ಸಾಂದರ್ಭಿಕ ಚಿತ್ರ 
ದೇಶ

ಬ್ಯಾಂಕಾಕ್‌ನಲ್ಲಿ ಪ್ರಬಲ ಭೂಕಂಪ: ಕೋಲ್ಕತ್ತಾ, ಇಂಫಾಲ್‌ನಲ್ಲೂ ಕಂಪಿಸಿದ ಭೂಮಿ

ಅಧಿಕೃತ ಮೂಲಗಳ ಪ್ರಕಾರ, ಭೂಕಂಪದಿಂದಾಗಿ ನಗರದಲ್ಲಿ ಯಾವುದೇ ಆಸ್ತಿಪಾಸ್ತಿ ಹಾನಿ ಅಥವಾ ಜೀವಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

ಕೋಲ್ಕತ್ತಾ: ಥೈಲ್ಯಾಂಡ್ ರಾಜಧಾನಿ ಬ್ಯಾಂಕಾಕ್‌ನಲ್ಲಿ ಶುಕ್ರವಾರ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ ನಂತರ ಕೋಲ್ಕತ್ತಾ ಮತ್ತು ಇಂಫಾಲ್‌ನಲ್ಲೂ ಲಘು ಕಂಪನದ ಅನುಭವವಾಗಿದೆ.

ಮೋನಿವಾ ನಗರದಿಂದ ಪೂರ್ವಕ್ಕೆ ಸುಮಾರು 50 ಕಿ.ಮೀ ದೂರದಲ್ಲಿರುವ ಮಧ್ಯ ಮ್ಯಾನ್ಮಾರ್‌ನಲ್ಲಿ ಭೂಕಂಪದ ಕೇಂದ್ರಬಿಂದು ಪತ್ತೆಯಾಗಿದೆ.

ಭೂಕಂಪದ ಸಮಯದಲ್ಲಿ ಕೋಲ್ಕತ್ತಾ ಮತ್ತು ಪಕ್ಕದ ಪ್ರದೇಶಗಳ ನಿವಾಸಿಗಳಿಗೂ ಭೂಮಿ ಕಂಪಿಸಿದ ಅನುಭವವಾಗಿದೆ ಮತ್ತು ಗೋಡೆಗೆ ನೇತಾಕಿದ್ದ ವಸ್ತುಗಳು ತೂಗಾಡುತ್ತಿರುವುದನ್ನು ಗಮನಿಸಿದ್ದಾರೆ ಎಂದು ವರದಿಯಾಗಿದೆ.

ಅಧಿಕೃತ ಮೂಲಗಳ ಪ್ರಕಾರ, ಭೂಕಂಪದಿಂದಾಗಿ ನಗರದಲ್ಲಿ ಯಾವುದೇ ಆಸ್ತಿಪಾಸ್ತಿ ಹಾನಿ ಅಥವಾ ಜೀವಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

ಮಣಿಪುರದಲ್ಲಿ, ಇಂಫಾಲ್‌ನ ತಂಗಲ್ ಬಜಾರ್ ನಿವಾಸಿಗಳಿಗೆ ಈ ಕಂಪನವು ಭೀತಿಯನ್ನುಂಟುಮಾಡಿದೆ. ಇಲ್ಲಿ ಅನೇಕ ಹಳೆಯ ಬಹುಮಹಡಿ ಕಟ್ಟಡಗಳಿವೆ.

ಆದಾಗ್ಯೂ, ಇಲ್ಲಿಯವರೆಗೆ ಯಾವುದೇ ಆಸ್ತಿ ಹಾನಿ ಅಥವಾ ಜೀವ ಹಾನಿ ಬಗ್ಗೆ ವರದಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT