ಭಾರತೀಯ ಸೇನೆ 
ದೇಶ

ಜಮ್ಮು-ಕಾಶ್ಮೀರ: ದೋಡಾ ಜಿಲ್ಲೆಯಲ್ಲಿ ಉಗ್ರರ ಅಡಗುದಾಣ ಪತ್ತೆ; ಶಸ್ತ್ರಾಸ್ತ್ರಗಳು ವಶಕ್ಕೆ

ಅನುಮಾನಾಸ್ಪದ ಚಲನವಲನಗಳ ವರದಿಗಳ ಹಾಗೂ ಗುಪ್ತಚರ ಮಾಹಿತಿಯ ಮೇರೆಗೆ ಭದೇರ್ವಾದ ಭಲ್ರಾ ಅರಣ್ಯ ಪ್ರದೇಶದಲ್ಲಿ ಸ್ಥಳೀಯ ಪೊಲೀಸರು ಮತ್ತು ಸೇನೆ ವಿಶೇಷ ಕಾರ್ಯಾಚರಣೆ ಗುಂಪು(ಎಸ್‌ಒಜಿ) ಕಾರ್ಯಾಚರಣೆಗಿಳಿದಿತ್ತು.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಭಾರೀ ಕಾರ್ಯಾಚರಣೆ ನಡೆಸಿದ್ದು, ದೋಡಾ ಜಿಲ್ಲೆಯಲ್ಲಿ ಉಗ್ರರ ಬೃಹತ್ ಅಡಗುದಾಣವನ್ನು ಧ್ವಂಸ ಮಾಡಿ, ಅಲ್ಲಿದ್ದ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದೆ.

ಅನುಮಾನಾಸ್ಪದ ಚಲನವಲನಗಳ ವರದಿಗಳ ಹಾಗೂ ಗುಪ್ತಚರ ಮಾಹಿತಿಯ ಮೇರೆಗೆ ಭದೇರ್ವಾದ ಭಲ್ರಾ ಅರಣ್ಯ ಪ್ರದೇಶದಲ್ಲಿ ಸ್ಥಳೀಯ ಪೊಲೀಸರು ಮತ್ತು ಸೇನೆ ವಿಶೇಷ ಕಾರ್ಯಾಚರಣೆ ಗುಂಪು(ಎಸ್‌ಒಜಿ) ಕಾರ್ಯಾಚರಣೆಗಿಳಿದಿತ್ತು.

ಶೋದ ಕಾರ್ಯಾಚರಣೆ ವೇಳೆ ಉಗ್ರರ ಅಡಗುದಾಣ ಪತ್ತೆಯಾಗಿದೆ. ಕಾರ್ಯಾಚರಣೆ ವೇಳೆ ಯಾರನ್ನು ಬಂಧನಕ್ಕೊಳಪಡಿಸಿಲ್ಲ. ಆದರೆ, ಸ್ಫೋಟಕ ವಸ್ತು ಹಾಗೂ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.

ಈ ನಡುವೆ ಪಕ್ಕದ ಕಿಶ್ತ್‌ವಾರ್ ಜಿಲ್ಲೆಯ ಗುರಿನಾಲ್, ಥಾಥ್ರಿ ಮತ್ತು ಚತ್ರೂ ಅರಣ್ಯದಲ್ಲಿ ಪೊಲೀಸರು, ಸೇನೆ ಮತ್ತು ಸಿಆರ್‌ಪಿಎಫ್ ಜಂಟಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

ಶಾಂತಿ ಮಾತುಕತೆ ವಿಫಲ: ಅಮೆರಿಕ ಟೆಹ್ರಾನ್‌ನ ವಿಶ್ವಾಸ ಗಳಿಸಲು ಸಾಧ್ಯವಾಗಲಿಲ್ಲ; ಇರಾನ್ ಸ್ಪೀಕರ್

SCROLL FOR NEXT