ಕುನಾಲ್ ಕಾಮ್ರಾ 
ದೇಶ

ಮುಂಬೈ: ಸೋಮವಾರವೂ ವಿಚಾರಣೆಗೆ ಹಾಜರಾಗದ ಕುನಾಲ್ ಕಾಮ್ರಾ, ನಿವಾಸಕ್ಕೆ ಪೊಲೀಸರ ದೌಡು!

ಇಂದು ಹಗಲಿನ ವೇಳೆ ಅವರು ಪೊಲೀಸರ ಮುಂದೆ ಹಾಜರಾಗಬೇಕಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎರಡನೇ ಬಾರಿಗೆ ಅವರಿಗೆ ಸಮನ್ಸ್ ನೀಡಲಾಗಿತ್ತು.

ಮುಂಬೈ: ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ವಿರುದ್ಧ ಅವಹೇಳನಾಕಾರಿ ಹೇಳಿಕೆಗೆ ಸಂಬಂಧಿಸಿದ ಕೇಸ್ ನಲ್ಲಿ ಸ್ಟ್ಯಾಂಡ್ ಅಪ್ ಕಾಮಿಡಿಯನ್ ಕುನಾಲ್ ಕಾಮ್ರಾ ಸೋಮವಾರವೂ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿಲ್ಲ. ಹೀಗಾಗಿ ಪೊಲೀಸರ ತಂಡವೊಂದನ್ನು ಪರಿಶೀಲಿಸಲು ಅವರ ನಿವಾಸಕ್ಕೆ ತೆರಳಿತು.

ಇಂದು ಹಗಲಿನ ವೇಳೆ ಅವರು ಪೊಲೀಸರ ಮುಂದೆ ಹಾಜರಾಗಬೇಕಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎರಡನೇ ಬಾರಿಗೆ ಅವರಿಗೆ ಸಮನ್ಸ್ ನೀಡಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಕುನಾಲ್ ಕಾಮ್ರಾ ವಿಚಾರಣೆಗೆ ಹಾಜರಾಗುತ್ತಾರೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಲು ಅವರ ಕುಟುಂಬ ನೆಲೆಸಿರುವ ಮಾಹಿಮ್‌ನಲ್ಲಿರುವ ಅವರ ಮನೆಗೆ ಪೊಲೀಸರ ತಂಡವೊಂದು ತೆರಳಿದರು.

ವಿಚಾರಣೆಗೆ ಅವರು ಹಾಜರಾಗದ ಕಾರಣ ಮುಂದಿನ ಕ್ರಮವನ್ನು ಶೀಘ್ರದಲ್ಲೇ ನಿರ್ಧರಿಸಲಾಗುವುದು ಎಂದು ಅಧಿಕಾರಿ ಹೇಳಿದರು. ಕಳೆದ ವಾರ ಅವರ ಹಾಜರಿ ಕೋರಿ ಮೊದಲ ನೋಟೀಸ್ ನೀಡಲಾಗಿತ್ತು. ಕಾಮ್ರಾ ಅವರ ಏಳು ದಿನಗಳ ಕಾಲಾವಕಾಶದ ಕೋರಿಕೆಯನ್ನು ಪೊಲೀಸರು ನಿರಾಕರಿಸಿದ್ದರು.

ಮದ್ರಾಸ್ ಹೈಕೋರ್ಟ್ ಮಾರ್ಚ್ 28 ರಂದು ಕುನಾಲ್ ಕಾಮ್ರಾ ಅವರ ವಿರುದ್ಧ ದಾಖಲಾಗಿರುವ ಹಲವು ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿತ್ತು.

ಬೆದರಿಕೆ ಕರೆ ಹಾಗೂ ಮುಂಬೈ ಪೊಲೀಸರಿಂದ ಬಂಧನದ ಭೀತಿ ಹಿನ್ನೆಲೆಯಲ್ಲಿ ತಮಿಳುನಾಡಿನ ವಿಲ್ಲುಪುರಂ ಪಟ್ಟಣದ ಖಾಯಂ ನಿವಾಸಿಯಾಗಿರುವುದರಿಂದ ತಮ್ಮ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಆಲಿಸುವ ಅಧಿಕಾರ ಮದ್ರಾಸ್ ಹೈಕೋರ್ಟ್ ಗೆ ಇದೆ ಎಂದು ಕಾಮ್ರಾ ಅರ್ಜಿಯಲ್ಲಿ ತಿಳಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್