ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಮುಂದಿನ ವಾರ ಥೈಲ್ಯಾಂಡ್, ಶ್ರೀಲಂಕಾಗೆ ಪ್ರಧಾನಿ ಮೋದಿ ಭೇಟಿ

ಪ್ರಧಾನಿ ಮೋದಿ ಥೈಲ್ಯಾಂಡ್ ಭೇಟಿಯ ನಂತರ ಏಪ್ರಿಲ್ 4 ರಿಂದ 6 ರವರೆಗೆ ಶ್ರೀಲಂಕಾಗೆ ಭೇಟಿ ನೀಡಲಿದ್ದಾರೆ.

ಪ್ರಧಾನಿ ಮೋದಿ
Lingaraj Badiger
Updated On : 28 Mar 2025, 1:24 pm

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 3 ರಿಂದ 4 ರವರೆಗೆ ಬ್ಯಾಂಕಾಕ್‌ಗೆ ಭೇಟಿ ನೀಡಲಿದ್ದು, ಈ ಬಾರಿ ಬಿಮ್‌ಸ್ಟೆಕ್ ಅಧ್ಯಕ್ಷ ಸ್ಥಾನ ವಹಿಸಿಕೊಂಡಿರುವ ಥೈಲ್ಯಾಂಡ್ ಆಯೋಜಿಸಿರುವ 6ನೇ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

ಪ್ರಧಾನಿ ಮೋದಿ ಥೈಲ್ಯಾಂಡ್ ಭೇಟಿಯ ನಂತರ ಏಪ್ರಿಲ್ 4 ರಿಂದ 6 ರವರೆಗೆ ಶ್ರೀಲಂಕಾಗೆ ಭೇಟಿ ನೀಡಲಿದ್ದಾರೆ.

"ಥೈಲ್ಯಾಂಡ್ ಪ್ರಧಾನಿ ಪೇಟೊಂಗ್‌ಟಾರ್ನ್ ಶಿನವಾತ್ರ ಅವರ ಆಹ್ವಾನದ ಮೇರೆಗೆ, ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 3 ರಿಂದ 4 ರವರೆಗೆ ಬ್ಯಾಂಕಾಕ್‌ಗೆ ಭೇಟಿ ನೀಡಲಿದ್ದಾರೆ. ಈ ಬಾರಿ ಥೈಲ್ಯಾಂಡ್ ಆಯೋಜಿಸಿರುವ 6ನೇ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಮೋದಿ ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ(ಎಂಇಎ) ಪ್ರಕಟಣೆಯಲ್ಲಿ ತಿಳಿಸಿದೆ.

Advertisement

Advertisement

ಪ್ರಧಾನಿ ಮೋದಿ ಅವರು ಮೂರನೇ ಬಾರಿ ಥೈಲ್ಯಾಂಡ್‌ಗೆ ಭೇಟಿ ನೀಡುತ್ತಿದ್ದು, ದ್ವೀಪ ರಾಷ್ಟ್ರದ ಉನ್ನತ ನಾಯಕರೊಂದಿಗೆ ಮಾತು ಕತೆ ನಡೆಸಲಿದ್ದಾರೆ.

Also Read

ಮಾರ್ಚ್ 30 ರಂದು RSS ಕೇಂದ್ರ ಕಚೇರಿಗೆ ಮೋದಿ ಭೇಟಿ; ಅಲ್ಲಿಗೆ ತೆರಳುತ್ತಿರುವ ಮೊದಲ ಪ್ರಧಾನಿ

ಪ್ರಧಾನಿ ಮೋದಿ ಅವರು ಏಪ್ರಿಲ್ 3, 2025 ರಂದು ಥೈಲ್ಯಾಂಡ್ ಪ್ರಧಾನಿಯೊಂದಿಗೆ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ, ಎರಡೂ ದೇಶಗಳ ನಾಯಕರು ದ್ವಿಪಕ್ಷೀಯ ಸಹಕಾರವನ್ನು ಪರಿಶೀಲಿಸುವ ಮತ್ತು ದೇಶಗಳ ನಡುವಿನ ಭವಿಷ್ಯದ ಪಾಲುದಾರಿಕೆಗೆ ದಾರಿ ಮಾಡಿಕೊಡುವ ಬಗ್ಗೆ ಮಾತನಾಡಲಿದ್ದಾರೆ. ಭಾರತ ಮತ್ತು ಥೈಲ್ಯಾಂಡ್ ಸಮುದ್ರ ಗಡಿಯನ್ನು ಹಂಚಿಕೊಂಡಿವೆ ಮತ್ತು ಎರಡೂ ದೇಶಗಳ ನಡುವೆ ಸಾಂಸ್ಕೃತಿಕ, ಭಾಷಾ ಮತ್ತು ಧಾರ್ಮಿಕ ಸಂಬಂಧಗಳಿವೆ.

2018 ರಲ್ಲಿ ನೇಪಾಳದ ಕಠ್ಮಂಡುವಿನಲ್ಲಿ ನಡೆದ ನಾಲ್ಕನೇ BIMSTEC ಶೃಂಗಸಭೆಯ ನಂತರ BIMSTEC ದೇಶಗಳ ಈ ಭೌತಿಕ ಸಭೆ ನಡೆಯುತ್ತಿದೆ. ಐದನೇ ಶೃಂಗಸಭೆಯು ಮಾರ್ಚ್ 2022 ರಲ್ಲಿ ಶ್ರೀಲಂಕಾದ ಕೊಲಂಬೊದಲ್ಲಿ ವರ್ಚುವಲ್ ಆಗಿ ನಡೆಯಿತು. ಪ್ರಾದೇಶಿಕ ಸಹಕಾರ ಮತ್ತು ಪಾಲುದಾರಿಕೆಯನ್ನು ಬಲಪಡಿಸಲು ಭಾರತವು BIMSTEC ನಲ್ಲಿ ಹಲವಾರು ಉಪಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments