ಭಾರತೀಯ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ (ಎಡ) ಮತ್ತು ಪಾಕಿಸ್ತಾನಿ ರೇಂಜರ್‌ಗಳು (ಬಲ) ವಾಘಾ ಗಡಿಯಲ್ಲಿ ಪಾಕಿಸ್ತಾನಿ ಟ್ರಕ್ ಅನ್ನು ಭಾರತಕ್ಕೆ ದಾಟಲು ಅನುಮತಿ ನೀಡಿದ ದೃಶ್ಯ. File Photo | AFP
ದೇಶ

ತಕ್ಷಣದಿಂದ ಜಾರಿಗೆ ಬರುವಂತೆ ಪಾಕಿಸ್ತಾನದಿಂದ ನೇರ ಮತ್ತು ಪರೋಕ್ಷ ಆಮದು ನಿಷೇಧ: ಕೇಂದ್ರ ಸರ್ಕಾರ ಅಧಿಸೂಚನೆ

ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ನೀತಿಯ ಹಿತಾಸಕ್ತಿಯಲ್ಲಿ ಈ ನಿರ್ಬಂಧವನ್ನು ವಿಧಿಸಲಾಗಿದೆ ಎಂದು ವಿದೇಶಿ ವ್ಯಾಪಾರ ನಿರ್ದೇಶನಾಲಯ (DGFT) ಅಧಿಸೂಚನೆಯಲ್ಲಿ ತಿಳಿಸಿದೆ.

ನವದೆಹಲಿ: ಪಹಲ್ಗಾಮ್ ದಾಳಿ ನಂತರ ಪಾಕಿಸ್ತಾನ ವಿರುದ್ಧ ಮತ್ತಷ್ಟು ಕಠಿಣ ಕ್ರಮ ತೆಗೆದುಕೊಂಡಿರುವ ಭಾರತ ಸರ್ಕಾರ, ಪಾಕಿಸ್ತಾನದಿಂದ ಎಲ್ಲಾ ಸರಕುಗಳ ನೇರ ಅಥವಾ ಪರೋಕ್ಷ ಆಮದನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿದೆ.

ವಾಣಿಜ್ಯ ಸಚಿವಾಲಯದಿಂದ ಹೊರಡಿಸಿರುವ ಅಧಿಸೂಚನೆಯಂತೆ ವಿದೇಶಿ ವ್ಯಾಪಾರ ನೀತಿ (FTP) 2023 ರ ಪ್ರಕಾರ, ಮುಂದಿನ ಆದೇಶಗಳವರೆಗೆ ಪಾಕಿಸ್ತಾನದಿಂದ ಬರುವ ಅಥವಾ ರಫ್ತು ಮಾಡುವ ಎಲ್ಲಾ ಸರಕುಗಳ ನೇರ ಅಥವಾ ಪರೋಕ್ಷ ಆಮದು ಅಥವಾ ಸಾಗಣೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲು ಕ್ರಮ ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಒಂದು ನಿಬಂಧನೆಯನ್ನು ಸೇರಿಸಲಾಗಿದೆ ಎಂದು ಮೇ 2 ರ ಅಧಿಸೂಚನೆಯಲ್ಲಿ ತಿಳಿಸಿದೆ.

ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ನೀತಿಯ ಹಿತಾಸಕ್ತಿಯಲ್ಲಿ ಈ ನಿರ್ಬಂಧವನ್ನು ವಿಧಿಸಲಾಗಿದೆ ಎಂದು ವಿದೇಶಿ ವ್ಯಾಪಾರ ನಿರ್ದೇಶನಾಲಯ (DGFT) ಅಧಿಸೂಚನೆಯಲ್ಲಿ ತಿಳಿಸಿದೆ. ಈ ನಿಷೇಧಕ್ಕೆ ಯಾವುದೇ ವಿನಾಯಿತಿ ಬೇಕೆಂದರೆ ಭಾರತ ಸರ್ಕಾರದ ಅನುಮೋದನೆಯ ಅಗತ್ಯವಿರುತ್ತದೆ.

ವಿದೇಶಿ ವ್ಯಾಪಾರ ನೀತಿಯಡಿ "ಪಾಕಿಸ್ತಾನದಿಂದ ಆಮದು ನಿಷೇಧ" ಎಂಬ ಶೀರ್ಷಿಕೆಯೊಂದಿಗೆ ನಿಬಂಧನೆಗಳ ಬಗ್ಗೆ ಹೀಗೆ ಹೇಳಲಾಗಿದೆ. ಪಾಕಿಸ್ತಾನದಿಂದ ಬರುವ ಎಲ್ಲಾ ಸರಕುಗಳ ನೇರ ಅಥವಾ ಪರೋಕ್ಷ ಆಮದು ಅಥವಾ ಸಾಗಣೆಯನ್ನು, ಮುಂದಿನ ಆದೇಶದವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗುತ್ತದೆ ಎಂದು ಹೇಳಲಾಗಿದೆ.

ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ, ಪಹಲ್ಗಾಮ್ ದಾಳಿಯಲ್ಲಿ ಹೆಚ್ಚಿನ ಪ್ರವಾಸಿಗರು ಸೇರಿದಂತೆ 26 ಮಂದಿ ಮೃತಪಟ್ಟಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT