ದೇಶ

ನಾಗ್ಪುರ ಹಿಂಸಾಚಾರ: ಬುಲ್ಡೋಜರ್ ನುಗ್ಗಿಸಿ ಪ್ರಮುಖ ಆರೋಪಿ ಫಹೀಮ್ ಖಾನ್ ಮನೆ ಕೆಡವಿದ ಫಡ್ನವಿಸ್ ಸರ್ಕಾರ, Video!

ನಾಗ್ಪುರದ ಮಹಾನಗರ ಪಾಲಿಕೆ ಅಧಿಕಾರಿಗಳು ಇಂದು ಫಹೀಮ್ ಖಾನ್ ಮನೆಯ ಅಕ್ರಮ ಭಾಗವನ್ನು ಕೆಡವಿದ್ದಾರೆ. ಮಾರ್ಚ್ 17ರಂದು ನಗರದಲ್ಲಿ ಭುಗಿಲೆದ್ದ ಕೋಮು ಹಿಂಸಾಚಾರದಲ್ಲಿ ಖಾನ್ ಪ್ರಮುಖ ಆರೋಪಿಯಾಗಿದ್ದಾನೆ.

ನಾಗ್ಪುರದ ಮಹಾನಗರ ಪಾಲಿಕೆ ಅಧಿಕಾರಿಗಳು ಇಂದು ಫಹೀಮ್ ಖಾನ್ ಮನೆಯ ಅಕ್ರಮ ಭಾಗವನ್ನು ಕೆಡವಿದ್ದಾರೆ. ಮಾರ್ಚ್ 17ರಂದು ನಗರದಲ್ಲಿ ಭುಗಿಲೆದ್ದ ಕೋಮು ಹಿಂಸಾಚಾರದಲ್ಲಿ ಖಾನ್ ಪ್ರಮುಖ ಆರೋಪಿಯಾಗಿದ್ದಾನೆ. ಖಾನ್ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಾಗಿದೆ. ಫಹೀಮ್ ಅಲ್ಪಸಂಖ್ಯಾತ ಪ್ರಜಾಸತ್ತಾತ್ಮಕ ಪಕ್ಷದ (MDP) ಪ್ರಮುಖ ನಾಯಕನಾಗಿದ್ದು, ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ 100ಕ್ಕೂ ಹೆಚ್ಚು ಜನರಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ.

ಅಧಿಕಾರಿಗಳ ಪ್ರಕಾರ, ನಾಗ್ಪುರ ಮುನ್ಸಿಪಲ್ ಕಾರ್ಪೊರೇಷನ್ (NMC) ಕೆಲವು ದಿನಗಳ ಹಿಂದೆ ಖಾನ್ ಅವರಿಗೆ ನೋಟಿಸ್ ನೀಡಿತ್ತು. ಅದರಲ್ಲಿ ವಿವಿಧ ನ್ಯೂನತೆಗಳು ಮತ್ತು (ಅವರ ಮನೆಯ) ಕಟ್ಟಡ ಯೋಜನೆಗೆ ಅನುಮೋದನೆ ನೀಡದಿರುವುದನ್ನು ಉಲ್ಲೇಖಿಸಲಾಗಿತ್ತು. ಈ ಮನೆ ಇಲ್ಲಿನ ಯಶೋಧರ ನಗರ ಪ್ರದೇಶದ ಸಂಜಯ್ ಬಾಗ್ ಕಾಲೋನಿಯಲ್ಲಿದ್ದು, ಖಾನ್ ಅವರ ಪತ್ನಿಯ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಅವರು ಹೇಳಿದರು. ಎಂಡಿಪಿ ನಗರ ಮುಖ್ಯಸ್ಥ ಖಾನ್ ಪ್ರಸ್ತುತ ಜೈಲಿನಲ್ಲಿದ್ದಾರೆ. ಮಾರ್ಚ್ 17ರಂದು ಛತ್ರಪತಿ ಸಂಭಾಜಿನಗರದಲ್ಲಿರುವ ಔರಂಗಜೇಬನ ಸಮಾಧಿಯನ್ನು ತೆಗೆದುಹಾಕುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಧಾರ್ಮಿಕ ಶಾಸನಗಳನ್ನು ಹೊಂದಿರುವ ಹಾಳೆಯನ್ನು ಸುಟ್ಟುಹಾಕಲಾಗಿದೆ ಎಂಬ ವದಂತಿ ಹರಡಿದ ನಂತರ ಹಿಂಸಾಚಾರ ಭುಗಿಲೆದ್ದಿತು.

ನಗರದ ಹಲವು ಭಾಗಗಳಲ್ಲಿ ಭಾರಿ ಕಲ್ಲು ತೂರಾಟ ನಡೆದಿದ್ದು ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ಘರ್ಷಣೆ ವೇಳೆ ಮೂವರು ಉಪ ಪೊಲೀಸ್ ಆಯುಕ್ತರ ಮಟ್ಟದ ಅಧಿಕಾರಿಗಳು ಸೇರಿದಂತೆ 33 ಪೊಲೀಸರು ಗಾಯಗೊಂಡಿದ್ದರು. ಹಿಂಸಾಚಾರದ ಸಮಯದಲ್ಲಿ ಹಾನಿಗೊಳಗಾದ ಆಸ್ತಿಗಳ ಬೆಲೆಯನ್ನು ಗಲಭೆಕೋರರಿಂದ ವಸೂಲಿ ಮಾಡಲಾಗುವುದು ಮತ್ತು ಪಾವತಿಸದಿದ್ದರೆ, ಅವರ ಆಸ್ತಿಗಳನ್ನು ವಶಪಡಿಸಿಕೊಳ್ಳಲಾಗುವುದು ಮತ್ತು ನಷ್ಟವನ್ನು ಸರಿದೂಗಿಸಲು ಮಾರಾಟ ಮಾಡಲಾಗುವುದು ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದರು. ಇನ್ನು ಗೃಹ ಖಾತೆ ಹೊಂದಿರುವ ಫಡ್ನವೀಸ್ ಪೊಲೀಸರ ಮೇಲೆ ದಾಳಿ ಮಾಡಿದವರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವವರೆಗೆ ನನ್ನ ಸರ್ಕಾರ ವಿಶ್ರಮಿಸುವುದಿಲ್ಲ ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT