ಯತಿ ನರಸಿಂಹಾನಂದ ಗಿರಿ 
ದೇಶ

ಮಹಾತ್ಮ ಗಾಂಧಿ ಬಗ್ಗೆ ಅವಹೇಳನಕಾರಿ ಹೇಳಿಕೆ: ಯತಿ ನರಸಿಂಹಾನಂದ್ ವಿರುದ್ಧ ಪ್ರಕರಣ ದಾಖಲು

ನರಸಿಂಹಾನಂದ ಅವರು ಗಾಜಿಯಾಬಾದ್ ಪೊಲೀಸ್ ಕಮಿಷನರ್ ಮತ್ತು ಲೋನಿಯ ಸಹಾಯಕ ಪೊಲೀಸ್ ಕಮಿಷನರ್ ವಿರುದ್ಧ ನಿಂದನೀಯ ಪದಗಳನ್ನು ಬಳಸಿದ್ದಾರೆ ಎಂದು ದೂರುದಾರರು ಉಲ್ಲೇಖಿಸಿದ್ದಾರೆ.

ಗಾಜಿಯಾಬಾದ್: ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ವಿವಾದಿತ ಅರ್ಚಕ ಯತಿ ನರಸಿಂಹಾನಂದ ಗಿರಿ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಸಂಬಂಧ ದಾಸ್ನಾ ದೇವಿ ದೇವಾಲಯದ ಅರ್ಚಕರು ಗಾಜಿಯಾಬಾದ್ ನಲ್ಲಿ ಎಫ್ ಐಆರ್ ದಾಖಲಿಸಿದ್ದು, ನರಸಿಂಹಾನಂದ್ ಅವರು ಮಹಾತ್ಮ ಗಾಂಧಿ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದು, ಧಾರ್ಮಿಕ ಭಾವನೆಗಳನ್ನು ಕೆರಳಿಸುವ, ಕ್ರಿಮಿನಲ್ ಬೆದರಿಕೆ, ಅವಮಾನ, ಮಾನಹಾನಿ ಮತ್ತು ಸಾರ್ವಜನಿಕ ಶಾಂತಿಯನ್ನು ಕದಡುವ ಉದ್ದೇಶದ ಪದಗಳನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ.

ನರಸಿಂಹಾನಂದ ಅವರು ಗಾಜಿಯಾಬಾದ್ ಪೊಲೀಸ್ ಕಮಿಷನರ್ ಮತ್ತು ಲೋನಿಯ ಸಹಾಯಕ ಪೊಲೀಸ್ ಕಮಿಷನರ್ ವಿರುದ್ಧ ನಿಂದನೀಯ ಪದಗಳನ್ನು ಬಳಸಿದ್ದಾರೆ ಎಂದು ದೂರುದಾರರು ಉಲ್ಲೇಖಿಸಿದ್ದಾರೆ.

ವೀಡಿಯೋದಲ್ಲಿ ದ್ವೇಷ ಹರಡುವ ಮತ್ತು ಜಿಲ್ಲೆಯ ಉನ್ನತ ಪೊಲೀಸ್ ಅಧಿಕಾರಿಗಳನ್ನು ನಿಂದಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ನರಸಿಂಹಾನಂದ ಅವರ ಹೇಳಿಕೆಗಳು ಕೋಮು ಸೌಹಾರ್ದತೆಯನ್ನು ಕೆರಳಿಸುವ ಮತ್ತು ಭಂಗಗೊಳಿಸುವ ಉದ್ದೇಶದಿಂದ ಕೂಡಿವೆ ಎಂದು ಆರೋಪಿಸಿ ಶುಕ್ರವಾರ ಅಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ (ಗ್ರಾಮೀಣ) ಸುರೇಂದ್ರ ನಾಥ್ ತಿವಾರಿ ಹೇಳಿದ್ದಾರೆ.

ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT