಿಳೆಯರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಶಿವಪ್ರಕಾಶ್ ತ್ರಿಪಾಠಿ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯಾಗಿದ್ದಾನೆ. ಇದನ್ನು ಅವರ ಪತ್ನಿಯೇ ನೋಡಿದ್ದಾರೆ ಎಂದು ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಉಮೇಶ್ ಪ್ರಜಾಪತಿ ಹೇಳಿದ್ದಾರೆ.

ಆ ವ್ಯಕ್ತಿ ಎರಡು ವರ್ಷಗಳ ಹಿಂದೆ ಪ್ರಿಯಾ ಶರ್ಮಾ ಎಂಬುವವರನ್ನು ವಿವಾಹವಾಗಿದ್ದರು ಸ್ವಲ್ಪ ಸಮಯದ ನಂತರ, ತನ್ನ ಪತ್ನಿ ಇನ್ನೊಬ್ಬ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದಾಳೆಂದು ಅವನಿಗೆ ಸ್ಪಷ್ಟವಾಗಿ ತಿಳಿದುಬಂದಿತು ಎಂದು ಅಧಿಕಾರಿ ಹೇಳಿದ್ದಾರೆ.

ಏತನ್ಮಧ್ಯೆ, ಅಪಘಾತದಲ್ಲಿ ತ್ರಿಪಾಠಿ ತೀವ್ರವಾಗಿ ಗಾಯಗೊಂಡಿದ್ದರು. ನಂತರ ಆತನ ಹೆಂಡತಿ ತನ್ನ ಹೆತ್ತವರ ಮನೆಗೆ ಹೋದಳು ಎಂದು ಅಧಿಕಾರಿ ಹೇಳಿದ್ದಾರೆ.

ಇನ್‌ಸ್ಟಾಗ್ರಾಮ್ ಕ್ಲಿಪ್‌ನಲ್ಲಿ, ಆ ವ್ಯಕ್ತಿ ತನ್ನ ಅತ್ತೆ ಮತ್ತು ಹೆಂಡತಿಯಿಂದಾಗಿ ನಾನು ನನ್ನ ಜೀವನವನ್ನು ಕೊನೆಗೊಳಿಸುತ್ತಿದೇನೆ ಎಂದು ಹೇಳುತ್ತಾನೆ. ಮದುವೆ ತನ್ನ ಸಂತೋಷವನ್ನು ಹಾಳುಮಾಡಿದೆ ಎಂದು ಅವರು ಹೇಳಿಕೊಂಡಿದ್ದಾರೆ. ಪೊಲೀಸರು ಆ ವ್ಯಕ್ತಿಯ ಪತ್ನಿ ಮತ್ತು ಅತ್ತೆಯನ್ನು ಬಂಧಿಸಿದ್ದಾರೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT