ಲೋಕಸಭೆ 
ದೇಶ

ಶಾಸಕರ ನಂತರ ಸಂಸದರ ವೇತನವೂ ಹೆಚ್ಚಳ; ಏಪ್ರಿಲ್ 1, 2023 ರಿಂದಲೇ ಪೂರ್ವಾನ್ವಯ

ಸಂಸದೀಯ ವ್ಯವಹಾರಗಳ ಸಚಿವಾಲಯ ಹೊರಡಿಸಿದ ಅಧಿಸೂಚನೆಯಲ್ಲಿ, ಹಾಲಿ ಸಂಸದರ ವೇತನವನ್ನು ಶೇ. 24 ರಷ್ಟು ಹೆಚ್ಚಿಸಲಾಗಿದೆ.

ನವದೆಹಲಿ: ಇತ್ತ ರಾಜ್ಯದಲ್ಲಿ ಮುಖ್ಯಮಂತ್ರಿ, ಸಚಿವರು, ಶಾಸಕರ ವೇತನ ಹಾಗೂ ಭತ್ಯೆಯಲ್ಲಿ ಶೇ. 100 ಹೆಚ್ಚಳ ಮಾಡಿದ ಬೆನ್ನಲ್ಲೇ ಅತ್ತ ಸಂಸದರ ವೇತನವೂ ಭಾರಿ ಹೆಚ್ಚವಾಗಿದ್ದು, ಏಪ್ರಿಲ್ 1, 2023 ರಿಂದ ಪೂರ್ವಾನ್ವಯವಾಗುಂತೆ ಜಾರಿಗೆ ಬರುವಂತೆ ಕೇಂದ್ರ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.

ಸಂಸದೀಯ ವ್ಯವಹಾರಗಳ ಸಚಿವಾಲಯ ಹೊರಡಿಸಿದ ಅಧಿಸೂಚನೆಯಲ್ಲಿ, ಹಾಲಿ ಸಂಸದರ ವೇತನವನ್ನು ಶೇ. 24 ರಷ್ಟು ಹೆಚ್ಚಿಸಲಾಗಿದೆ. ಅಲ್ಲದೆ ದಿನಭತ್ಯೆ ಮತ್ತು ಐದು ವರ್ಷಗಳಿಗಿಂತ ಹೆಚ್ಚಿನ ಸೇವೆ ಸಲ್ಲಿಸಿದ ಸಂಸದರಿಗೆ ಪ್ರತಿ ವರ್ಷದ ಪಿಂಚಣಿ ಮತ್ತು ಹೆಚ್ಚುವರಿ ಪಿಂಚಣಿಯನ್ನು ಹೆಚ್ಚಿಸಲಾಗಿದೆ.

ಸಂಸತ್ತಿನ ಸದಸ್ಯರು ಈಗ ತಿಂಗಳಿಗೆ 1 ಲಕ್ಷ ರೂ. ಪಡೆಯುತ್ತಿದ್ದು, ಇನ್ನು ಮುಂದೆ ತಿಂಗಳಿಗೆ 1.24 ಲಕ್ಷ ರೂ. ವೇತನ ಪಡೆಯಲಿದ್ದಾರೆ. ಅವರು ಹಿಂದೆ ಪಡೆಯುತ್ತಿದ್ದ ದಿನಭತ್ಯೆಯನ್ನು ಸಹ 2,000 ರೂ.ಗಳಿಂದ 2,500 ರೂ.ಗಳಿಗೆ ಹೆಚ್ಚಿಸಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಮಾಜಿ ಸಂಸತ್ ಸದಸ್ಯರಿಗೆ ಪಿಂಚಣಿಯನ್ನು ತಿಂಗಳಿಗೆ 25,000 ರೂ.ಗಳಿಂದ 31,000 ರೂ.ಗಳಿಗೆ ಹೆಚ್ಚಿಸಲಾಗಿದೆ.

ಐದು ವರ್ಷಗಳಿಗಿಂತ ಹೆಚ್ಚಿನ ಸೇವೆ ಸಲ್ಲಿಸಿದ ಪ್ರತಿ ವರ್ಷಕ್ಕೆ ಹೆಚ್ಚುವರಿ ಪಿಂಚಣಿಯನ್ನು ತಿಂಗಳಿಗೆ 2,000 ರೂ.ಗಳಿಂದ 2,500 ರೂ.ಗಳಿಗೆ ಹೆಚ್ಚಿಸಲಾಗಿದೆ.

1961 ರ ಆದಾಯ ತೆರಿಗೆ ಕಾಯ್ದೆಯಲ್ಲಿ ನಿರ್ದಿಷ್ಟಪಡಿಸಿದ ವೆಚ್ಚ ಹಣದುಬ್ಬರ ಸೂಚ್ಯಂಕದ ಆಧಾರದ ಮೇಲೆ ಸಂಸತ್ತಿನ ಸದಸ್ಯರ ವೇತನ, ಭತ್ಯೆ ಮತ್ತು ಪಿಂಚಣಿ ಕಾಯ್ದೆಯಡಿ ನೀಡಲಾದ ಅಧಿಕಾರವನ್ನು ಬಳಸಿಕೊಂಡು ವೇತನ ಹೆಚ್ಚಳವನ್ನು ಪ್ರಕಟಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!