ಕುನಾಲ್ ಕಾಮ್ರಾ - ಏಕನಾಥ್ ಶಿಂಧೆ 
ದೇಶ

ಶಿಂಧೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಕಾಮಿಡಿಯನ್ ಕುನಾಲ್ ಕಾಮ್ರಾಗೆ ಮತ್ತಷ್ಟು ಸಂಕಷ್ಟ!

ಮದ್ರಾಸ್ ಹೈಕೋರ್ಟ್ ಶುಕ್ರವಾರ ಕುನಾಲ್ ಕಾಮ್ರಾ ಅವರ ವಿರುದ್ಧ ದಾಖಲಾಗಿರುವ ಹಲವು ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ.

ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಕುನಾಲ್ ಕಾಮ್ರಾ ವಿರುದ್ಧ ಖಾರ್ ಪೊಲೀಸ್ ಠಾಣೆಯಲ್ಲಿ ಮತ್ತೆ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಒಂದು ದೂರು ಜಲಗಾಂವ್ ನಗರದ ಮೇಯರ್ ಸಲ್ಲಿಸಿದ್ದರೆ, ಇನ್ನೆರಡು ದೂರುಗಳು ನಾಸಿಕ್‌ನ ಹೋಟೆಲ್ ಉದ್ಯಮಿ ಮತ್ತು ಮತ್ತೋರ್ವ ಉದ್ಯಮಿ ಸಲ್ಲಿಸಿದ್ದಾರೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಖಾರ್ ಪೊಲೀಸರು ಕಾಮ್ರಾ ಅವರನ್ನು ವಿಚಾರಣೆಗೆ ಎರಡು ಬಾರಿ ಕರೆದಿದ್ದಾರೆ, ಆದರೆ ಅವರು ಇನ್ನೂ ತನಿಖೆಗೆ ಹಾಜರಾಗಿಲ್ಲ.

ಇದಕ್ಕೂ ಮೊದಲು, ಮದ್ರಾಸ್ ಹೈಕೋರ್ಟ್ ಶುಕ್ರವಾರ ಕುನಾಲ್ ಕಾಮ್ರಾ ಅವರ ವಿರುದ್ಧ ದಾಖಲಾಗಿರುವ ಹಲವು ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ. ನ್ಯಾಯಮೂರ್ತಿ ಸುಂದರ್ ಮೋಹನ್ ಅವರು ಷರತ್ತುಗಳೊಂದಿಗೆ ಏಪ್ರಿಲ್ 7 ರವರೆಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿ ಆದೇಶಿಸಿದ್ದಾರೆ.

ಕುನಾಲ್ ಕಾಮ್ರಾ ಅವರು ಇತ್ತೀಚಿನ ತಮ್ಮ ಹೇಳಿಕೆಗಳ ನಂತರ ತಮಗೆ ಅನೇಕ ಬೆದರಿಕೆಗಳು ಬರುತ್ತಿವೆ ಎಂದು ಆರೋಪಿಸಿ, ನಿರೀಕ್ಷಣಾ ಜಾಮೀನು ಕೋರಿ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಗುರುವಾರ ಕುನಾಲ್ ಕಾಮ್ರಾ, ಮುಖ್ಯವಾಹಿನಿಯ ಮಾಧ್ಯಮಗಳನ್ನು ಟೀಕಿಸುತ್ತಾ, ಅವು ಆಡಳಿತ ಪಕ್ಷದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಆರೋಪಿಸಿದರು.

ಕಾಮ್ರಾ ಮಾಧ್ಯಮಗಳನ್ನು 'ರಣಹದ್ದುಗಳು' ಎಂದು ಕರೆದರು ಮತ್ತು ತಪ್ಪು ಮಾಹಿತಿಯನ್ನು ಹರಡುವಲ್ಲಿ ಮತ್ತು ತುರ್ತು ಸಮಸ್ಯೆಗಳಿಂದ ಗಮನವನ್ನು ಬೇರೆಡೆ ಸೆಳೆಯುವಲ್ಲಿ ಮಾಧ್ಯಮಗಳ ಪಾತ್ರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT