ಕಂದಕಕ್ಕೆ ಉರುಳಿಬಿದ್ದು ನಜ್ಜುಗುಜ್ಜಾದ ಸೇನಾ ವಾಹನ 
ದೇಶ

ಜಮ್ಮು ಮತ್ತು ಕಾಶ್ಮೀರ: ಕಂದಕಕ್ಕೆ ಸೇನಾ ವಾಹನ ಉರುಳಿ ಬಿದ್ದು ಮೂವರು ಸೈನಿಕರು ಸಾವು

ಸೇನೆ, ಪೊಲೀಸರು, ಎಸ್‌ಡಿಆರ್‌ಎಫ್ ಮತ್ತು ಸ್ಥಳೀಯರು ಜಂಟಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿದ್ದಾರೆ.

ರಾಂಬನ್/ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಭಾನುವಾರ ಸೇನಾ ವಾಹನವೊಂದು 700 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಸೇನಾ ಸಿಬ್ಬಂದಿ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಜಮ್ಮುವಿನಿಂದ ಶ್ರೀನಗರಕ್ಕೆ ತೆರಳುತ್ತಿದ್ದ ಬೆಂಗಾವಲು ಪಡೆಯ ಭಾಗವಾಗಿದ್ದ ಸೇನಾ ಟ್ರಕ್, ಬ್ಯಾಟರಿ ಚಶ್ಮಾ ಬಳಿ ಬೆಳಿಗ್ಗೆ 11.30ರ ಸುಮಾರಿಗೆ ಕಂದಕಕ್ಕೆ ಉರುಳಿ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೇನೆ, ಪೊಲೀಸರು, ಎಸ್‌ಡಿಆರ್‌ಎಫ್ ಮತ್ತು ಸ್ಥಳೀಯರು ಜಂಟಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿದ್ದು, ವಾಹನದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸೈನಿಕರು ಸ್ಥಳದಲ್ಲೇ ಮೃತಪಟ್ಟಿರುವುದು ಕಂಡುಬಂದಿದೆ ಎಂದು ಅವರು ಹೇಳಿದರು.

ಮೃತರನ್ನು ಅಮಿತ್ ಕುಮಾರ್, ಸುಜೀತ್ ಕುಮಾರ್ ಮತ್ತು ಮನ್ ಬಹದ್ದೂರ್ ಎಂದು ಗುರುತಿಸಲಾಗಿದ್ದು, ಅವರ ಮೃತದೇಹಗಳನ್ನು ಕಂದಕದಿಂದ ಹೊರತೆಗೆಯಲಾಗುತ್ತಿದೆ. ಅಪಘಾತದಿಂದಾಗಿ ವಾಹನವು ನಜ್ಜುಗುಜ್ಜಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!