ಸಾಂಕೇತಿಕ ಚಿತ್ರ  
ದೇಶ

LAC ಪರಿಸ್ಥಿತಿ ಪರಾಮರ್ಶೆ: ಬೀಜಿಂಗ್ ನಲ್ಲಿ ಭಾರತ-ಚೀನಾ ಸಕಾರಾತ್ಮಕ ಮತ್ತು ರಚನಾತ್ಮಕ ಮಾತುಕತೆ

ಈ ವರ್ಷದ ಕೊನೆಯಲ್ಲಿ ದೆಹಲಿಯಲ್ಲಿ ನಡೆಯಲಿರುವ ವಿಶೇಷ ಪ್ರತಿನಿಧಿಗಳ (SR) ಮುಂದಿನ ಸಭೆಗೆ ಸಿದ್ಧತೆಗಳನ್ನು ಮಾಡಲು ಎರಡೂ ಕಡೆಯವರು ಒಟ್ಟಾಗಿ ಕೆಲಸ ಮಾಡಲು ಒಪ್ಪಿಕೊಂಡಿದ್ದಾರೆ.

ನವದೆಹಲಿ: ಭಾರತ ಮತ್ತು ಚೀನಾ ದೇಶಗಳ ನಡುವಿನ ಗಡಿ ನಿರ್ವಹಣೆಯನ್ನು ಮುನ್ನಡೆಸಲು ರಾಜತಾಂತ್ರಿಕ ಕಾರ್ಯವಿಧಾನಗಳನ್ನು ಬಲಪಡಿಸಲು ಎರಡೂ ದೇಶಗಳು ನಿರ್ಧರಿಸಿದ್ದು, ನದಿಗಳು ಮತ್ತು ಕೈಲಾಸ-ಮಾನಸ ಸರೋವರ ಯಾತ್ರೆ ಸೇರಿದಂತೆ ಗಡಿಯಾಚೆಗಿನ ಸಹಕಾರವನ್ನು ಪುನರಾರಂಭಿಸುವ ವಿಧಾನಗಳನ್ನು ಪರಿಶೀಲಿಸುತ್ತಿವೆ.

ಕಳೆದ ವರ್ಷ ಡಿಸೆಂಬರ್ ನಲ್ಲಿ ಬೀಜಿಂಗ್‌ನಲ್ಲಿ ನಡೆದ ಭಾರತ-ಚೀನಾ ಗಡಿ ಪ್ರಶ್ನೆಯ ಕುರಿತು ವಿಶೇಷ ಪ್ರತಿನಿಧಿಗಳ 23 ನೇ ಸಭೆಯ ಸಮಯದಲ್ಲಿ ತೆಗೆದುಕೊಂಡ ನಿರ್ಧಾರಗಳನ್ನು ಜಾರಿಗೆ ತರಲು ಮತ್ತು ಪರಿಣಾಮಕಾರಿ ಗಡಿ ನಿರ್ವಹಣೆಯನ್ನು ಮುನ್ನಡೆಸಲು ಎರಡೂ ಕಡೆಯವರು ವಿವಿಧ ಕ್ರಮಗಳು ಮತ್ತು ಪ್ರಸ್ತಾಪಗಳನ್ನು ಅನ್ವೇಷಿಸಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಗಡಿ ಉದ್ವಿಗ್ನತೆಯಿಂದ ಹದಗೆಟ್ಟಿರುವ ಸಂಬಂಧಗಳನ್ನು ಸಾಮಾನ್ಯಗೊಳಿಸಲು ಕೆಲಸ ಮಾಡುತ್ತಿರುವ ಎರಡೂ ದೇಶಗಳು ಬೀಜಿಂಗ್‌ನಲ್ಲಿ ನಡೆದ ಸಭೆಯನ್ನು ಸಕಾರಾತ್ಮಕ ಮತ್ತು ರಚನಾತ್ಮಕ ವಾತಾವರಣದಲ್ಲಿ ನಡೆಸಲಾಯಿತು ಎಂದು ಹೇಳಲಾಗಿದೆ.

ಸಕಾರಾತ್ಮಕ ಮತ್ತು ರಚನಾತ್ಮಕ ವಾತಾವರಣದಲ್ಲಿ ನಡೆದ ಸಭೆಯು ಭಾರತ-ಚೀನಾ ಗಡಿ ಪ್ರದೇಶಗಳಲ್ಲಿನ ವಾಸ್ತವಿಕ ನಿಯಂತ್ರಣ ರೇಖೆಯ ಉದ್ದಕ್ಕೂ ಪರಿಸ್ಥಿತಿಯನ್ನು ಸಮಗ್ರವಾಗಿ ಪರಿಶೀಲಿಸಿತು. ಒಟ್ಟಾರೆ ದ್ವಿಪಕ್ಷೀಯ ಸಂಬಂಧಗಳ ಸುಗಮ ಅಭಿವೃದ್ಧಿಗೆ ಗಡಿಯಲ್ಲಿ ಶಾಂತಿ ಮತ್ತು ನೆಮ್ಮದಿ ನಿರ್ಣಾಯಕವಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಎರಡೂ ಕಡೆಯವರು ಸಕಾರಾತ್ಮಕ, ರಚನಾತ್ಮಕ ಮತ್ತು ಭವಿಷ್ಯದ ದೃಷ್ಟಿಕೋನವನ್ನು ಅಳವಡಿಸಿಕೊಂಡು, ಕಳೆದ ಡಿಸೆಂಬರ್ ನಲ್ಲಿ ನಡೆದ ಚೀನಾ-ಭಾರತ ಗಡಿ ಪ್ರಶ್ನೆಗಾಗಿ ವಿಶೇಷ ಪ್ರತಿನಿಧಿಗಳ 23 ನೇ ಸಭೆಯಲ್ಲಿ ತಲುಪಿದ ಒಮ್ಮತವನ್ನು ಅನುಷ್ಠಾನಗೊಳಿಸುವ ಬಗ್ಗೆ ಸಮಗ್ರ ಮತ್ತು ಆಳವಾದ ಅಭಿಪ್ರಾಯಗಳ ವಿನಿಮಯವನ್ನು ನಡೆಸಿದರು ಎಂದು ಚೀನಾ ವಿದೇಶಾಂಗ ಸಚಿವಾಲಯ ಸಭೆಯ ನಂತರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ಈ ವರ್ಷದ ಕೊನೆಯಲ್ಲಿ ದೆಹಲಿಯಲ್ಲಿ ನಡೆಯಲಿರುವ ವಿಶೇಷ ಪ್ರತಿನಿಧಿಗಳ (SR) ಮುಂದಿನ ಸಭೆಗೆ ಸಿದ್ಧತೆಗಳನ್ನು ಮಾಡಲು ಎರಡೂ ಕಡೆಯವರು ಒಟ್ಟಾಗಿ ಕೆಲಸ ಮಾಡಲು ಒಪ್ಪಿಕೊಂಡಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಕಳೆದ ಬಾರಿ ನಡೆದ ಮಾತುಕತೆಯಲ್ಲಿ ಭಾರತೀಯ ನಿಯೋಗದ ನೇತೃತ್ವವನ್ನು ಎಂಇಎ ಜಂಟಿ ಕಾರ್ಯದರ್ಶಿ (ಪೂರ್ವ ಏಷ್ಯಾ) ಗೌರಂಗಲಾಲ್ ದಾಸ್ ವಹಿಸಿದ್ದರು. ಚೀನಾ ನಿಯೋಗದ ನೇತೃತ್ವವನ್ನು ಚೀನಾ ವಿದೇಶಾಂಗ ಸಚಿವಾಲಯದ ಗಡಿ ಮತ್ತು ಸಾಗರ ವ್ಯವಹಾರಗಳ ಇಲಾಖೆಯ ಮಹಾನಿರ್ದೇಶಕ ಹಾಂಗ್ ಲಿಯಾಂಗ್ ವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಹೋರಾಟ ನಡೆಸುತ್ತೇವೆಂದ ಸಿಎಂ ಸಿದ್ದರಾಮಯ್ಯ

SCROLL FOR NEXT