ವಾಯುಸೇನೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎ.ಪಿ. ಅಮರ್ ಪ್ರೀತ್ ಸಿಂಗ್  
ದೇಶ

Pahalgam terror attack: ಇಂಡೋ-ಪಾಕ್ ಉದ್ವಿಗ್ನತೆ; ಪ್ರಧಾನಿ ಮೋದಿ ಭೇಟಿಯಾದ ವಾಯುಸೇನೆ ಮುಖ್ಯಸ್ಥ

ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ಅವರು ಶನಿವಾರ ಪ್ರಧಾನಿ ಮೋದಿ ಅವರನ್ನು ರಾಷ್ಟ್ರ ರಾಜಧಾನಿ ನವದೆಹಲಿಯ ಲೋಕ ಕಲ್ಯಾಣ್ ಮಾರ್ಗದ ನಿವಾಸದಲ್ಲಿ ಭೇಟಿಯಾಗಿದ್ದರು.

ನವದೆಹಲಿ: ಪಹಲ್ಗಾಮ್ ಉಗ್ರರ ದಾಳಿ ಬೆನ್ನಲ್ಲೇ ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚಾಗಿದ್ದು, ಇದರ ನಡುವಲ್ಲೇ ವಾಯುಸೇನೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎ.ಪಿ. ಅಮರ್ ಪ್ರೀತ್ ಸಿಂಗ್ ಅವರು ಭಾನುವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ಅವರು ಶನಿವಾರ ಪ್ರಧಾನಿ ಮೋದಿ ಅವರನ್ನು ರಾಷ್ಟ್ರ ರಾಜಧಾನಿ ನವದೆಹಲಿಯ ಲೋಕ ಕಲ್ಯಾಣ್ ಮಾರ್ಗದ ನಿವಾಸದಲ್ಲಿ ಭೇಟಿಯಾಗಿದ್ದರು. ಇದರ ಬೆನ್ನಲ್ಲೇ ವಾಯುಸೇನೆ ಮುಖ್ಯಸ್ಥರು ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿದ್ದಾರೆ.

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಸಾವಿಗೀಡಾಗಿದ್ದು, ಈ ಘಟನೆಗೆ ಭಾರತವನ್ನು ಕೆರಳುವಂತೆ ಮಾಡಿದೆ.

ಉಗ್ರರ ದಾಳಿಯನ್ನು ಗಂಭೀರವಾಗಿ ಪರಿಗಣಿಸಿರುವ ಭಾರತ ಸರ್ಕಾರ ದಾಳಿ ನಡೆದ ಮರುದಿನವೇ ಸಂಪುಟ ಸಮಿತಿಯ (ಸಿಸಿಎಸ್‌) ಸಭೆಯ ನಡೆಸಿತ್ತು.

ಉಗ್ರ ದಾಳಿಗೆ ಬಲವಾಗಿ ಪ್ರತಿಕ್ರಿಯಿಸಲು ತಂತ್ರ, ಗುರಿಗಳು ಮತ್ತು ಸಮಯವನ್ನು ನಿರ್ಧರಿಸಲು ಸರ್ಕಾರವು ಈ ಸಭೆ ನಡೆಸಿದ್ದು, ಸಭೆಯಲ್ಲಿ ಸಶಸ್ತ್ರ ಪಡೆಗಳಿಗೆ ಸಂಪೂರ್ಣ ಕಾರ್ಯಾಚರಣೆಯ ಪರಮಾಧಿಕಾರವನ್ನು ನೀಡಿತ್ತು.

ಭಯೋತ್ಪಾದಕ ದಾಳಿಯ ರೂವಾರಿಗಳ ವಿರುದ್ಧ ಸರ್ಕಾರವು ತೆಗೆದುಕೊಳ್ಳುವ ಯಾವುದೇ ಕ್ರಮಕ್ಕೆ ಸಂಪೂರ್ಣ ಬೆಂಬಲ ನೀಡುತ್ತೇವೆಂದು ವಿರೋಧ ಪಕ್ಷಗಳು ತಿಳಿಸಿದ್ದವು.

ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆಗಳು ಯಶಸ್ವಿಯಾಗಿ ನಡೆದ ನಂತರ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿ ಕಾರ್ಯಗಳು ಉತ್ತಮವಾದ ಹಿನ್ನೆಲೆಯಲ್ಲಿ ಉಗ್ರರ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT