ಸಾಂದರ್ಭಿಕ ಚಿತ್ರ 
ದೇಶ

ಕನ್ಯತ್ವ ಪರೀಕ್ಷೆಗೆ ಒಳಗಾಗುವಂತೆ ಮಹಿಳೆಯನ್ನು ಬಲವಂತಪಡಿಸುವುದು ಘನತೆಯ ಹಕ್ಕಿನ ಉಲ್ಲಂಘನೆ: ಛತ್ತೀಸಗಢ ಹೈಕೋರ್ಟ್

ತನ್ನ ಪತಿ ಲೈಂಗಿಕವಾಗಿ ಅಶಕ್ತನಾಗಿದ್ದು ಸಹಜೀವನ ನಡೆಸಲು ನಿರಾಕರಿಸಿದ್ದಾನೆ ಎಂದು ಪತ್ನಿ ಆರೋಪಿಸಿದ್ದರು.

ಬಿಲಾಸ್ಪುರ: ಕನ್ಯತ್ವ ಪರೀಕ್ಷೆಗೆ ಒಳಗಾಗುವಂತೆ ಮಹಿಳೆಯನ್ನು ಬಲವಂತಪಡಿಸುವಂತಿಲ್ಲ. ಇದು ಸಂವಿಧಾನದ 21ನೇ ವಿಧಿಯಡಿ ನೀಡಲಾಗಿರುವ ಘನತೆಯ ಹಕ್ಕಿನ ಉಲ್ಲಂಘನೆ ಎಂದು ಛತ್ತೀಸಗಢ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಕನ್ಯತ್ವ ಪರೀಕ್ಷೆಗೆ ಅನುಮತಿ ನೀಡುವುದು ಮೂಲಭೂತ ಹಕ್ಕುಗಳು ಮತ್ತು ನೈಸರ್ಗಿಕ ನ್ಯಾಯದ ಪ್ರಮುಖ ತತ್ವಗಳಿಗೆ ವಿರುದ್ಧವಾಗಿದೆ ಎಂದು ಹೈಕೋರ್ಟ್ ಹೇಳಿದೆ.

ತನ್ನ ಪತ್ನಿ ಬೇರೊಬ್ಬ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಆರೋಪಿಸಿ ಆಕೆಯನ್ನು ಕನ್ಯತ್ವ ಪರೀಕ್ಷೆಗೆ ಒಳಪಡಿಸುವಂತೆ ಕೋರಿ ವ್ಯಕ್ತಿಯೊಬ್ಬ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಅರವಿಂದ್ ಕುಮಾರ್ ವರ್ಮಾ ಅವರಿದ್ದ ಪೀಠ ವಿಚಾರಣೆ ನಡೆಸಿತು.

ತನ್ನ ಪತಿ ಲೈಂಗಿಕವಾಗಿ ಅಶಕ್ತನಾಗಿದ್ದು ಸಹಜೀವನ ನಡೆಸಲು ನಿರಾಕರಿಸಿದ್ದಾನೆ ಎಂದು ಪತ್ನಿ ಆರೋಪಿಸಿದ್ದರು. ಇದಕ್ಕೆ ಪ್ರತಿಯಾಗಿ ಪತಿ, ಅವಳು (ಪತ್ನಿ) ತನ್ನ ಭಾವನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿಸಿ ಕನ್ಯತ್ವ ಪರೀಕ್ಷೆಗೆ ಒಳಪಡಿಸುವಂತೆ ಕೋರಿದ್ದರು.

ಅರ್ಜಿದಾರರು ತಮ್ಮ ಮೇಲಿನ ಆರೋಪಗಳು ಆಧಾರರಹಿತವೆಂದು ಸಾಬೀತುಪಡಿಸಲು ಬಯಸಿದರೆ, ಅವರು ಸಂಬಂಧಪಟ್ಟ ವೈದ್ಯಕೀಯ ಪರೀಕ್ಷೆಗೆ ಒಳಗಾಗಬಹುದು ಅಥವಾ ಯಾವುದೇ ಇತರ ಸಾಕ್ಷಿಗಳನ್ನು ನೀಡಬಹುದು.

ಆದರೆ ಕನ್ಯತ್ವ ಪರೀಕ್ಷೆಗೆ ಒಳಪಡಿಸುವುದು ಸಂವಿಧಾನಬಾಹಿರವಾಗಿದೆ. ಏಕೆಂದರೆ ಇದು ಸಂವಿಧಾನದ 21ನೇ ವಿಧಿಯಡಿ ನೀಡಲಾಗಿರುವ ಘನತೆಯ ಹಕ್ಕಿನ ಉಲ್ಲಂಘನೆ ಎಂದು ಹೈಕೋರ್ಟ್ ಹೇಳಿದೆ.

ಭಾರತದ ಸಂವಿಧಾನದ 21ನೇ ವಿಧಿಯು ಬದುಕುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯವನ್ನು ಮಾತ್ರವಲ್ಲದೆ ಮಹಿಳೆಯರಿಗೆ ಘನತೆಯಿಂದ ಜೀವನ ನಡೆಸುವ ಹಕ್ಕನ್ನು ಸಹ ಖಾತರಿಪಡಿಸುತ್ತದೆ. ಯಾವುದೇ ಮಹಿಳೆಯನ್ನು ಕನ್ಯತ್ವ ಪರೀಕ್ಷೆಗೆ ಒಳಗಾಗುವಂತೆ ಬಲವಂತಪಡಿಸುವಂತಿಲ್ಲ.

ಸಂವಿಧಾನದ 21ನೇ ವಿಧಿ 'ಮೂಲಭೂತ ಹಕ್ಕುಗಳ ಹೃದಯ' ಎಂಬುದನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು ಎಂದು ನ್ಯಾಯಮೂರ್ತಿ ವರ್ಮಾ ಅವರಿದ್ದ ಪೀಠ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

GBA ಆಯ್ತು.. ಈಗ ಗ್ರೇಟರ್ ಮೈಸೂರು ಸಿಟಿ ಕಾರ್ಪೋರೇಷನ್ ಗೆ ಸಂಪುಟ ಅನುಮೋದನೆ!

'ಮಾತು' ಜಗತ್ತಿಗೆ ಉತ್ತಮವಾಗದ ಹೊರತು ಅದು ಶಕ್ತಿಯಲ್ಲ; ಡಿಕೆಶಿ ಪೋಸ್ಟ್​​ಗೆ CM ಸಿದ್ದರಾಮಯ್ಯ ಕೌಂಟರ್

ಸಂಸತ್ತಿನಲ್ಲಿ 'ವಂದೇ ಮಾತರಂ', 'ಜೈ ಹಿಂದ್' ಘೋಷಣೆಗಳಿಗೆ ಆಕ್ಷೇಪಣೆ ಯಾಕೆ?: ಬಿಜೆಪಿ ಪ್ರಶ್ನಿಸಿದ ಕಾಂಗ್ರೆಸ್

ಯುದ್ಧ ಸಾರಿದ ನ್ಯೂಜಿಲೆಂಡ್, 25 ಲಕ್ಷ Stone Cold Killers ನಿರ್ಮೂಲನೆ ಮಾಡುವ ಶಪಥ!

ಸಿದ್ದರಾಮಯ್ಯ ಹೈಕಮಾಂಡ್ ಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ: CM ಪುತ್ರ ಯತೀಂದ್ರ ಸ್ಫೋಟಕ ಹೇಳಿಕೆ; Video

SCROLL FOR NEXT