ಬುಧವಾರ, ಮಾರ್ಚ್ 26, 2025 ರಂದು ನವದೆಹಲಿಯಲ್ಲಿ ನಡೆದ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ. PTI
ದೇಶ

ಸದನ ನಡೆಸಲು ಯಾವುದೇ ಮಾರ್ಗವಿಲ್ಲ.. ಮಾತನಾಡಲು ಅವಕಾಶ ನೀಡುತ್ತಿಲ್ಲ: ಲೋಕಸಭಾ ಸ್ಪೀಕರ್ ವಿರುದ್ಧ Rahul Gandhi

ಸರ್ಕಾರವು ವಿರೋಧ ಪಕ್ಷದ ಧ್ವನಿಯನ್ನು ಹತ್ತಿಕ್ಕುತ್ತಿದೆ ಎಂದು ಆರೋಪಿಸಿದರು. ಕಳೆದ ಹಲವಾರು ದಿನಗಳಿಂದ ಸದನದಲ್ಲಿ ಮಾತನಾಡಲು ಅವಕಾಶವಿಲ್ಲ ಎಂದು ಹೇಳಿದ್ದಾರೆ.

ನವದೆಹಲಿ: ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅಸಮಾಧಾನಗೊಂಡಿದ್ದು, ಸ್ಪೀಕರ್ ಓಂ ಬಿರ್ಲಾ ಅವರು, ಸದನದಲ್ಲಿ ನಮಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ, ಅವಕಾಶ ಕೇಳಿದರೆ ಓಡಿ ಹೋಗುತ್ತಾರೆ ಎಂದು ಕಿಡಿಕಾರಿದ್ದಾರೆ.

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಬುಧವಾರ ಸರ್ಕಾರವು ವಿರೋಧ ಪಕ್ಷದ ಧ್ವನಿಯನ್ನು ಹತ್ತಿಕ್ಕುತ್ತಿದೆ ಎಂದು ಆರೋಪಿಸಿದರು. ಕಳೆದ ಹಲವಾರು ದಿನಗಳಿಂದ ಸದನದಲ್ಲಿ ಮಾತನಾಡಲು ಅವಕಾಶವಿಲ್ಲ ಎಂದು ಹೇಳಿದ್ದಾರೆ.

"ಏನು ನಡೆಯುತ್ತಿದೆ ಎಂದು ನನಗೆ ತಿಳಿದಿಲ್ಲ... ನನಗೆ ಮಾತನಾಡಲು ಅವಕಾಶ ನೀಡುವಂತೆ ನಾನು ಸ್ಪೀಕರ್ ಅವರನ್ನು ವಿನಂತಿಸಿದೆ. ಆದರೆ ಅವರು ಓಡಿಹೋದರು. ಸದನವನ್ನು ನಡೆಸಲು ಇದು ಮಾರ್ಗವಲ್ಲ. ಸ್ಪೀಕರ್ ಸುಮ್ಮನೆ ಹೊರಟುಹೋದರು. ಅವರು ನನಗೆ ಮಾತನಾಡಲು ಬಿಡಲಿಲ್ಲ... ಅವರು ನನ್ನ ಬಗ್ಗೆ ಆಧಾರ ರಹಿತವಾದದ್ದನ್ನು ಹೇಳಿದರು... ಅಗತ್ಯ ಇಲ್ಲದಿದ್ದರೂ ಸದನವನ್ನು ಮುಂದೂಡಿದರು" ಎಂದು ಅವರು ಹೇಳಿದರು.

'ಸದನದ ಘನತೆಯನ್ನು ಎತ್ತಿಹಿಡಿಯಲು ಸದಸ್ಯರು ಪಾಲಿಸಬೇಕಾದ ಕಾರ್ಯವಿಧಾನದ ನಿಯಮಗಳನ್ನು ಲೋಕಸಭೆ ವಿರೋಧ ಪ‍ಕ್ಷದ ನಾಯಕರು ಪಾಲಿಸಬೇಕು. ನನ್ನ ಬಗ್ಗೆ ಹೇಳಿಕೆ ನೀಡಿ, ನನಗೆ ಮಾತನಾಡಲೂ ಅವಕಾಶ ನೀಡದೆ ಸದನವನ್ನು ಮುಂದೂಡಿದರು. ಕಳೆದ ವಾರವೂ ನನಗೆ ಮಾತನಾಡಲು ಅವಕಾಶ ನೀಡಲಿಲ್ಲ.

