ನಿತಿನ್ ಗಡ್ಕರಿ ಅವರೊಂದಿಗೆ ಹೆಚ್ ಡಿ ದೇವೇಗೌಡ, ಕುಮಾರಸ್ವಾಮಿ ಮತ್ತಿತರ ಚಿತ್ರ 
ದೇಶ

ನಿತಿನ್ ಗಡ್ಕರಿ ಭೇಟಿಯಾದ HDD: ಹಾಸನ ಹೊರ ವರ್ತುಲ ರಸ್ತೆ ಯೋಜನೆ ಅನುಮೋದನೆಗೆ ಮನವಿ

ಹಾಸನ ಬಹಳ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಹಾಗೂ ಕರಾವಳಿ ಮತ್ತು ಒಳನಾಡು ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಕೊಂಡಿಯಾಗಿದೆ. ಹೀಗಾಗಿ ಸಂಚಾರ ದಟ್ಟಣೆ ಕಡಿಮೆ ಮಾಡುವ ಅಗತ್ಯವಿದೆ.

ನವದೆಹಲಿ: ಹಾಸನ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಹಾಸನ ವರ್ತುಲ ರಸ್ತೆ ಯೋಜನೆಗೆ ಒಪ್ಪಿಗೆ ನೀಡಬೇಕು ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಬುಧವಾರ ಮಹತ್ವದ ಮಾತುಕತೆ ನಡೆಸಿದರು.

ಸಂಸತ್ ಭವನ ದಲ್ಲಿರುವ ಸಾರಿಗೆ ಸಚಿವರ ಕಚೇರಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಗಡ್ಕರಿ ಅವರನ್ನು ಭೇಟಿಯಾದ ದೇವೇಗೌಡ ಅವರು, ಹಾಸನ ಬಹಳ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಹಾಗೂ ಕರಾವಳಿ ಮತ್ತು ಒಳನಾಡು ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಕೊಂಡಿಯಾಗಿದೆ. ಹೀಗಾಗಿ ಸಂಚಾರ ದಟ್ಟಣೆ ಕಡಿಮೆ ಮಾಡುವ ಅಗತ್ಯವಿದ್ದು, ವರ್ತುಲ ರಸ್ತೆ ನಿರ್ಮಾಣದ ಅಗತ್ಯ ಬಹಳಷ್ಟಿದೆ ಎಂದು ಹೇಳಿದರು.

ರಾಜ್ಯದಲ್ಲಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಎರಡನೇ ಹಂತದ ನಗರವಾದ ಹಾಸನ, ಆರ್ಥಿಕ ಬೆಳವಣಿಗೆ ಮತ್ತು ನಗರ ವಿಸ್ತರಣೆಯಿಂದಾಗಿ ಹೆಚ್ಚುತ್ತಿರುವ ಸಂಚಾರ ದಟ್ಟಣೆ ಸುಗಮ ಸಂಚಾರಕ್ಕೆ ಅಡ್ಡಿಯಾಗಿದೆ. ಹೀಗಾಗಿ ಹೊರ ವರ್ತುಲ ರಸ್ತೆ ಅಗತ್ಯವಾಗಿದೆ. ಈ ಯೋಜನೆಯು ಸಂಚಾರವನ್ನು ವಿಕೇಂದ್ರೀಕರಿಸಿ ದಟ್ಟಣೆಯನ್ನು ಕಡಿಮೆ ಮಾಡುತ್ತದೆ ಹಾಗೂ ಪ್ರಮುಖ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಿಗೆ ಸಂಪರ್ಕ ಒದಗಿಸುತ್ತದೆ ಎಂದು ಗಡ್ಕರಿ ಅವರಿಗೆ ಮನವರಿಕೆ ಮಾಡಿಕೊಟ್ಟರು.

