ಬಾಬಾ ರಾಮ್ ದೇವ್  
ದೇಶ

ಮತ್ತೆಂದೂ ಹೀಗೆ ಮಾಡೋಲ್ಲ: 'ಶರ್ಬತ್ ಜಿಹಾದ್' ಹೇಳಿಕೆ ಸಂಬಂಧ ಹೈಕೋರ್ಟ್‌ಗೆ ಬಾಬಾ ರಾಮದೇವ್ ಭರವಸೆ

ವಿವಾದಾತ್ಮಕ ಹೇಳಿಕೆಗಳಿಗೆ ಸಂಬಂಧಿಸಿದಂತೆ ರಾಮ್‌ದೇವ್ ಮತ್ತು ಅವರ ಪತಂಜಲಿ ಸಂಸ್ಥೆಯ ವಿರುದ್ಧ ಹಮ್‌ದರ್ದ್‌ ನ್ಯಾಷನಲ್‌ ಫೌಂಡೇಷನ್‌ ಆಫ್‌ ಇಂಡಿಯಾ ಕೋರ್ಟ್‌ ಮೇಟ್ಟಿಲೇರಿದೆ.

ನವದೆಹಲಿ: ಹಮ್‌ದರ್ದ್‌ ಸಂಸ್ಥೆಯ ವಿರುದ್ಧ ಆಕ್ಷೇಪಾರ್ಹ, ನಿಂದನಾತ್ಮಕ ಹೇಳಿಕೆ ನೀಡುವುದಿಲ್ಲ ಅಥವಾ ಸಾಮಾಜಿಕ ಮಾಧ್ಯಮದಲ್ಲಿ ಅಂಥ ಯಾವುದೇ ಪೋಸ್ಟ್‌ ಹಾಕುವುದಿಲ್ಲ, ಈ ರೀತಿ ಪುನಾರವರ್ತನೆ ಮಾಡುವುದಿಲ್ಲ ಎಂದು ಯೋಗಗುರು ರಾಮ್‌ದೇವ್‌ ಶುಕ್ರವಾರ ದೆಹಲಿ ಹೈಕೋರ್ಟ್‌ಗೆ ಭರವಸೆ ನೀಡಿದ್ದಾರೆ.

ನ್ಯಾಯಮೂರ್ತಿ ಅಮೃತ್‌ ಬನ್ಸಾಲ್ ಅವರು, ಈ ಕುರಿತು ಪ್ರಮಾಣ ಪತ್ರ ಸಲ್ಲಿಸುವಂತೆ ರಾಮ್‌ದೇವ್‌ ಪರ ವಕೀಲರಿಗೆ ತಿಳಿಸಿದರು. ಇದಕ್ಕೂ ಮೊದಲು ಮೇ 1ರಂದು ಅವರು, ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿದ್ದ ವಿವಾದಾತ್ಮಕ ಅಂಶವನ್ನು ಅಳಿಸಿಹಾಕುವಂತೆ ಸೂಚಿಸಿ ಅರ್ಜಿಯ ವಿಚಾರಣೆಯನ್ನು ಮೇ 9ಕ್ಕೆ ಮುಂದೂಡಿದರು.

ವಿವಾದಾತ್ಮಕ ಹೇಳಿಕೆಗಳಿಗೆ ಸಂಬಂಧಿಸಿದಂತೆ ರಾಮ್‌ದೇವ್ ಮತ್ತು ಅವರ ಪತಂಜಲಿ ಸಂಸ್ಥೆಯ ವಿರುದ್ಧ ಹಮ್‌ದರ್ದ್‌ ನ್ಯಾಷನಲ್‌ ಫೌಂಡೇಷನ್‌ ಆಫ್‌ ಇಂಡಿಯಾ ಕೋರ್ಟ್‌ ಮೇಟ್ಟಿಲೇರಿದೆ.

ಪತಂಜಲಿಯ ‘ಗುಲಾಬ್‌ ಶರ್ಬತ್‌’ ಜಾಹೀರಾತಿನಲ್ಲಿ, ಹಮ್‌ದರ್ದ್‌ ರೂಹ್‌ ಅಫ್ಜಾದಿಂದ ಸಂಪಾದಿಸಿದ ಹಣದಲ್ಲಿ ಮದರಸಾ ಮತ್ತು ಮಸೀದಿಗಳನ್ನು ನಿರ್ಮಿಸಲಾಗುತ್ತಿದೆ ಎಂಬುದಾಗಿ ಆರೋಪಿಸಲಾಗಿದೆ ಎಂದು ಹರ್ಮದ್‌ ಸಂಸ್ಥೆ ಆರೋಪಿಸಿದೆ. ರಾಮದೇವ್ ಅವರ ವಕೀಲರು ತಮ್ಮ ಕಕ್ಷಿದಾರರಿಗೆ "ನ್ಯಾಯಾಲಯದ ಬಗ್ಗೆ ಅಪಾರ ಗೌರವವಿದೆ" ಮತ್ತು ಅದರ ನಿರ್ದೇಶನಗಳನ್ನು ಪಾಲಿಸಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