ಪ್ರಮೋದ್ ಸಾವಂತ್  
ದೇಶ

ಗೋವಾದ ಲೈರೈ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ: ತನಿಖೆಗೆ ಸಿಎಂ ಪ್ರಮೋದ್ ಸಾವಂತ್ ಆದೇಶ

ಘಟನೆಯ ಕೆಲವು ಗಂಟೆಗಳ ನಂತರ ಶಿರ್ಗಾವೊ ಗ್ರಾಮದ ಶ್ರೀ ಲೈರೈ ದೇವಿ ದೇವಾಲಯದಲ್ಲಿ ಕಾಲ್ತುಳಿತದ ಸ್ಥಳಕ್ಕೆ ಪ್ರಮೋದ್ ಸಾವಂತ್ ಭೇಟಿ ನೀಡಿದರು.

ಉತ್ತರ ಗೋವಾದ ದೇವಾಲಯದಲ್ಲಿ ಇಂದು ಬೆಳಗಿನ ಜಾವ ಆರು ಜನರು ಮೃತಪಟ್ಟ ಕಾಲ್ತುಳಿತ ಪ್ರಕರಣ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿಳಿಸಿದ್ದು, ತನಿಖಾ ವರದಿಯನ್ನು ಬಹಿರಂಗಪಡಿಸಲಾಗುವುದು ಎಂದು ಹೇಳಿದ್ದಾರೆ.

ಘಟನೆಯ ಕೆಲವು ಗಂಟೆಗಳ ನಂತರ ಶಿರ್ಗಾವೊ ಗ್ರಾಮದ ಶ್ರೀ ಲೈರೈ ದೇವಿ ದೇವಾಲಯದಲ್ಲಿ ಕಾಲ್ತುಳಿತದ ಸ್ಥಳಕ್ಕೆ ಪ್ರಮೋದ್ ಸಾವಂತ್ ಭೇಟಿ ನೀಡಿದರು.

ಇಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ದೇವಾಲಯದಲ್ಲಿ ವಾರ್ಷಿಕ ಉತ್ಸವದ ಸಮಯದಲ್ಲಿ ಕಾಲ್ತುಳಿತ ಸಂಭವಿಸಿ ಆರು ಜನರು ಮೃತಪಟ್ಟು ಹಲವಾರು ಜನರು ಗಾಯಗೊಂಡರು.

ಸ್ಥಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಘಟನೆಯ ಬಗ್ಗೆ ವಿವರವಾದ ತನಿಖೆ ನಡೆಸುವಂತೆ ನಾನು ಕೇಳಿದ್ದೇನೆ. ವರದಿಯನ್ನು ಸಾರ್ವಜನಿಕಗೊಳಿಸುತ್ತೇವೆ ಎಂದು ಹೇಳಿದರು.

ಇಂತಹ ಘಟನೆಗಳನ್ನು ತಡೆಗಟ್ಟಲು ರಾಜ್ಯದ ಎಲ್ಲಾ ದೇವಾಲಯ ಉತ್ಸವಗಳಿಗೆ ಭವಿಷ್ಯದಲ್ಲಿ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು. ಕಾಲ್ತುಳಿತದ ಬಗ್ಗೆ ತಿಳಿದ ನಂತರ ಬೆಳಿಗ್ಗೆ ಮಾಪುಸಾ ಪಟ್ಟಣದ ಉತ್ತರ ಗೋವಾ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ್ದಾಗಿ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಕರೆ ಮಾಡಿ ತಮ್ಮ ಸಂಪೂರ್ಣ ಸಹಾಯ ನೀಡುವುದಾಗಿ ಹೇಳಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT