ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ: ದುಡ್ಡಿನ ಆಮಿಷವೊಡ್ಡಿ ಇಸ್ಲಾಂ ಧರ್ಮಕ್ಕೆ ಅಪ್ರಾಪ್ತ ಬಾಲಕನ ಮತಾಂತರ, ಸುನ್ನತಿ!

ಬಾಲಕನನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಜಾಫರ್‌ನಗರ: ಏನು ಅರಿಯದ ಅಪ್ರಾಪ್ತ ಬಾಲಕನೊಬ್ಬನಿಗೆ ಹಣದ ಆಮಿಷವೊಡ್ಡಿ ಇಸ್ಲಾಂಗೆ ಮತಾಂತರ ಮಾಡಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ನಡೆದಿದೆ.

ಸಿವಿಲ್ ಲೈನ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಹಿಂದೂ ಕ್ಷೌರಿಕನಿಂದ ಬಾಲಕನಿಗೆ ಸುನ್ನತಿ ಕೂಡ ಮಾಡಿಸಲಾಗಿದೆ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

ಈ ಸಂಬಂಧ ಬಾಲಕನ ತಂದೆ ಪೊಲೀಸರಿಗೆ ದೂರು ನೀಡಿದ್ದು, ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ತನ್ನ ಮಗನಿಗೆ ಹಣದ ಆಮಿಷವೊಡ್ಡಿ ಮತಾಂತರ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

BNS ಮತ್ತು ಯುಪಿ ಕಾನೂನುಬಾಹಿರ ಮತಾಂತರ ನಿಷೇಧ ಕಾಯ್ದೆ 2021ರ ಸಂಬಂಧಿತ ಸೆಕ್ಷನ್ ಗಳಡಿ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಪ್ರಕರಣ ಸಂಬಂಧ ಮೂವರು ಆರೋಪಿಗಳಾದ ಇಮ್ರಾನ್, ನೂರ್ ಅಲಿ ಮತ್ತು ಮಂಗೇ ರಾಮ್ ಅವರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಸರ್ಕಲ್ ಆಫೀಸರ್ ರಾಜ್‌ಕುಮಾರ್ ಸಾವ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬಾಲಕನನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: 'Quad' ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್‌ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ, ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನೆಡೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

SCROLL FOR NEXT