ಸಾಂದರ್ಭಿಕ ಚಿತ್ರ  
ದೇಶ

Chhattisgarh: ಸುಕ್ಮಾ ಜಿಲ್ಲೆಯಲ್ಲಿ ಎನ್ ಕೌಂಟರ್; 16 ನಕ್ಸಲೀಯರ ಹತ್ಯೆ, ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯ

ಕೆರ್ಲಾಪಾಲ್ ಪ್ರದೇಶದಲ್ಲಿ ನಕ್ಸಲರ ಇರುವಿಕೆ ಬಗ್ಗೆ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿ ನಿನ್ನೆ ರಾತ್ರಿ ಕಾರ್ಯಾಚರಣೆ ಆರಂಭಿಸಿದ್ದರು.

ಸುಕ್ಮಾ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ 16 ನಕ್ಸಲರು ಮೃತಪಟ್ಟಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಕ್ಸಲರ ವಿರುದ್ಧ ಜಂಟಿ ಕಾರ್ಯಾಚರಣೆಗೆ ಭದ್ರತಾ ಸಿಬ್ಬಂದಿ ಹೊರಟಿದ್ದ ಸಂದರ್ಭದಲ್ಲಿ ಸುಕ್ಮಾ ಜಿಲ್ಲೆಯ ಕೆರ್ಲಾಪಾಲ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದೊಳಗೆ ಬೆಳಗಿನ ಹೊತ್ತು ಗುಂಡಿನ ಚಕಮಕಿ ನಡೆದಿದೆ.

ಕೆರ್ಲಾಪಾಲ್ ಪ್ರದೇಶದಲ್ಲಿ ನಕ್ಸಲರ ಇರುವಿಕೆ ಬಗ್ಗೆ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿ ನಿನ್ನೆ ರಾತ್ರಿ ಕಾರ್ಯಾಚರಣೆ ಆರಂಭಿಸಿದ್ದರು. ಜಿಲ್ಲಾ ಮೀಸಲು ಪಡೆ (DRG) ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಸಿಬ್ಬಂದಿ ಎನ್ ಕೌಂಟರ್ ನಲ್ಲಿ ಭಾಗಿಯಾಗಿದ್ದರು.

ಎನ್‌ಕೌಂಟರ್ ಸ್ಥಳದಿಂದ ಇದುವರೆಗೆ 16 ನಕ್ಸಲರ ಶವಗಳನ್ನು ಹೊರತೆಗೆಯಲಾಗಿದೆ. ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?