ದೇಶ

ಮೇ ತಿಂಗಳಲ್ಲಿ ರಣಬಿಸಿಲಿಗೆ ಉತ್ತರ ಕರ್ನಾಟಕ ಸೇರಿ ಭಾರತ ತತ್ತರ: IMD ಎಚ್ಚರಿಕೆ

ವಾಯುವ್ಯ, ಮಧ್ಯ ಮತ್ತು ಈಶಾನ್ಯ ಭಾರತದ ಕೆಲವು ಪ್ರದೇಶಗಳನ್ನು ಹೊರತುಪಡಿಸಿ, ದೇಶದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.

ನವದೆಹಲಿ: ದೇಶದ ಹಲವು ಭಾಗಗಳಲ್ಲಿ ಮೇ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಶಾಖದ ಅಲೆಗಳು ಕಾಡಲಿವೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ. ಆದಾಗ್ಯೂ, ಕಳೆದ ವರ್ಷ ದಾಖಲಾದ ತೀವ್ರತರವಾದ ಶಾಖವನ್ನು ತಡೆಯಲು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯು ಸಹಾಯ ಮಾಡುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.

IMD ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ಅವರು, ಈ ಮೇ ತಿಂಗಳಲ್ಲಿ ದೇಶದ ಹಲವು ಭಾಗಗಳಲ್ಲಿ, ವಿಶೇಷವಾಗಿ ರಾಜಸ್ಥಾನ, ಹರಿಯಾಣ, ಪಂಜಾಬ್, ಮಧ್ಯಪ್ರದೇಶ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್ ಮತ್ತು ಗಂಗಾನದಿಯ ಪಶ್ಚಿಮ ಬಂಗಾಳದ ಗಂಗಾನದಿ ತೀರ. ಗುಜರಾತ್, ಒಡಿಶಾ, ಛತ್ತೀಸ್‌ಗಢ, ಮಹಾರಾಷ್ಟ್ರ, ಪಕ್ಕದ ತೆಲಂಗಾಣ ಮತ್ತು ಉತ್ತರ ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಉಷ್ಣಗಾಳಿ ಬೀಸಲಿದೆ ಎಂದು ಮುನ್ಸೂಚನೆ ನೀಡಿದೆ.

"ವಾಯುವ್ಯ, ಮಧ್ಯ ಮತ್ತು ಈಶಾನ್ಯ ಭಾರತದ ಕೆಲವು ಪ್ರದೇಶಗಳನ್ನು ಹೊರತುಪಡಿಸಿ, ದೇಶದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಪದೇ ಪದೇ ತೀವ್ರವಾದ ಗುಡುಗು ಸಹಿತ ಮಳೆ ಸಾಧ್ಯತೆ ಇದ್ದು, ಮಳೆ ಪ್ರಮಾಣ ವಾಡಿಕೆಗಿಂತ ಅಧಿಕವಾಗಿರುತ್ತದೆ. 2024ರ ಮೇ ತಿಂಗಳಂತೆ ಈ ಬಾರಿಯೂ ಮಳೆ ಒಂದಷ್ಟು ತಂಪೆರೆಯುವ ಸಾಧ್ಯತೆ ಇದೆ ಎಂದು ಮಹಾಪಾತ್ರ ಹೇಳಿದರು.

ವಿಶೇಷವಾಗಿ ವೃದ್ಧರು, ಮಕ್ಕಳು ಮತ್ತು ಅನಾರೋಗ್ಯಕ್ಕೆ ಸಿಲುಕಿರುವ ಜನರು ಶಾಖದ ಬಳಲಿಕೆ ಮತ್ತು ಶಾಖದ ಹೊಡೆತಕ್ಕೆ ಸಿಲುಕಿ ಬಿಸಿಲ ಸಂಬಂಧಿತ ಕಾಯಿಲೆಗಳಿಗೆ ಹೆಚ್ಚು ಒಳಗಾಗುವ ಅಪಾಯವಿದೆ. ಹೀಗಾಗಿ ವೃದ್ಧರು ಮತ್ತು ಮಕ್ಕಳು ಹೊರಗೆ ಬರದಂತೆ ಸಲಹೆ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!