ಪ್ರಧಾನಿ ಮೋದಿ 
ದೇಶ

ಈ ಹಬ್ಬ ಸಮಾಜದಲ್ಲಿ ಭರವಸೆ, ಸಾಮರಸ್ಯ-ದಯೆಯ ಮನೋಭಾವ ಹೆಚ್ಚಿಸಲಿ: ರಂಜಾನ್ ಶುಭಾಶಯ ಕೋರಿದ ಪ್ರಧಾನಿ ಮೋದಿ

ಈದ್-ಉಲ್-ಫಿತರ್ ಹಬ್ಬದ ಶುಭಾಶಯಗಳು. ಈ ಹಬ್ಬವು ಸಮಾಜದಲ್ಲಿ ಭರವಸೆ, ಸಾಮರಸ್ಯ ಮತ್ತು ದಯೆಯ ಮನೋಭಾವ ಹೆಚ್ಚಿಸಲಿ ಎಂದು ಹಾರೈಸಿದ್ದಾರೆ.

ನವದೆಹಲಿ: ರಂಜಾನ್ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದು, ಈ ಹಬ್ಬವು ಸಮಾಜದಲ್ಲಿ ಭರವಸೆ, ಸಾಮರಸ್ಯ ಮತ್ತು ದಯೆಯ ಮನೋಭಾವ ಹೆಚ್ಚಿಸಲಿ ಎಂದು ಸೋಮವಾರ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಈದ್-ಉಲ್-ಫಿತರ್ ಹಬ್ಬದ ಶುಭಾಶಯಗಳು. ಈ ಹಬ್ಬವು ಸಮಾಜದಲ್ಲಿ ಭರವಸೆ, ಸಾಮರಸ್ಯ ಮತ್ತು ದಯೆಯ ಮನೋಭಾವ ಹೆಚ್ಚಿಸಲಿ ಎಂದು ಹಾರೈಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡ ಜನತೆಗೆ ಈದ್ - ಉಲ್ - ಫಿತರ್ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದು, ಈದ್ ಸಹಾನುಭೂತಿ ಮತ್ತು ದಾನದ ಮನೋಭಾವವನ್ನು ಉತ್ತೇಜಿಸುವ ಸಂದರ್ಭವಾಗಿದೆ. ಈ ಹಬ್ಬವು ಎಲ್ಲರ ಜೀವನದಲ್ಲಿ ಶಾಂತಿ, ಪ್ರಗತಿ ಮತ್ತು ಸಂತೋಷವನ್ನು ತರಲಿ ಮತ್ತು ಸಕಾರಾತ್ಮಕ ಮನೋಭಾವದಿಂದ ಮುನ್ನಡೆಯಲು ನಮಗೆ ಶಕ್ತಿ ನೀಡಲಿ.

ಈದ್-ಉಲ್-ಫಿತರ್​ನ ಶುಭ ಸಂದರ್ಭದಲ್ಲಿ ನಾನು ಭಾರತ ಮತ್ತು ವಿದೇಶಗಳಲ್ಲಿ ವಾಸಿಸುವ ಎಲ್ಲ ಭಾರತೀಯರಿಗೆ, ವಿಶೇಷವಾಗಿ ಮುಸ್ಲಿಂ ಸಹೋದರ ಸಹೋದರಿಯರಿಗೆ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್