ದೇಶ

ನಮಗೆ ಇಂತಹ ನ್ಯಾಯಾಧೀಶರು ಬೇಡ: ನ್ಯಾ. ವರ್ಮಾ ವರ್ಗಾವಣೆಗೆ ಅಲ್ಲಾಹಾಬಾದ್ ಬಾರ್ ಅಸೋಸಿಯೇಷನ್ ಆಕ್ರೋಶ; ಅನಿರ್ದಿಷ್ಟಾವಧಿ ಮುಷ್ಕರ

ವಕೀಲರು ಮಾರ್ಚ್ 25 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ ಎಂದು ಸಂಸ್ಥೆಯ ಹಿರಿಯ ಪದಾಧಿಕಾರಿಯೊಬ್ಬರು ಸೋಮವಾರ ಸ್ಪಷ್ಟಪಡಿಸಿದ್ದಾರೆ.

ಅಲ್ಲಾಹಾಬಾದ್: ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾವಣೆ ಮಾಡಿದ ಬೆನ್ನಲ್ಲೇ ಅಲಹಾಬಾದ್ ಹೈಕೋರ್ಟ್ ಬಾರ್ ಅಸೋಸಿಯೇಷನ್‌ನಲ್ಲಿ ತೀವ್ರ ಅಸಮಾಧಾನ ಭುಗಿಲೆದ್ದಿದೆ.

ವಕೀಲರು ಮಾರ್ಚ್ 25 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ ಎಂದು ಸಂಸ್ಥೆಯ ಹಿರಿಯ ಪದಾಧಿಕಾರಿಯೊಬ್ಬರು ಸೋಮವಾರ ಸ್ಪಷ್ಟಪಡಿಸಿದ್ದಾರೆ.

"ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾವಣೆ ಮಾಡಿದ ಹಿನ್ನೆಲೆಯಲ್ಲಿ ಅಲಹಾಬಾದ್ ಹೈಕೋರ್ಟ್ ಬಾರ್ ಅಸೋಸಿಯೇಷನ್‌ನ ವಕೀಲರು ಮಂಗಳವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ" ಎಂದು ಬಾರ್ ಬಾಡಿ ಅಧ್ಯಕ್ಷ ಅನಿಲ್ ತಿವಾರಿ ಹೇಳಿದ್ದಾರೆ.

"ಈ ಸಂಬಂಧ ನಾವು ಲಕ್ನೋದಲ್ಲಿರುವ ಬಾರ್ ಅಸೋಸಿಯೇಷನ್‌ಗಳಿಗೆ ವಿನಂತಿಯನ್ನು ಕಳುಹಿಸುತ್ತಿದ್ದೇವೆ" ಎಂದು ಅವರು ತಿಳಿಸಿದ್ದಾರೆ.

ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಅವರ ಅಧಿಕೃತ ನಿವಾಸದಿಂದ ಭಾರಿ ಹಣ ಪತ್ತೆಯಾದ ಹಿನ್ನೆಲೆಯಲ್ಲಿ ವಿಚಾರಣೆ ಎದುರಿಸುತ್ತಿರುವ ಅವರನ್ನು ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಲು ಶಿಫಾರಸು ಮಾಡುವ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಸೋಮವಾರ ದೃಢಪಡಿಸಿದ ನಂತರ ಮುಷ್ಕರಕ್ಕೆ ಕರೆ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್