ಇಸ್ರೇಲ್ ವಿಮಾನ ನಿಲ್ದಾಣದಲ್ಲಿ ಕ್ಷಿಪಣಿ ದಾಳಿ Reuters
ದೇಶ

ಇಸ್ರೇಲ್ ನಲ್ಲಿ ಮತ್ತೆ Houthi ಉಗ್ರರ ಅಟ್ಟಹಾಸ: ವಿಮಾನ ನಿಲ್ದಾಣದಲ್ಲಿ Missile Strike; ಮೇ 6ರ ವರೆಗೆ Air India ವಿಮಾನಯಾನ ಬಂದ್

ಯೆಮೆನ್‌ನಿಂದ ಹಾರಿಸಲಾದ ಕ್ಷಿಪಣಿ ಬೆನ್ ಗುರಿಯನ್ ವಿಮಾನ ನಿಲ್ದಾಣದ ಮುಖ್ಯ ಟರ್ಮಿನಲ್ ಬಳಿ ಬಿದ್ದಿದ್ದು, ಈ ದಾಳಿಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.

ನವದೆಹಲಿ: ಇಸ್ರೇಲ್ ನಲ್ಲಿ ಮತ್ತೆ ಹೌತಿ ಬಂಡುಕೋರರ ಅಟ್ಟಹಾಸ ಮೆರೆದಿದ್ದು ಇಸ್ರೇಲ್ ನ ಬೆನ್ ಗುರಿಯನ್ ವಿಮಾನ ನಿಲ್ದಾಣದಲ್ಲಿ ಕ್ಷಿಪಣಿ ದಾಳಿ ನಡೆಸಿದ್ದಾರೆ. ಪರಿಣಾಮ ಭಾರತ ಮೇ 6ರ ವರೆಗೆ Air India ವಿಮಾನಯಾನ ಬಂದ್ ಮಾಡಿದೆ.

ಇಸ್ರೇಲ್ ನ ಬೆನ್ ಗುರಿಯನ್ ವಿಮಾನ ನಿಲ್ದಾಣದಲ್ಲಿಂದು ಬೆಳಗ್ಗೆ ಹೌತಿ ಬಂಡುಕೋರರು ಕ್ಷಿಪಣಿ ದಾಳಿ (Missile Attack) ನಡೆಸಿದೆ. ಯೆಮೆನ್‌ನಿಂದ ಹಾರಿಸಲಾದ ಕ್ಷಿಪಣಿ ಬೆನ್ ಗುರಿಯನ್ ವಿಮಾನ ನಿಲ್ದಾಣದ ಮುಖ್ಯ ಟರ್ಮಿನಲ್ ಬಳಿ ಬಿದ್ದಿದ್ದು, ಈ ದಾಳಿಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.

ಕ್ಷಿಪಣಿ ದಾಳಿಯು ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತು. ನಂತರ ಕಾರ್ಯಾಚರಣೆಗಳು ಪುನರಾರಂಭಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೌತಿ ಮಿಲಿಟರಿ ವಕ್ತಾರ ಯಾಹ್ಯಾ ಸಾರಿ ಬೆನ್ ಗುರಿಯನ್ ವಿಮಾನ ನಿಲ್ದಾಣವು "ಇನ್ನು ಮುಂದೆ ವಿಮಾನ ಪ್ರಯಾಣಕ್ಕೆ ಸುರಕ್ಷಿತವಲ್ಲ" ಎಂದು ಹೇಳಿದರು. ಇಸ್ರೇಲ್‌ನ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಬಲವಾದ ಪ್ರತಿಕ್ರಿಯೆಯನ್ನು ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ವೇಳೆ "ನಮಗೆ ಯಾರಾದರೂ ಹೊಡೆದರೆ, ನಾವು ಅವರಿಗೆ ಏಳು ಪಟ್ಟು ಹೆಚ್ಚು ಹೊಡೆಯುತ್ತೇವೆ" ಎಂದು ಅವರು ಎಚ್ಚರಿಕೆ ನೀಡಿದರು.

ಇದೇ ವೇಳೆ ಕ್ಷಿಪಣಿಗಳು ಮತ್ತು ಡ್ರೋನ್ ದಾಳಿಗಳಿಂದ ಇಸ್ರೇಲ್ ಅನ್ನು ಗುರಿಯಾಗಿಸಿಕೊಂಡಿರುವ ಇರಾನ್ ಬೆಂಬಲಿತ ಹೌತಿ ಬಂಡುಕೋರರು, ನಾವು ಪ್ಯಾಲೆಸ್ಟೀನಿಯನ್ನರ ಜೊತೆಗಿದ್ದೇವೆ ಎಂದು ಹೇಳಿದ್ದಾರೆ.

ಮೇ 6ರ ವರೆಗೆ Air India ವಿಮಾನಯಾನ ಬಂದ್

ಪರಿಣಾಮ ಏರ್ ಇಂಡಿಯಾ ಸಂಸ್ಥೆಯು ಮುಂದಿನ 2 ದಿನಗಳ ಕಾಲ ಇಸ್ರೇಲ್ ರಾಜಧಾನಿ ಟೆಲ್ ಅವಿವ್‌ಗೆ ವಿಮಾನಯಾನವನ್ನ ಸ್ಥಗಿತಗೊಳಿಸಿದೆ. ಕ್ಷಿಪಣಿ ದಾಳಿಯ ಕುರಿತು ಲಭ್ಯವಾಗುತ್ತಿದ್ದಂತೆ ದೆಹಲಿಯಿಂದ ಟೆಲ್ ಅವಿವ್‌ಗೆ ಹೋಗುತ್ತಿದ್ದ ವಿಮಾನವನ್ನು ಅಬುಧಾಬಿಗೆ ತಿರುಗಿಸಲಾಯಿತು ಎಂದು ವಿಮಾನಯಾನ ಸಂಸ್ಥೆ ತಿಳಿಸಿವೆ.

ಇಸ್ರೇಲ್‌ಗೆ ಟಿಕೆಟ್ ಹೊಂದಿರುವವರಿಗೆ ವಿನಾಯಿತಿ ಅಥವಾ ವಿಮಾನಯಾನದ ಮರು ವೇಳಾಪಟ್ಟಿಯನ್ನು ನೀಡಲಾಗುವುದು ಎಂದು ಏರ್ ಇಂಡಿಯಾ ಮಾಹಿತಿ ನೀಡಿದೆ. ಏರ್ ಇಂಡಿಯಾದಲ್ಲಿ, ಗ್ರಾಹಕರು ಮತ್ತು ಸಿಬ್ಬಂದಿಯ ಸುರಕ್ಷತೆಗೆ ಪ್ರಮುಖ ಆದ್ಯತೆ ನೀಡಲಾಗುತ್ತದೆ. ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯ ಸಲುವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಏರ್ ಇಂಡಿಯಾ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT