ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ 
ದೇಶ

ಕೇಂದ್ರದ ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

ಇಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ನಿರ್ಣಯವನ್ನು ಮಂಡಿಸಿದರು. ಪ್ರಮುಖ ವಿರೋಧ ಪಕ್ಷ ಎಐಎಡಿಎಂಕೆ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಈ ನಿರ್ಣಯವನ್ನು ಬೆಂಬಲಿಸಿದವು.

ಚೆನ್ನೈ: ಕೇಂದ್ರ ಸರ್ಕಾರ 2024ರ ವಕ್ಫ್(ತಿದ್ದುಪಡಿ) ಮಸೂದೆಯನ್ನು ಸಂಪೂರ್ಣವಾಗಿ ಹಿಂಪಡೆಯಬೇಕು ಎಂದು ಒತ್ತಾಯಿಸಿ ಗುರುವಾರ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ.

ಇಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ನಿರ್ಣಯವನ್ನು ಮಂಡಿಸಿದರು. ಪ್ರಮುಖ ವಿರೋಧ ಪಕ್ಷ ಎಐಎಡಿಎಂಕೆ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಈ ನಿರ್ಣಯವನ್ನು ಬೆಂಬಲಿಸಿದವು. ಆದರೆ ಬಿಜೆಪಿ ಶಾಸಕಿ ವನತಿ ಶ್ರೀನಿವಾಸನ್ ಅವರು ತಮ್ಮ ಪಕ್ಷದ ಶಾಸಕರ ನೇತೃತ್ವದಲ್ಲಿ ನಿರ್ಣಯವನ್ನು ವಿರೋಧಿಸಿ ಸಭಾತ್ಯಾಗ ಮಾಡಿದರು.

ಈ ಮಸೂದೆಯು ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂದು ತಮಿಳುನಾಡು ಸಿಎಂ ಹೇಳಿದ್ದಾರೆ.

"ಭಾರತದಲ್ಲಿ ಎಲ್ಲಾ ಧರ್ಮಗಳ ಜನರು ಸಾಮರಸ್ಯದಿಂದ ಬದುಕುತ್ತಿದ್ದಾರೆ ಮತ್ತು ಸಂವಿಧಾನವು ಜನರಿಗೆ ತಮ್ಮ ಧರ್ಮಗಳನ್ನು ಆಚರಿಸುವ ಹಕ್ಕುಗಳನ್ನು ನೀಡಿದೆ. ಜನಪ್ರಿಯ ಸರ್ಕಾರಗಳು ಈ ಹಕ್ಕನ್ನು ಉಳಿಸಿಕೊಳ್ಳುವ ಕರ್ತವ್ಯ ಹೊಂದಿವೆ. ಆದಾಗ್ಯೂ, ಇದಕ್ಕೆ ವಿರುದ್ಧವಾಗಿ, ಕೇಂದ್ರ ಸರ್ಕಾರವು ಕಳೆದ ಆಗಸ್ಟ್‌ನಲ್ಲಿ 2024 ರ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಪರಿಚಯಿಸಿತು. ಇದು ಮುಸ್ಲಿಂ ಸಮುದಾಯದ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ಹೀಗಾಗಿ, ಈ ಮಸೂದೆಯನ್ನು ಸಂಪೂರ್ಣವಾಗಿ ಹಿಂಪಡೆಯುವಂತೆ ಈ ಸದನವು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತದೆ" ಎಂದು ಸಿಎಂ ಮಂಡಿಸಿದ ನಿರ್ಣಯದಲ್ಲಿ ಹೇಳಲಾಗಿದೆ.

ಮಸೂದೆಯಲ್ಲಿ ಪ್ರಸ್ತಾಪಿಸಲಾದ ತಿದ್ದುಪಡಿಗಳು ವಕ್ಫ್‌ಗಳ ಆಡಳಿತದಲ್ಲಿ ಕೇಂದ್ರ ಸರ್ಕಾರದ ಹಸ್ತಕ್ಷೇಪವನ್ನು ಹೆಚ್ಚಿಸುವ ಉದ್ದೇಶ ಹೊಂದಿದೆ ಎಂದು ಆರೋಪಿಸಿದ ಸ್ಟಾಲಿನ್, "ತಮಿಳುನಾಡು ಸರ್ಕಾರವು ಸೆಪ್ಟೆಂಬರ್ 30, 2024 ರಂದು ಜೆಪಿಸಿಗೆ ಇದನ್ನು ತಿಳಿಸಿರುವುದಾಗಿ ಹೇಳಿದ್ದಾರೆ.

ಡಿಎಂಕೆ ಮಾತ್ರವಲ್ಲದೆ ಅನೇಕ ಪ್ರಮುಖ ರಾಜಕೀಯ ಪಕ್ಷಗಳು ಸಹ ತಿದ್ದುಪಡಿ ವಕ್ಫ್ ತಿದ್ದುಪಡಿ ಮಸೂದೆ ಬಗ್ಗೆ ತಮ್ಮ ಪ್ರತಿಭಟನೆಯನ್ನು ದಾಖಲಿಸಿವೆ" ಎಂದು ಸ್ಟಾಲಿನ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT