ಬರಾಮುಲ್ಲಾ: ಜಮ್ಮು- ಕಾಶ್ಮೀರದ ಬರಾಮುಲ್ಲಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಬುಧವಾರ ಉಗ್ರರ ಅಡಗುತಾಣಗಳನ್ನು ಪತ್ತೆ ಹಚ್ಚಿವೆ.
ನಾಂಬ್ಲಾನ್ ಅರಣ್ಯ ಪ್ರದೇಶದಲ್ಲಿ ಉಗ್ರರ ಅಡಗುತಾಣವನ್ನು ಪತ್ತೆಹಚ್ಚಿದ್ದು, ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಸಂಗ್ರಹವನ್ನು ವಶಕ್ಕೆ ಪಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಶೋಧ ಕಾರ್ಯಾಚರಣೆ ವೇಳೆಯಲ್ಲಿ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳ ಸಂಗ್ರಹವನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ.
ಇದರಲ್ಲಿ ಫ್ಯೂಸ್, ಪ್ಲಾಸ್ಟಿಕ್ ಸ್ಫೋಟಕಗಳು, 104 ಸುತ್ತುಗಳ ಎಕೆ -47 ಮದ್ದುಗುಂಡುಗಳು, ಎರಡು ಎಕೆ -47 ಮ್ಯಾಗಜೀನ್‌ಗಳು, ಎರಡು ಹ್ಯಾಂಡ್ ಗ್ರೆನೇಡ್‌ಗಳು, ಒಂದು ಚೀಲ ಮತ್ತು ಎರಡು ಬ್ಯಾಗ್‌ಗಳು ಸೇರಿವೆ.