ಪ್ರಸ್ತಾವಿತ ಹೊರ ವರ್ತುಲ ರಸ್ತೆಯು ಬೆಂಗಳೂರು-ನೆಲಮಂಗಲ-ಮಂಗಳೂರು ರಸ್ತೆ (NH-75)ಅನ್ನು ಹಾಸನ ವಿಮಾನ ನಿಲ್ದಾಣ, ಹಾಸನ-ಅರಸೀಕೆರೆ ರಸ್ತೆ (SH-71), ಹಾಸನ-ಹಳೇಬೀಡು-ಹಾಸನ ರಸ್ತೆ ಮತ್ತು ಹಾಸನ-ಬೇಲೂರು ರಸ್ತೆ (NH-373) ಗೆ ಸಂಪರ್ಕಿಸುತ್ತದೆ. ಈ ಸಂಪರ್ಕವು ಸುಗಮ ಸಾರಿಗೆಗೆ ಅನುಕೂಲವಾಗುತ್ತದೆ. ಅಲ್ಲದೆ, ಹಾಸನ ಜಿಲ್ಲೆಯಲ್ಲಿರುವ ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳು ಮತ್ತು ರಾಷ್ಟ್ರೀಯ ಪ್ರವಾಸಿ ಸರ್ಕ್ಯೂಟ್ ನ ಭಾಗವಾಗಿರುವ ಹಾಸನ, ಬೇಲೂರು, ಹಳೇಬೀಡು, ಚಿಕ್ಕಮಗಳೂರು, ಶ್ರವಣಬೆಳಗೊಳ, ಮೈಸೂರು, ಮಡಿಕೇರಿ ಮತ್ತು ಮಂಗಳೂರಿನಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ ಎಂದು ದೇವೇಗೌಡರು ಕೇಂದ್ರ ಸಾರಿಗೆ ಸಚಿವರಿಗೆ ವಿವರಿಸಿದರು.

ಯೋಜನೆಯ ವಿವರ: ಪ್ರಸ್ತಾವಿತ ವರ್ತುಲ ರಸ್ತೆಯ ಒಟ್ಟು ಉದ್ದ 21.950 ಕಿ.ಮೀ. ದೂರವನ್ನು ಹೊಂದಿದ್ದು, ಯೋಜನೆಗೆ ಸುಮಾರು 120 ಹೆಕ್ಟೇರ್ ಭೂಮಿ ಅಗತ್ಯವಿದೆ. ಜಿಎಸ್‌ಟಿ, ಭೂಸ್ವಾಧೀನ ಮತ್ತು ಸ್ಥಳಾಂತರ ಸೇರಿದಂತೆ ಯೋಜನೆಯ ಅಂದಾಜು ವೆಚ್ಚ ಸುಮಾರು ₹750 ಕೋಟಿ ಆಗಲಿದೆ ಎಂದು ಮಾಜಿ ಪ್ರಧಾನಿಗಳು ಸಾರಿಗೆ ಸಚಿವರಿಗೆ ವಿವರಿಸಿದರು.

ಯೋಜನೆಯ ಆರ್ಥಿಕ ಪರಿಣಾಮದ ಕುರಿತು ವಿವರಿಸಿದ ದೇವೇಗೌಡರು; ಉತ್ತಮ ರಸ್ತೆ ಮೂಲಸೌಕರ್ಯವು ಈ ಪ್ರದೇಶದಲ್ಲಿ ವೇಗಯುತ ಆರ್ಥಿಕ ಬೆಳವಣಿಗೆಗೆ ಕಾರಣವಾಗುತ್ತದೆ. ಈ ವರ್ತುಲ ರಸ್ತೆ ಪ್ರಯಾಣದ ಸಮಯವನ್ನು ಕಡಿಮೆ ಮಾಡುವುದಲ್ಲದೆ; ವ್ಯಾಪಾರ, ಕೃಷಿ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ. ಹಾಸನದ ಜನರಿಗೆ ಹೊಸ ಆರ್ಥಿಕ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT