ಯಶವಂತ್ ವರ್ಮಾ PTI
ದೇಶ

ಕಂತೆ ಕಂತೆ ಹಣ ಪತ್ತೆ ಪ್ರಕರಣ: ನ್ಯಾ. ಯಶವಂತ್ ವರ್ಮಾ ನ್ಯಾಯಾಂಗ ಕರ್ತವ್ಯ ನಿರ್ವಹಿಸದಂತೆ ಹೈಕೋರ್ಟ್ ಆದೇಶ

ವಿಷಯದ ಗಂಭೀರತೆಯನ್ನು ಪರಿಗಣಿಸಿ ಸಂಜೀವ್ ಖನ್ನಾ ಅವರು ಶನಿವಾರ ಮೂವರು ಸದಸ್ಯರ ಆಂತರಿಕ ತನಿಖಾ ಸಮಿತಿಯನ್ನು ರಚಿಸಿದರು.

ನವದೆಹಲಿ: ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ನ್ಯಾಯಾಂಗ ಕರ್ತವ್ಯ ನಿರ್ವಹಿಸದಂತೆ ದೆಹಲಿ ಹೈಕೋರ್ಟ್ ಆದೇಶ ನೀಡಿದೆ. ಇತ್ತೀಚಿನ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು, ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನ್ಯಾಯಾಂಗ ಕೆಲಸವನ್ನು ಮುಂದಿನ ಆದೇಶದವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಿಂತೆಗೆದುಕೊಳ್ಳಲಾಗುತ್ತದೆ ಎಂದು ನೋಟಿಸ್‌ನಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ಆದಾಗ್ಯೂ, ಈ ನಿರ್ಧಾರವನ್ನು ಏಕೆ ತೆಗೆದುಕೊಳ್ಳಲಾಗಿದೆ ಎಂಬುದು ಈ ಸೂಚನೆಯಲ್ಲಿ ಸ್ಪಷ್ಟವಾಗಿಲ್ಲ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (CJI) ಸಂಜೀವ್ ಖನ್ನಾ ಅವರ ನಿರ್ದೇಶನದ ನಂತರ ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆ) ದೇವೇಂದ್ರ ಕುಮಾರ್ ಉಪಾಧ್ಯಾಯ ಅವರು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ವಾಸ್ತವವಾಗಿ, ಸಂಜೀವ್ ಖನ್ನಾ ಅವರು ಈ ಘಟನೆ ಸಂಬಂಧ ಒಂದು ನಿರ್ಧಾರ ತೆಗೆದುಕೊಳ್ಳುವವರೆಗೂ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರಿಗೆ ಯಾವುದೇ ನ್ಯಾಯಾಂಗ ಕೆಲಸವನ್ನು ನಿಯೋಜಿಸಬೇಡಿ ಎಂದು ದೆಹಲಿ ಹೈಕೋರ್ಟ್‌ಗೆ ನಿರ್ದೇಶನ ನೀಡಿದ್ದರು.

ವಿಷಯದ ಗಂಭೀರತೆಯನ್ನು ಪರಿಗಣಿಸಿ ಸಂಜೀವ್ ಖನ್ನಾ ಅವರು ಶನಿವಾರ ಮೂವರು ಸದಸ್ಯರ ಆಂತರಿಕ ತನಿಖಾ ಸಮಿತಿಯನ್ನು ರಚಿಸಿದರು. ಸಮಿತಿಯಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು, ಹಿಮಾಚಲ ಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಿ.ಎಸ್. ಸಂಧವಾಲಿಯಾ ಮತ್ತು ಕರ್ನಾಟಕ ಹೈಕೋರ್ಟ್‌ನ ನ್ಯಾಯಾಧೀಶೆ ಅನು ಶಿವರಾಮನ್ ಇದ್ದಾರೆ.

ನ್ಯಾಯಮೂರ್ತಿ ಯಶವಂತ್ ವರ್ಮಾ ತಮ್ಮ ವಿರುದ್ಧದ ಆರೋಪಗಳಿಗೆ ಪ್ರತಿಕ್ರಿಯಿಸಿದ್ದು ಈ ಹಣವು ತಮಗೆ ಅಥವಾ ತಮ್ಮ ಕುಟುಂಬದ ಸದಸ್ಯರಿಗೆ ಸೇರಿಲ್ಲ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