ವಿರೋಧ ಪಕ್ಷದ ನಾಯಕನಿಗೆ ಮಾತನಾಡಲು ಅವಕಾಶ ನೀಡಬೇಕು. ಆದರೆ ನಾನು ಮಾತನಾಡುವಾಗಲೆಲ್ಲಾ ನನ್ನನ್ನು ತಡೆಯಲಾಗುತ್ತಿದೆ. ನಾನು ಸುಮ್ಮನೇ ಕುಳಿತುಕೊಳ್ಳಬೇಕಾಯಿತು. ಇಲ್ಲಿ ಪ್ರಜಾಪ್ರಭುತ್ವಕ್ಕೆ ಅವಕಾಶವೇ ಇಲ್ಲ. ಮಹಾಕುಂಭಮೇಳ, ನಿರುದ್ಯೋಗದ ಬಗ್ಗೆ ನಾನು ಮಾತನಾಡಬೇಕೆಂದಿದ್ದೆ ಎಂದು ರಾಹುಲ್ ಗಾಂಧಿ ಹೇಳಿದರು.

ಸ್ಪೀಕರ್ ಹೇಳಿದ್ದೇನು?

ಏತನ್ಮಧ್ಯೆ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಬುಧವಾರ ಸಭ್ಯತೆಯನ್ನು ಕಾಪಾಡಿಕೊಳ್ಳುವ ಮತ್ತು ಕಾರ್ಯವಿಧಾನದ ನಿಯಮಗಳನ್ನು ಅನುಸರಿಸುವ ಮಹತ್ವದ ಬಗ್ಗೆ ಮಾತನಾಡಿದರು. "ಸದಸ್ಯರ ನಡವಳಿಕೆಯು ಸದನದಲ್ಲಿ ನಿರೀಕ್ಷಿಸಲಾದ ಉನ್ನತ ಮಾನದಂಡಗಳಿಗೆ ಅನುಗುಣವಾಗಿಲ್ಲದ ಹಲವಾರು ನಿದರ್ಶನಗಳು ನನ್ನ ಗಮನಕ್ಕೆ ಬಂದಿವೆ ಎಂದ ಸ್ಪೀಕರ್ ಓಂ ಬಿರ್ಲಾ ಅವರು ಸದಸ್ಯರು ಪಾಲಿಸಬೇಕಾದ ನಿಯಮಗಳನ್ನು ವಿವರಿಸುವ ನಿಯಮ 349 ಅನ್ನು ಅವರು ನಿರ್ದಿಷ್ಟವಾಗಿ ಉಲ್ಲೇಖಿಸಿದರು.

"ಈ ಸದನದಲ್ಲಿ, ತಂದೆ ಮತ್ತು ಮಗಳು, ತಾಯಿ ಮತ್ತು ಮಗಳು, ಗಂಡ ಮತ್ತು ಹೆಂಡತಿ ಸದಸ್ಯರಾಗಿದ್ದಾರೆ. ಈ ಸಂದರ್ಭದಲ್ಲಿ, ವಿರೋಧ ಪಕ್ಷದ ನಾಯಕ ನಿಯಮಗಳಿಗೆ ಅನುಸಾರವಾಗಿ ವರ್ತಿಸಬೇಕೆಂದು ನಾನು ನಿರೀಕ್ಷಿಸುತ್ತೇನೆ ಎಂದು ಹೇಳಿದರು. ಸ್ಪೀಕರ್ ಈ ಅಭಿಪ್ರಾಯವನ್ನು ನೀಡಲು ಕಾರಣವೇನೆಂದು ತಕ್ಷಣ ಸ್ಪಷ್ಟವಾಗಿಲ್ಲ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT