ಸಂಜಯ್ ರಾವತ್ PTI
ದೇಶ

ಪಹಲ್ಗಾಮ್ ಉಗ್ರ ದಾಳಿಯಿಂದ ಗಮನ ಬೇರೆಡೆ ಸೆಳೆಯಲು ಜಾತಿ ಗಣತಿಗೆ ಕೇಂದ್ರ ನಿರ್ಧಾರ

ಜಾತಿ ಗಣತಿ ನಿರ್ಧಾರದ ಶ್ರೇಯಸ್ಸು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಗೆ ಸಲ್ಲಬೇಕು ಎಂದು ಕಾಂಗ್ರೆಸ್‌ನ ಮಿತ್ರಪಕ್ಷವಾಗಿರುವ ಶಿವಸೇನೆ(UBT) ಸಂಸದ ರಾವತ್ ಹೇಳಿದರು.

ಮುಂಬೈ: ಮುಂದಿನ ಜನಗಣತಿಯೊಂದಿಗೆ ಜಾತಿ ಗಣತಿ ನಡೆಸಲು ನಿರ್ಧರಿಸಿದ ಕೇಂದ್ರ ಈ ಕ್ರಮಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೇ ಕಾರಣ ಎಂದು ಶಿವಸೇನೆ(ಯುಬಿಟಿ)ಸಂಸದ ಸಂಜಯ್ ರಾವತ್ ಗುರುವಾರ ಹೇಳಿದ್ದಾರೆ. ಆದರೆ ಪಹಲ್ಗಾಮ್ ಭಯೋತ್ಪಾದಕ ದಾಳಿಯಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಟೀಕಿಸಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾವತ್, ದಕ್ಷಿಣ ಕಾಶ್ಮೀರದ ಪಹಲ್ಗಾಮ್ ಪಟ್ಟಣದಲ್ಲಿ ಭಯೋತ್ಪಾದಕ ದಾಳಿ ನಡೆದು ಕೇವಲ ಒಂದು ವಾರದಲ್ಲಿಯೇ ಜಾತಿ ಗಣತಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.

ಏಪ್ರಿಲ್ 22 ರ ಹತ್ಯಾಕಾಂಡದ ಬಗ್ಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸಾರ್ವಜನಿಕರಿಂದ ಹಲವು ಪ್ರಶ್ನೆಗಳನ್ನು ಎದುರಿಸುತ್ತಿರುವಾಗ, ಜನರ ಗಮನವನ್ನು ಬೇರೆಡೆ ಸೆಳೆಯಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಾವತ್ ಹೇಳಿದ್ದಾರೆ.

ಜಾತಿ ಗಣತಿಯು ಸಾಮಾಜಿಕ ನ್ಯಾಯಕ್ಕೆ ಸಂಬಂಧಿಸಿದ ವಿಷಯವಾಗಿದೆ ಒತ್ತಿ ಹೇಳಿದ ರಾವತ್, ಕ್ಯಾಬಿನೆಟ್ (CCPA)ಈ ನಿರ್ಧಾರ ತೆಗೆದುಕೊಂಡಿದ್ದರೂ ಈ ವಿಚಾರದಲ್ಲಿ ದೇಶ ಜನ, ದಲಿತರು, ತುಳಿತಕ್ಕೊಳಗಾದ ಮತ್ತು ಹಿಂದುಳಿದ ಸಮಾಜವು ರಾಹುಲ್ ಗಾಂಧಿಯವರಿಗೆ ಮನ್ನಣೆ ನೀಡುತ್ತದೆ" ಎಂದು ಪ್ರತಿಪಾದಿಸಿದರು.

ರಾಹುಲ್ ಗಾಂಧಿಯವರು ಕಳೆದ ಹತ್ತು ವರ್ಷಗಳಿಂದ ಜಾತಿ ಆಧಾರಿತ ಜನಗಣತಿಯ ವಿಷಯವನ್ನು ನಿರಂತರವಾಗಿ ಪ್ರಸ್ತಾಪಿಸುತ್ತಿದ್ದಾರೆ. ಜಾತಿ ಗಣತಿ ನಿರ್ಧಾರದ ಶ್ರೇಯಸ್ಸು ಲೋಕಸಭೆ ಪ್ರತಿಪಕ್ಷ ನಾಯಕನಿಗೆ ಸಲ್ಲಬೇಕು ಎಂದು ಕಾಂಗ್ರೆಸ್‌ನ ಮಿತ್ರಪಕ್ಷವಾಗಿರುವ ಶಿವಸೇನೆ(UBT) ಸಂಸದ ರಾವತ್ ಹೇಳಿದರು.

ಬಿಹಾರ(2025 ರ ಕೊನೆಯಲ್ಲಿ) ಮತ್ತು ಪಶ್ಚಿಮ ಬಂಗಾಳ(2026) ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಾವತ್ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್